2023-24ನೇ ಸಾಲಿಗೆ ಪರಿಶಿಷ್ಟ ಜಾತಿಯ ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಬೆಳಗಾವಿ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
- ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು
- ಅರ್ಜಿ ಸಲ್ಲಿಸಲು ಡಿಸೆಂಬರ್ 6, 2023 ಕೊನೆಯ ದಿನವಾಗಿದೆ
- ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು
ಬೆಳಗಾವಿ: 2023-24ನೇ ಸಾಲಿಗೆ ಪರಿಶಿಷ್ಟ ಜಾತಿಯ ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಬೆಳಗಾವಿ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 35 ವರ್ಷದೊಳಗಿನ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.
ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ತರಬೇತಿಯ ಅವಧಿ ವೇಳೆ ಮಾಹೆಯಾನ 15,000 ರೂ.ಗಳ ಸ್ಟೈಫಂಡ್ ನೀಡಲಾಗುವುದು. ಈ ತರಬೇತಿಯು 12 ತಿಂಗಳ ಅಪ್ರೆಂಟಿಸ್ ತರಬೇತಿಯಾಗಿದ್ದು, ತಾತ್ಕಾಲಿಕವಾಗಿರುತ್ತದೆ.ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ಅರ್ಜಿ ಸಲ್ಲಿಸಲು ಡಿಸೆಂಬರ್ 6, 2023 ಕೊನೆಯ ದಿನವಾಗಿದೆ. ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.ಆಯ್ಕೆಯಾದ ಅಭ್ಯರ್ಥಿಗಳು ಸಂದರ್ಶನದ ವೇಳೆ ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ತರಬೇತಿಗೆ ಹಾಜರಾಗುವ ಸಂದರ್ಭದಲ್ಲಿ ಮೂಲ ದಾಖಲಾತಿಗಳನ್ನು ಜಿಲ್ಲಾ ವಾರ್ತಾಧಿಕಾರಿಗಳಿಗೆ ಸಲ್ಲಿಸಬೇಕು.
ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ ಹಾಗೂ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು. ಈ ಮೇಲ್ಕಂಡ ಷರತ್ತುಗಳನ್ನು ಪಾಲಿಸುವುದಾಗಿ ಆಯ್ಕೆಯಾದ ಅಭ್ಯರ್ಥಿಗಳು 20 ರೂ.ಗಳ ಛಾಪಾ ಕಾಗದದಲ್ಲಿ ಲಿಖಿತ ಹೇಳಿಕೆ ನೀಡಬೇಕು.
ಆಸಕ್ತರು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, “ವಾರ್ತಾಭವನ”, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನ್ಯಾಯಾಲಯ ಆವರಣ, ಬೆಳಗಾವಿ ಅಥವಾ ಮೊಸಂ.9448589639 ಸಂಪರ್ಕಿಸಬಹುದು ಎಂದು ವಾರ್ತಾ ಇಲಾಖೆಯ ಉಪ ನಿರ್ದೇಶಕರಾದ ಗುರುನಾಥ ಕಡಬೂರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group : https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharechat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1