ಜೆ ಸಿ ಆರ್ ಬಡಾವಣೆಯ ಸರ್ಕಾರಿ ಶಾಲೆಯ ಮಕ್ಕಳಿಗೆ ದಂತ ತಪಾಸಣಾ ಶಿಬಿರ.

ಚಿತ್ರದುರ್ಗ ಆ. ೦4

ವರದಿ ಮತ್ತು ಪೋಟೋ ಸುರೇಶ್ ಪಟ್ಟಣ್


ಚಿತ್ರದುರ್ಗ ನಗರದ ಜೆಸಿಆರ್ ಬಡಾವಣೆಯಲ್ಲಿನ ಸರ್ಕಾರಿ ಮಾದರಿ ಹಿರಿಯ ಫ್ರೌಢಶಾಲೆಯಲ್ಲಿ ರೋಟರಿ ಕ್ಲಬ್‌ವತಿಯಿಂದ ಶಾಲೆಯಲ್ಲಿನ ಮಕ್ಕಳಿಗೆ ದಂತ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಶಿಬಿರದಲ್ಲಿ ಶಾಲೆಯಲ್ಲಿನ 150 ಮಕ್ಕಳ ದಂತವನ್ನು ತಪಾಸಣೆಯನ್ನು ಡಾ. ಜಯಚಂದ್ರ ಮತ್ತು ತಂಡ ನಡೆಸಿಕೊಟ್ಟರು, ಈ ಸಮಯದಲ್ಲಿ ಮಕ್ಕಳಿಗೆ ನೀಡಲಾದ ಚೀಟಿಯನ್ನು ನಗರದ ಎಸ್.ಜೆ.ಎಂ. ದಂತ ಮಹಾ ವಿದ್ಯಾಲಯಕ್ಕ ಭೇಟಿ ನೀಡುವುದರ ಮೂಲಕ ಉಚಿತವಾಗಿ ಚಿಕಿತ್ಸೆಯನ್ನು ಪಡೆಯಲು ಅವಕಾಶವನ್ನು ಕಲ್ಪಿಸಲಾಗಿದೆ. 
ಈ ಸಂದರ್ಭದಲ್ಲಿ ರೋಟರಿ ಕ್ಲಬ್‌ನ ಎಸ್.ವಿರೇಶ್, ವೀರಭದ್ರಸ್ವಾಮಿ, ವೆಂಕಟೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು. 

Views: 10

Leave a Reply

Your email address will not be published. Required fields are marked *