Skip to content
  • Monday, March 23, 2026
  • ABOUT US
  • CONTACT US
  • Privacy Policy

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Privacy Policy
  • Horoscope
  • Home
  • Sports
  • Dinesh Karthik: ಐಪಿಎಲ್ ಮುಗೀತು…ಮತ್ತೆ ಕಾಮೆಂಟೇಟರ್ ಆದ ದಿನೇಶ್ ಕಾರ್ತಿಕ್
Sports

Dinesh Karthik: ಐಪಿಎಲ್ ಮುಗೀತು…ಮತ್ತೆ ಕಾಮೆಂಟೇಟರ್ ಆದ ದಿನೇಶ್ ಕಾರ್ತಿಕ್

May 31, 2023
samagrasuddi

IPL 2023: ಐಪಿಎಲ್​ ಸೀಸನ್ 16 ಮುಕ್ತಾಯವಾಗಿದೆ. ಬಹುತೇಕ ಆಟಗಾರರು ತಮ್ಮ ರಾಷ್ಟ್ರೀಯ ತಂಡದ ಪರ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಇತ್ತ ಟೀಮ್ ಇಂಡಿಯಾ ಆಟಗಾರರು ಕೂಡ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗಾಗಿ ಭರ್ಜರಿ ತಯಾರಿಯಲ್ಲಿದ್ದಾರೆ.ಇದರ ನಡುವೆ ದಿನೇಶ್ ಕಾರ್ತಿಕ್ ಕೂಡ ಮತ್ತೆ ಕ್ರಿಕೆಟ್ ಲೋಕಕ್ಕೆ ಮರಳಿದ್ದಾರೆ. ಆದರೆ ಈ ಬಾರಿ ಆಟಗಾರನಾಗಿ ಅಲ್ಲ. ಬದಲಾಗಿ ಕಾಮೆಂಟೇಟರ್ ಆಗಿ ಎಂಬುದು ವಿಶೇಷ.ಹೌದು, ಸ್ಪರ್ಧಾತ್ಮಕ ಕ್ರಿಕೆಟ್​ನಿಂದ ದೂರ ಉಳಿದಿರುವ ದಿನೇಶ್ ಕಾರ್ತಿಕ್ ಮತ್ತೆ ಕಾಮೆಂಟ್ರಿ ಮಾಡಲು ಸಜ್ಜಾಗಿದ್ದಾರೆ. ಅದು ಕೂಡ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್ ಪಂದ್ಯಕ್ಕಾಗಿ ಎಂಬುದು ವಿಶೇಷ.ಈ ಹಿಂದೆಯೇ ಕಾಮೆಂಟೇಟರ್ ಆಗಿ ವೃತ್ತಿ ಜೀವನ ಆರಂಭಿಸಿದ್ದ ಡಿಕೆ ಐಪಿಎಲ್​ನಲ್ಲಿ ಮುಂದುವರೆದಿದ್ದರು. ಅದರಂತೆ ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಪರ 13 ಇನಿಂಗ್ಸ್​ಗಳಲ್ಲಿ ಬ್ಯಾಟಿಂಗ್ ಮಾಡಿರುವ ದಿನೇಶ್ ಕಾರ್ತಿಕ್ ಕಲೆಹಾಕಿರುವುದು ಕೇವಲ 140 ರನ್ ಮಾತ್ರ. ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದ್ದ ಕಾರಣ, ನೀವು ಫುಲ್ ಟೈಮ್ ಕಾಮೆಂಟೇಟರ್ ಆಗುವುದು ಉತ್ತಮ ಎಂದು ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಐಪಿಎಲ್ ಮುಕ್ತಾಯದ ಬೆನ್ನಲ್ಲೇ ಡಿಕೆ ವೀಕ್ಷಕ ವಿವರಣೆಗಾರನಾಗಿ ಮತ್ತೆ ಕಾಣಿಸಿಕೊಳ್ಳಲು ಮುಂದಾಗಿದ್ದಾರೆ.ಸದ್ಯ ಸ್ಪರ್ಧಾತ್ಮಕ ಕ್ರಿಕೆಟ್​ನಿಂದ ದೂರವೇ ಉಳಿದಿರುವ 37 ವರ್ಷದ ದಿನೇಶ್ ಕಾರ್ತಿಕ್ ಅವರನ್ನು ಆರ್​ಸಿಬಿ ಫ್ರಾಂಚೈಸಿ ಮುಂದಿನ ಸೀಸನ್​ಗಾಗಿ ತಂಡದಲ್ಲೇ ಉಳಿಸಿಕೊಳ್ಳಲಿದೆಯಾ ಎಂಬುದೇ ಈಗ ದೊಡ್ಡ ಪ್ರಶ್ನೆ.ಅಂದಹಾಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯವು ಜೂನ್ 7 ರಿಂದ ಶುರುವಾಗಲಿದೆ. ಇಂಗ್ಲೆಂಡ್​ನ ಓವಲ್ ಮೈದಾನದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ.

source https://tv9kannada.com/photo-gallery/cricket-photos/wtc-final-2023-dinesh-karthik-set-to-resume-commentary-for-wtc-final-kannada-news-zp-590975.html

Tags: Cricket, samagrasuddi, ಸಮಗ್ರ ಸುದ್ದಿ

Post navigation

ನನ್ನ ವಿರುದ್ಧ ಒಂದೇ ಒಂದು ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ: ಡಬ್ಲ್ಯುಎಫ್‌ಐ ಮುಖ್ಯಸ್ಥ
WTC Final 2023: ಐಪಿಎಲ್ ಫೈನಲ್ ಮುಗಿಸಿ ಲಂಡನ್​ಗೆ ಹಾರಿದ ಟೀಂ ಇಂಡಿಯಾದ ಕೊನೆಯ ಬ್ಯಾಚ್

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80

March 23, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 7 | ದಿನ 79

March 22, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 6 | ದಿನ 78

March 21, 2026
samagrasuddi
Home Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 4.5 | ದಿನ 77

March 20, 2026
samagrasuddi
  • ಕರ್ನಾಟಕ ಆಯುಷ್ ಇಲಾಖೆ ನೇಮಕಾತಿ 2026:ಬೆಂಗಳೂರಿನಲ್ಲಿ ಖಾತೆ ಸಹಾಯಕ ಹುದ್ದೆಗೆ ನೇರ ಸಂದರ್ಶನ | AYUSH Karnataka Recruitment
  • ಇತಿಹಾಸದಲ್ಲೇ ಮೊದಲ ಬಾರಿಗೆ 94ರ ಗಡಿ ದಾಟಿದ ಡಾಲರ್: ರೂಪಾಯಿ ಮೌಲ್ಯ ತೀವ್ರ ಕುಸಿತಕ್ಕೆ ಕಾರಣಗಳೇನು?
  • ಹವಾಮಾನ ಬದಲಾವಣೆಯಿಂದ ಕಾಡುತ್ತಿರುವ ಒಣ ಕೆಮ್ಮು: ಕಾರಣ, ಲಕ್ಷಣ ಮತ್ತು ಪರಿಹಾರ.
  • ​Day Special, ಮಾರ್ಚ್ 23: ದೇಶಪ್ರೇಮದ ಕಿಚ್ಚು ಮತ್ತು ಜಾಗತಿಕ ಬದಲಾವಣೆಯ ದಿನ – ಒಂದು ಸಮಗ್ರ ನೋಟ
  • Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80
Copyright © 2026
CONTACT US
Theme by: Theme Horse
Proudly Powered by: WordPress