ವರದಿ ಮತ್ತು ಫೋಟೋ ಕೃಪೆ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಚಿತ್ರದುರ್ಗ, (ಮಾ.08) : ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್‍ಗಳನ್ನು ನಗರದ 12 ನೇ ವಾರ್ಡ್‍ನಲ್ಲಿ ಮಹಿಳೆಯರಿಗೆ ವಿತರಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಗ್ಯಾರೆಂಟಿ ಕಾರ್ಡ್‍ಗಳನ್ನು ವಿತರಿಸಿ ಮಾತನಾಡುತ್ತ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್ ಗೃಹಜ್ಯೋತಿ ಯೋಜನೆಯನ್ನು ಜಾರಿಗೆ ತರಲಾಗುವುದು. ಅಡುಗೆ ಅನಿಲದ ಬೆಲೆ ಏರಿಕೆಯಾಗಿರುವುದರಿಂದ ಗ್ಯಾಸ್ ಸಿಲಿಂಡರ್ ಗೆ ಐದು ನೂರು ಪರಿಹಾರ.
ಜಿ.ಎಸ್.ಟಿ.ಪರಿಹಾರಕ್ಕೆ ಐದು ನೂರು ರೂ. ಹಾಗೂ ಬೆಲೆ ಏರಿಕೆಗಾಗಿ ಒಂದು ಸಾವಿರ ರೂ.ಗಳು ಸೇರಿದಂತೆ ಗೃಹಲಕ್ಷ್ಮಿ ಕುಟುಂಬದ ಪ್ರತಿ ಮಹಿಳೆಗೆ ಪ್ರತಿ ತಿಂಗಳು ಎರಡು ಸಾವಿರ ರೂ.ಗಳನ್ನು ಉಚಿತವಾಗಿ ನೀಡಲಾಗುವುದು. ಸದೃಢ ಹಾಗೂ ಸುರಕ್ಷಿತ ಕುಟುಂಬಕ್ಕಾಗಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಅಧಿಕಾರಕ್ಕೆ ತರುವಂತೆ ವಿನಂತಿಸಿದರು.
ಕಾಂಗ್ರೆಸ್ ಹನ್ನೆರಡನೆ ವಾರ್ಡ್ ಅಧ್ಯಕ್ಷೆ ಮುನಿರಾ ಎ.ಮಕಾಂದಾರ್ ಮಹಿಳೆಯರಿಗೆ ಅರಿಶಿನ-ಕುಂಕುಮ, ಜಾಕೀಟ್ ಬಟ್ಟೆಗಳೊಂದಿಗೆ ಗ್ಯಾರೆಂಟಿ ಕಾರ್ಡ್‍ಗಳನ್ನು ವಿತರಿಸುವ ಮೂಲಕ ವಿಭಿನ್ನವಾಗಿ ಕಾರ್ಯಕ್ರಮ ಆಯೋಜಿಸಿ ಮಾತನಾಡುತ್ತ ಎಲ್ಲಾ ಜಾತಿ ಧರ್ಮದ ಬಡವರ ಪರವಾಗಿರುವ ಕಾಂಗ್ರೆಸ್ ಪಕ್ಷದಿಂದ ಮಾತ್ರ ದೇಶದಲ್ಲಿ ಶಾಂತಿ ನೆಲೆಸಲು ಸಾಧ್ಯ. ಕೋಮುವಾದಿ ಬಿಜೆಪಿ.ಯವರು ಕಾಂಗ್ರೆಸ್ ನೀಡಿರುವ ಅನ್ನ ಕಸಿಯಲು ಹೊರಟಿದ್ದಾರೆ. ಇಂತಹ ಕೆಟ್ಟ ಸರ್ಕಾರವನ್ನು ಕಿತ್ತೊಗೆಯಬೇಕಾಗಿರುವುದಿಂದ ಎಲ್ಲರೂ ಕಾಂಗ್ರೆಸ್‍ಗೆ ಮತ ನೀಡುವಂತೆ ಮನವಿ ಮಾಡಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಸೈಯದ್ ವಲಿಖಾದ್ರಿ, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೋಕ್ಷರುದ್ರಸ್ವಾಮಿ, ಹೆಚ್.ಶಬ್ಬೀರ್‍ಭಾಷ, ಅಲ್ಲಾಭಕ್ಷಿ, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಅಬ್ದುಲ್ಲಾ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.
The post ಚಿತ್ರದುರ್ಗದಲ್ಲಿ ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ ವಿತರಣೆ first appeared on Kannada News | suddione.
from ಚಿತ್ರದುರ್ಗ – Kannada News | suddione https://ift.tt/rxUIV3K
via IFTTT