ಚಿತ್ರದುರ್ಗ ಆ. 8
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿ ಭೋವಿ ಜನಾಂಗದ ನಿರುದ್ಯೋಗ ಯುವತಿಯರಿಗೆ ಉಚಿತ ಟೈಲರಿಂಗ್ಯಂ ತ್ರೋಪಕರಣ ವಿತರಣೆ ಕಾರ್ಯಕ್ರಮವೂ ಆ. 10ರ ಸೋಮವಾರ ಚಿತ್ರದುರ್ಗ ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ರವಿಕುಮಾರ್ ತಿಳಿಸಿದ್ದಾರೆ.
ಅ. 10ರ ಮಧ್ಯಾಹ್ನ 12:30 ಗಂಟೆಗೆ ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿ ಭೋವಿ ಜನಾಂಗದ ನಿರುದ್ಯೋಗ ಯುವತಿಯರಿಗೆ ಉಚಿತ ಯಂತ್ರೋಪಕರಣ ವಿತರಣೆ ಕಾರ್ಯಕ್ರಮದ ಸಾನಿಧ್ಯವನ್ನು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮಿಜಿ ವಹಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಸಚಿವರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ.ರಘುಮೂರ್ತಿ ನಡೆಸಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕರಾದ ಕೆ.ಸಿ.ವೀರೇಂದ್ರ ಪಪ್ಪಿ ವಹಿಸಲಿದ್ದಾರೆ.
ಶಾಸಕರು, ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಅಧ್ಯಕ್ಷರಾದ ಬಿ.ಜಿ.ಗೋವಿಂದಪ್ಪ, ಸಂಸದರಾದ ಗೋವಿಂದ ಎಂ ಕಾರಜೋಳ, ಶಾಸಕರಾದ ಎನ್.ವೈ.ಗೋಪಾಲಕೃಷ್ಣ, ಡಾ|| ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಂ. ರಾಮಪ್ಪ, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷರಾದ ಡಾ. ಬಿ.ಯೋಗೇಶ್ ಬಾಬು, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಜಿ.ಎಸ್.ಮಂಜುನಾಥ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಆಧ್ಯಕ್ಷರಾದ ಪಿ.ರಘು, ಬಯಲು ಸೀಮೆ ಅಭಿವೃದ್ಧಿ ಮಂಡಳಿ ಅದ್ಯಕ್ಷರಾದ ಹೆಚ್.ಬಿ.ಮಂಜಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಂ.ಕೆ.ತಾಜ್‍ಪೀರ್, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಚಂದ್ರನಾಯ್ಕ ಯು, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ
ಅಧ್ಯಕ್ಷರಾದ ಆರ್.ಎಂ.ಶಿವಣ್ಣ, ಜಿಲ್ಲಾಧಿಕಾರಿಗಳಾದ ವೆಂಕಟೇಶ್.ಟಿ ಜಿಲ್ಲಾ ಪಂಚಾಯತಿಯ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ ಆಕಾಶ್‍ಎಸ್, ಜಿಲ್ಲಾ ಪೊಲೀಸ್ ಅಧೀಕ್ಷರಾದ ರಂಜಿತ್ ಕುಮಾರ್ ಬಂಡಾರು ಸೇರಿದಂತೆ ಜಿಲ್ಲೆಯ ಭೋವಿ ಸಮುದಾಯದ ಜನ ಪ್ರತಿನಿಧಿಗಳು, ಮುಖಂಡರು ಮತ್ತು ಗಣ್ಯರು ಭಾಗವಹಿಸಲಿದ್ದಾರೆ ಎಂದು ರವಿಕುಮಾರ್ ತಿಳಿಸಿದ್ದಾರೆ.