ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ: ಮಾ.11ರಂದು ಚಿತ್ರದುರ್ಗದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ಮಾ. 10

ಜನ ಸಾಮಾನ್ಯರು ಪ್ರತಿನಿತ್ಯ ಬಳಕೆ ಮಾಡುವ ಅಡುಗೆ ಅನಿಲ ದರವನ್ನು ಕೇಂದ್ರದ ಬಿಜೆಪಿ ಸರ್ಕಾರವು ಮತ್ತೋಮ್ಮೆ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಎಐಸಿಸಿ & ಕೆಪಿಸಿಸಿ ಆದೇಶದ ಮೇರೆಗೆ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಮಾ.11ರ ಬುಧವಾರ ಬೆಳಿಗ್ಗೆ 11ಕ್ಕೆ ಜಿಲ್ಲಾ ಮಟ್ಟದ ಪ್ರತಿಭಟನೆಯನ್ನು ನಗರದ ಒನಕೆ ಓಬವ್ವ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್‍ನ ಮುಖಂಡರು, ಹಿತೈಷಿಗಳು, ಅಭಿಮಾನಿಗಳು, ಕಾರ್ಯಕರ್ತರು, ಭಾಗವಹಿಸುವಂತೆ ಜಿಲ್ಲಾಧ್ಯಕ್ಷರಾದ ಎಂ.ಕೆ. ತಾಜ್‍ಪೀರ್ ಕೋರಿದ್ದಾರೆ.

Leave a Reply

Your email address will not be published. Required fields are marked *