ಚಿತ್ರದುರ್ಗ| ಸಂವಿಧಾನ ಬದಲಾವಣೆ ಹೇಳಿಕೆ ನೀಡಿದ ಉಪ ಮುಖ್ಯಮಂತ್ರಿಗಳ ವಿರುದ್ದ ಕಾನೂನು ಕ್ರಮ ಕೈಗ್ಗೊಳುವಂತೆ ಜಿಲ್ಲಾ ಜೆಡಿಎಸ್ ನ ಎಸ್.ಸಿ.ಘಟಕ ಒತ್ತಾಯ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ಮಾ. 28 : ನಾವು ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳಿಕೆ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರ ವಿರುದ್ದ ಕಾನೂನು ಕ್ರಮ ಕೈಗ್ಗೊಳುವಂತೆ ಒತ್ತಾಯಿಸಿ ಚಿತ್ರದುರ್ಗ ಜಿಲ್ಲಾ ಜನತಾದಳ(ಜಾತ್ಯಾತೀತ)ದ ಜಿಲ್ಲಾ ಪರಿಶಿಷ್ಟ ಜಾತಿ ಘಟಕ
ಜಿಲ್ಲಾಡಳಿತದ ಮೂಲಕ ಸರ್ಕಾರದ ಮುಖ್ಯ ಕಾರ್ಯದರ್ಶಿಯವರನ್ನು ಆಗ್ರಹಿಸಿದೆ.

ನವದೆಹಲಿಯಲ್ಲಿ ಇತ್ತೀಚೆಗೆ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್‍ರವರು ಸಂದರ್ಶನವೊಂದರಲ್ಲಿ ನಾವು ಅಧಿಕಾರಕ್ಕೆ
ಬಂದರೆ ಸಂವಿಧಾನವನ್ನು ಬದಲಾವಣೆ ಮಾಡಿ ಮತೀಯ ಅಧಾರಿತ ಮೀಸಲಾತಿಯನ್ನು ಜಾರಿಗೆ ತರುತ್ತೇವೆ ಎಂದು ಉದ್ದಟತನದ
ಹೇಳಿಕೆಯನ್ನು ನೀಡಿರುತ್ತಾರೆ ಆದರೆ ಮತೀಯ ಆಧಾರಿತ ಮೀಸಲಾತಿ ಜಾರಿಗೆ ತರಲು ಸಂವಿಧಾನದಲ್ಲಿ ಅವಕಾಶ ಇಲ್ಲ, ಎಂಬುದು
ತಿಳಿದಿರುವ ಅಂಶವಾಗಿದೆ. ಆದರೂ ಸಹಾ ಭಾರತ ಸಂವಿಧಾನಕ್ಕೆ ಅಪಮಾನ ಮಾಡುವ ರೀತಿಯಲ್ಲಿ ಬೇಜವಾಬ್ದಾರಿ ಹೇಳಿಕೆ
ನೀಡಿದ್ದಾರೆ. ಇಂತಹ ಹೇಳಿಕೆಯನ್ನು ಚಿತ್ರದುರ್ಗ ಜಿಲ್ಲಾ ಜಾತ್ಯಾತೀತ ಜನತಾದಳದ ಎಸ್.ಸಿ.ಘಟಕ ಸಹಿಸುವುದಿಲ್ಲ, ಇದರ ವಿರುದ್ದ
ರಾಜ್ಯಾದ್ಯಂತ ಹೋರಾಟವನ್ನು ಮಾಡಲಾಗುವುದು. ಈ ಕೂಡಲೇ ಸಂವಿಧಾನ ವಿರೋಧಿ ಡಿ.ಕೆ.ಶಿವಕುಮಾರ್ ರವರ ವಿರುದ್ದ
ಎಫ್.ಐ.ಆರ್. ದಾಖಲಿಸಿ ಕೂಡಲೇ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ಜಾತ್ಯಾತೀತ ಜನತಾದಳದ ಎಸ್.ಸಿ.ಘಟಕದ ಅದ್ಯಕ್ಷರಾದ ಪರಮೇಶ್ವರಪ್ಪ, ಜಿಲ್ಲಾ ಪ್ರಧಾನ
ಕಾರ್ಯದರ್ಶಿ ಶಿವಣ್ಣ, ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಗೋಪಾಲಸ್ವಾಮಿ ನಾಯಕ್, ಚಿತ್ರದುರ್ಗ ತಾಲ್ಲೂಕು ಘಟಕದ
ಅಧ್ಯಕ್ಷರಾದ ಸಣ್ಣ ತಿಮ್ಮಣ್ಣ, ಚಿದಾನಂದ ಸ್ವಾಮಿ, ಮಹಾಂತೇಶ್, ಕರಿಯಪ್ಪ, ರುದ್ರಪ್ಪ, ದುರುಗೇಶ್, ಮಾಲತೇಶ್, ಉಮಾಶಂಕರ್,
ಹನುಮಂತರಾಯ್, ಬಸವರಾಜು, ನಾಗರಾಜು, ನರಸಿಂಹಪ್ಪ ಸೇರಿದಂತೆ ಇತರರು ಭಾಗವಹಿಸಿದ್ದರು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group:https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Views: 0

Leave a Reply

Your email address will not be published. Required fields are marked *