ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿಗಳು, ಸಿಬ್ಬಂದಿ ಹಿತದೃಷ್ಟಿಯಿಂದ ಆಡಳಿತಾಧಿಕಾರಿಯಾಗಿ ನ್ಯಾಯಾಧೀಶರು ಮುಂದುವರಿಯಲಿದ್ದಾರೆ ಎಂದು ಸಿಜೆ ಪ್ರಸನ್ನ ಬಿ.ವರಾಳೆ, ನ್ಯಾ.ಎಂ.ಜಿ.ಎಸ್.ಕಮಲ್ ಅವರಿದ್ದ ವಿಭಾಗೀಯ ಪೀಠ ತಿಳಿಸಿದೆ.

ಬೆಂಗಳೂರು ಸೆ.28: ಚಿತ್ರದುರ್ಗದ (Chitradurga) ಮುರುಘಾಮಠಕ್ಕೆ (Murugha Mutt) ಅಧ್ಯಕ್ಷರು ನೇಮಕವಾಗುವವರೆಗೆ ಪ್ರಧಾನಾ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರೇ ಆಡಳಿತಾಧಿಕಾರಿಯಾಗಿ ಮುಂದುವರಿಯಲಿದಿದ್ದಾರೆ ಎಂದು ಹೈಕೋರ್ಟ್ (High Court) ಆದೇಶ ನೀಡಿದೆ. ಸಂಘದ ಬೈಲಾ ಪ್ರಕಾರ ಶ್ರೀಮುರುಘರಾಜೇಂದ್ರ ವಿದ್ಯಾಪೀಠದ ಅಧ್ಯಕ್ಷರು ಮಠದ ಜಗದ್ಗುರುಗಳೇ ಆಗಬೇಕು. ಆದರೆ ಮುರುಘಾಮಠದ ಜಗದ್ಗುರುಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಹೀಗಾಗಿ ಅಲ್ಲಿಯವರೆಗೆ ಚಿತ್ರದುರ್ಗ ಜಿಲ್ಲಾ ಪ್ರಧಾನ ನ್ಯಾಯಾಧೀಶರೇ ಮುರುಘಾ ಮಠ, ವಿದ್ಯಾಪೀಠದ ಆಡಳಿತಾಧಿಕಾರಿಯಾಗಿ ಮುಂದುವರಿಯಲಿದ್ದಾರೆ ಎಂದು ಪೀಠ ಹೇಳಿದೆ.
ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿಗಳು, ಸಿಬ್ಬಂದಿ ಹಿತದೃಷ್ಟಿಯಿಂದ ಈ ಆದೇಶ ನೀಡಲಾಗಿದೆ. ಉಸ್ತುವಾರಿ ಸಮಿತಿಗೆ ನಿರ್ಧಾರ ಕೈಗೊಳ್ಳುವ ಸದಸ್ಯರ ಅಗತ್ಯವಿದೆ. ಹೀಗಾಗಿ ಆಡಳಿತಾಧಿಕಾರಿಯಾಗಿ ನ್ಯಾಯಾಧೀಶರು ಮುಂದುವರಿಯಲಿದ್ದಾರೆ ಎಂದು ಸಿಜೆ ಪ್ರಸನ್ನ ಬಿ.ವರಾಳೆ, ನ್ಯಾ.ಎಂ.ಜಿ.ಎಸ್.ಕಮಲ್ ಅವರಿದ್ದ ವಿಭಾಗೀಯ ಪೀಠ ತಿಳಿಸಿದೆ.
ಆಡಳಿತಾಧಿಕಾರಿಯನ್ನು ನೇಮಿಸಿದ್ದ ಹೈಕೋರ್ಟ್
ಇದೇ ವರ್ಷ ಮೇ ತಿಂಗಳಲ್ಲಿ ರಾಜ್ಯ ಸರ್ಕಾರವು ಮುರುಘಾಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಿತ್ತು. ಆದರೆ ಈ ನೇಮಕವನ್ನು ಏಕಸದಸ್ಯ ಪೀಠ ರದ್ದುಪಡಿಸಿತ್ತು. ಇದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆಯನ್ನು ನಡೆಸಿದ್ದ ಸಿಜೆ ಪ್ರಸನ್ನ ಬಿ. ವರಾಳೆ ಮತ್ತು ನ್ಯಾ. ಎಂ.ಜಿ.ಎಸ್.ಕಮಲ್ ಅವರಿದ್ದ ವಿಭಾಗೀಯ ಪೀಠ ಜುಲೈ ತಿಂಗಳಲ್ಲಿ ಮುರುಘಾಮಠಕ್ಕೆ ತಾತ್ಕಾಲಿಕ ಆಡಳಿತಾಧಿಕಾರಿಯನ್ನಾಗಿ ಪ್ರಧಾನಾ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರನ್ನು ನೇಮಕ ಮಾಡಿ ಆದೇಶ ಹೊರಡಿಸಿತ್ತು. ಮುಂದಿನ ಆದೇಶದವರೆಗೆ ಪ್ರಧಾನ ಜಿಲ್ಲಾ ನ್ಯಾಯಾಧೀಶರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಿತ್ತು.
ಮುಂದಿನ ಆದೇಶದವರೆಗೆ ಪ್ರಧಾನ ಜಿಲ್ಲಾ ನ್ಯಾಯಾಧೀಶರನ್ನು ಜಗದ್ಗುರು ಮುರುಘರಾಜೇಂದ್ರ ಮಠ, ವಿದ್ಯಾಪೀಠದ ಆಡಳಿತಾಧಿಕಾರಿಯಾಗಿ ನೇಮಕ ಮಾಡಲಾಗಿದ್ದು, ಮಠ, ವಿದ್ಯಾಪೀಠದ ದಿನನಿತ್ಯದ ವ್ಯವಹಾರ ನೋಡಿಕೊಳ್ಳಬೇಕು. ಯಾವುದೇ ನೀತಿ ನಿರ್ಧಾರದ ಕ್ರಮಗಳನ್ನು ಕೈಗೊಳ್ಳುವಂತಿಲ್ಲ. ಚಿತ್ರದುರ್ಗ ಜಿಲ್ಲಾಧಿಕಾರಿಯವರು ಜಿಲ್ಲಾ ನ್ಯಾಯಾಧೀಶರಿಗೆ ಸಹಕಾರ ನೀಡಬೇಕು. ಜಿಲ್ಲಾ ನ್ಯಾಯಾಧೀಶರು ಕೋರಿದ ಸಹಕಾರ ನೀಡಬೇಕು ಎಂದು ವಿಭಾಗೀಯ ಪೀಠ ಸೂಚಿಸಿತ್ತು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group : https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharechat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Views: 0