ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ, ಡಿ. 27:
ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಹಾಗೂ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸೆಂಗರ್ ಎಂಬ ಆತ್ಯಾಚಾರಿ ಪ್ರಕರಣದಲ್ಲಿ ಜಾಮೀನು ನೀಡಿರುವುದನ್ನು ಖಂಡಿಸಿ, ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಶುಕ್ರವಾರ ನಗರ ಡಿಸಿ ಸರ್ಕಲ್‌ನಲ್ಲಿ ಭಾರೀ ಪ್ರತಿಭಟನೆ ನಡೆಸಲಾಯಿತು.
“ಆತ್ಯಾಚಾರಿಗೆ ಶಿಕ್ಷೆ ಕೊಡಿ” ಎಂಬ ಘೋಷಣೆಯೊಂದಿಗೆ ನಡೆದ ಈ ಪ್ರತಿಭಟನೆಯಲ್ಲಿ, ಆತ್ಯಾಚಾರ ಪ್ರಕರಣಗಳಲ್ಲಿ ರಾಜಕೀಯ ಹಸ್ತಕ್ಷೇಪವನ್ನು ತಕ್ಷಣ ನಿಲ್ಲಿಸಬೇಕು ಹಾಗೂ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ್ ಮಾತನಾಡಿ, ಅತ್ಯಾಚಾರ ಪ್ರಕರಣಗಳಲ್ಲಿ ನ್ಯಾಯ ವಿಳಂಬವಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಮಹಿಳೆಯರ ಸುರಕ್ಷತೆಗೆ ಕೇಂದ್ರ ಸರ್ಕಾರ ಗಂಭೀರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಾಜ್‍ಪೀರ್ ಮಾತನಾಡಿ, ಅಪರಾಧಿಗಳನ್ನು ರಕ್ಷಿಸುವ ಬದಲು ಸಂತ್ರಸ್ತರಿಗೆ ನ್ಯಾಯ ಒದಗಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಹೇಳಿದರು. ಯುವ ಕಾಂಗ್ರೆಸ್ ಅಧ್ಯಕ್ಷ ಕಾರಹಳ್ಳಿ ಉಲ್ಲಾಸ್ ಅವರು, ಮಹಿಳಾ ಸುರಕ್ಷತೆ ವಿಚಾರದಲ್ಲಿ ಯುವ ಕಾಂಗ್ರೆಸ್ ಸದಾ ಹೋರಾಟ ನಡೆಸಲಿದೆ ಎಂದು ತಿಳಿಸಿದರು.
ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್‌ನ ಅನೇಕ ಮುಖಂಡರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
Views: 46