ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬ: ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಂಭ್ರಮಾಚರಣೆ.

ಚಿತ್ರದುರ್ಗ ಮೇ. 15

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ರಾಜ್ಯದ ಉಪ ಮುಖ್ಯಮಂತ್ರಿಗಳು, ಕೆ.ಪಿ.ಸಿ.ಸಿ. ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‍ರವರ ಹುಟ್ಟು ಹಬ್ಬದ ಅಂಗವಾಗಿ ಶುಕ್ರವಾರ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಎಂ.ಕೆ.ತಾಜ್‍ಪೀರ್‍ರವರ ನೇತೃತ್ವದಲ್ಲಿ ಕೇಕ್ ಕತ್ತರಿಸುವುದರ ಮೂಲಕ ಆಚರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಾಸಕರಾದ ಕೆ.ಸಿ.ವಿರೇಂದ್ರ ಪಪ್ಪಿ ಮಾತನಾಡಿ ಡಿ.ಕೆ.ಶಿವಕುಮಾರ್ ರವರ ರೈತಾಪಿ ಕುಟುಂಬದಿಂದ ಬಂದವರಾಗಿದ್ದು, ಅವರಿಗೆ ರಾಜಕೀಯ ಹೊಸದು ಅವರ ಮನೆತನದಲ್ಲಿ ಯಾರೂ ಸಹಾ ರಾಜಕೀಯದಲ್ಲಿ ಇದ್ದವರಲ್ಲ, ರಾಜಕೀಯ ಜೀವನಕ್ಕೆ ತಮ್ಮ ಜೀವನವನ್ನೇ ಮುಡುಪಾಗಿ ಇಟ್ಟಿದ್ದಾರೆ. ಗ್ಯಾರೆಂಟಿಯ ಮೂಲಕ ಬಡವರ ಬದುಕನ್ನು ಹಸನು ಮಾಡಿದ್ದಾರೆ. ಡಿಕೆ.ಶಿ.ಕಾಂಗ್ರೆಸ್ ಪಕ್ಷಕ್ಕೆ ಒಂದು ದೊಡ್ಡ ಶಕ್ತಿಯಾಗಿದ್ದಾರೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದಾರೆ. ಹಗಲಿರುಳು ಪಕ್ಷಕ್ಕಾಗಿ ದುಡಿಯುವ ವ್ಯಕ್ತಿಯಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಹೆಗಲಿಗೆ ಹೆಗಲು ಕೊಟ್ಟು ರಾಜ್ಯದ ಅಭೀವೃದ್ದಿಗಾಗಿ ಕೆಲಸವನ್ನು ಮಾಡುತ್ತಿದ್ದಾರೆ ಎಂದರು.

ನಗರಾಭೀವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಆರ್.ಕೆ.ಸರ್ದಾರ್ ಮಾತನಾಡಿ, ಶಿವಕುಮಾರ್ ಹೃದಯವಂತ ಮನುಷ್ಯ ನೇರ ನಡೆ-ನುಡಿಯನ್ನು ಹೊಂದಿದ ವ್ಯಕ್ತಿಯಾಗಿದ್ದಾರೆ. ಅವರನ್ನು ನಂಬಿದವರನ್ನು ಎಂದಿಗೂ ಸಹಾ ಕೈ ಬಿಡುವುದಿಲ್ಲ, ಪಕ್ಷ ಸಂಘಟನೆ, ಬದ್ದತೆ, ನಿಷ್ಠೆಯಲ್ಲಿ ಅವರಿಗೆ ಅವರೇ ಸರಿಸಾಟಿ ಯಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಎಲ್ಲಾ ಸಂಕಷ್ಟ ಸಂದರ್ಭದಲ್ಲಿಯೂ ಸಹಾ ದೈರ್ಯದಿಂದ ಅದನ್ನು ಎದುರಿಸಿದ್ದಾರೆ. ರಾಜ್ಯದ ಅಭೀವೃದ್ದಿಗೆ ಸದಾ ದೂರದೃಷ್ಟಿಯಿಂದ ಕೆಲಸವನ್ನು ಮಾಡುತ್ತಾರೆ. ಅವರ ನಾಯಕತ್ವದಲ್ಲಿ ಕರ್ನಾಟಕ ಇನ್ನಷ್ಟು ಪ್ರಗತಿಯನ್ನು ಕಾಣಲಿದೆ ಎಂದು ತಿಳಿಸಿದರು.

ಜಿಲ್ಲಾಧ್ಯಕ್ಷ ಎಂ.ಕೆ.ತಾಜ್‍ಪೀರ್ ಮಾತನಾಡಿ, ರಾಜಕೀಯದಲ್ಲಿ ಪಕ್ಷದ ಸಿದ್ದಾಂತಗಳನ್ನು ಮೌಲ್ಯಗಳನ್ನು ಕಾಪಾಡುತ್ತಾ ರಾಜಕೀಯ ಜೀವನದಲ್ಲಿ ಕಡಿಮೆ ಅವಧಿಯಲ್ಲಿ ಉನ್ನತವಾದ ಸ್ಥಾನವನ್ನು ಪಡೆದಿದ್ದಾರೆ. ಅನೇಕ ಜನಪರ ಕಲ್ಯಾಣ ಯೋಜನೆಗಳನ್ನು ಜಾರಿ ಮಾಡುವುದರ ಮೂಲಕ ಜನತೆಯ ಹೃದಯವನ್ನು ಗೆದ್ದಿದ್ದಾರೆ. ಖ.ಕೆ.ಶಿವಕುಮಾರ್ ರವರು ನಿರಂತರ ಪರಿಶ್ರಮ, ಹೋರಾಟ ಪಕ್ಷ ಸಂಘಟನೆ ಮತ್ತು ಕಾಂಗ್ರೆಸ್ ಪಕ್ಷದೆಡೆಗಿನ ಅದಮ್ಯ ನಿಷ್ಠೆಗಳಿಗೆ ಹೆಸರಾಗಿದ್ದಾರೆ. ತಳಮಟ್ಟದ ಶ್ರೀ ಸಾಮಾನ್ಯ ಕಾರ್ಯಕರ್ತರಿಂದ ಹಿಡಿದು ಅನ್ನತ ಮಟ್ಟದ ನಾಯಕರವರೆಗೆ ನಿಕಟ ಸಂಪರ್ಕ ಹೊಂದಿರುವ ಅವರ ಸಾರ್ವಜನಿಕ ಜೀವನವೂ ಒಂದು ಆಸಕ್ತಿಕರ ಪ್ರಯಾಣವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಪ್ರಧಾನ ಕಾರ್ಯದರ್ಶಿ ಮೈಲಾರಪ್ಪ, ಓಬಿಸಿ ಅಧ್ಯಕ್ಷ ಎನ್.ಡಿ.ಕುಮಾರ್, ಉಪಾಧ್ಯಕ್ಷ ರವಿಕುಮಾರ್, ಪ್ರಕಾಶ್ ರಾಮನಾಯ್ಕ್, ಎಸ್.ಟಿ.ಘಟಕದ ಅಧ್ಯಕ್ಷ ಮಂಜುನಾಥ್, ಲೋಕೆಶ್, ನಗರಸಭೆಯ ಮಾಜಿ ಅಧ್ಯಕ್ಷ ನಿರಂಜನ ಮೂರ್ತಿ, ಮಧುಗೌಡ, ರಹಮತ್ತುಲ್ಲಾ, ಸಾಧಿಕ್, ಖಾಸಿಂಆಲಿ ಸೇರಿದಂತೆ ವಿವಿಧ ಘಟಕದ ಪದಾಧಿಕಾರಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *