
ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್
ಚಿತ್ರದುರ್ಗ ಜೂ. 19 ಯೋಗವು ಭಾರತೀಯ ಸಂಸ್ಕೃತಿಯ ಅಮೂಲ್ಯ ಕೊಡುಗೆಗಳಲ್ಲಿ ಒಂದು. ಇದು ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವನ್ನು ಸಾಧಿಸುವ ಪ್ರಾಚೀನ ಶಿಸ್ತಾಗಿದ್ದು, ವಿಶ್ವದಾದ್ಯಂತ ಅದರ ಮಹತ್ವವನ್ನು ಇತ್ತೀಚಿನ ದಿನಗಳಲ್ಲಿ ಎಲ್ಲರೂ ಅರಿಯತೊಡಗಿದ್ದಾರೆ.
ಸಂಯುಕ್ತ ರಾಷ್ಟ್ರಗಳ ಒಕ್ಕ್ಕೂಟದ 11.12.2014 ರಂದು ನಡೆದ ಸಾಮಾನ್ಯ ಸಭೆಯಲ್ಲಿ ಅಂತರಾಷ್ಟ್ರಿಯ ಯೋಗ ದಿನ ಜೂನ 21 ರಂದು ಆಚರಿ¸ಬೇಕೆಂದು ತಿರ್ಮಾನಿಸಲಾಯಿತು. ಇದು 11 ನೆಯ ವರ್ಷವಾಗಿದ್ದು, ಇದರಲ್ಲಿ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪಾತ್ರ ಬಹು ಮುಖ್ಯವಾಗಿದೆ. ಈ ಬಾರಿ ಅವರು ಆಂಧ್ರಪ್ರದೇಶದ ವಿಶಾಖಪಟ್ಟದಲ್ಲಿ ಭಾಗವಹಿಸುವರು.
ಓಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ' ಧ್ಯೆಯ ವಾಕ್ಯವಾಗಿದ್ದು, ಅನೇಕ ರಾಷ್ಟ್ರಗಳಲ್ಲಿ ಈ ದಿನ ಸಂಬ್ರಮದಿಂದ ಆಚರಿಸಲಾಗುವುದು. ಭಾರತ ತಪೋಭೂಮಿ, ಯೋಗಿಗಳ ತಾಣ, ಆಧ್ಯಾತ್ಮದಲ್ಲಿ ವಿಶ್ವದ ದಾರಿದೀಪವೆಂದು ಪ್ರಸಿದ್ಧವಾಗಿದೆ.
ಯೋಗ’ ಎನ್ನುವ ಪದ ಸಂಸ್ಕøತದ ಪದವಾದ “ಯುಜ್” ಧಾತುವುನಿಂದ ಹುಟ್ಟಿದೆ. “ಯುಜ್” ಎಂದರೆ ಜೋಡಿಸು, ಕೂಡಿಸು, ಸಂಬಂಧಿಸು. ಇದರ ಅರ್ಥ
ಸಂಬಂಧ' ಅಥವಾ ಒಕ್ಕೂಟವಾಗಿದೆ. ಪತಂಜಲಿ ಮಹರ್ಷಿUಳ ಪ್ರಕಾರ,
ಯೋಗಃಚಿತ್ತವೃತ್ತಿ ನಿರೋಧಃ’ ಯೋಗವೆಂದರೆ ಚಿತ್ತದ ಚಾಂಚಲ್ಯವೃತ್ತಿಗಳನ್ನು ನಿರೋಧಿಸುವುದು.”ವಸಿಷ್ಠ ಮಹರ್ಷಿಗಳು “ಮನ ಪ್ರಶಮನೋಪಾಯಃ ಯೋಗಃ ಇತಿ ಅಬಿಧೀಯತೆ” ಮನಸ್ಸನ್ನು ಪ್ರಶಾಂತಗೊಳಿಸುವ ಸುಂದರ ಉಪಾಯವೇ ಯೋಗವೆಂದು ಹೆಳುತ್ತಾರೆ.“ಯೋಗಃ ಸಮತ್ವಂ ಉಚ್ಚತೇ’ ಯೋಗವೆಂದರೆ ಕಾರ್ಯ ತತ್ಪರತೆಯಲ್ಲಿ ಸಮಭಾವ, ಸಮಚಿತ್ತವಾಗಿರುವುದು. ಸ್ತುತಿ-ನಿಂದೆ, ಮಾನ-ಅಪಮಾನ, ಸುಖ-ದುಃಖ, ನೋವು-ನಲಿವು, ್ಠ ಮುಂತಾದ ದ್ವಂದ್ವ ಜೀವನದಲ್ಲಿ ಸಮಭಾವವನ್ನು ಹೊಂದುವುದೇ ಯೋಗವೆಂದು ಭಗವದ್‍ಗೀತೆ ಹೇಳುತ್ತದೆ.
ಯೋಗದ ಉಪಯೋಗಗಳು ಅಪಾರ. ಇದು ಶ್ವಾಸ ನಿಯಂತ್ರಣ, ಧ್ಯಾನ, ಆಸನಗಳ ಮೂಲಕ ದೇಹದ ಸ್ಥಿರತೆ, ಮನಸ್ಸಿನ ಶಾಂತಿ ಮತ್ತು ಆರೋಗ್ಯವನ್ನು ಒದಗಿಸುತ್ತದೆ. ಮನುಷ್ಯನ ದೈನಂದಿನ ಜೀವನದಲ್ಲಿ ಯೋಗದ ಅಭ್ಯಾಸವು ಒತ್ತಡ ನಿವಾರಣೆ, ರೋಗ ನಿರೋಧಕ ಶಕ್ತಿಯ ಹೆಚ್ಚಳ ಮತ್ತು ಮನೋಬಲದ ವೃದ್ಧಿಗೆ ಕಾರಣವಾಗುತ್ತದೆ. ಯೋಗವೆಂದರೆ ಕೆಲವರು ವರ್ಣಿಸುವಂತೆ ಪ್ರಾಣಾಯಾಮ, ಶಿರ್ಷಾಸನ, ಸರ್ವಾಂಗಾಸನ ಇತ್ಯಾದಿ ಯಾವದೇ ತರಹÀದ ಅಂಗಸಾಧನೆ ಅರ್ಥಾತ್ ಶರೀರ ಸಾಧನೆಯಾಗಿರದೆ, ಯೋಗವು ಆತ್ಮನ ಚಂಚಲ ಮನಸ್ಸನ್ನು ಏಕಾಗ್ರಗೊಳಿಸಬಲ್ಲ ಮನೋವ್ಯಾಯಾಮವಾಗಿದೆ. ಅದೇನೆ ಇರಲಿ ಯೋಗ ಎಂದರೆ ಸರ್ವ ಮನೋವ್ಯಾಪಾರಗಳ ಮೇಲೆ ಪ್ರಭುತ್ವವನ್ನು ಸ್ಥಾಪಿಸುವುದು.ವರ್ತಮಾನ ಸಮಯದಲ್ಲಿ ಯೋಗದಲ್ಲಿ ಹಠಯೋಗ, ಸನ್ಯಾಸಯೋಗ, ಭಕ್ತಿಯೋಗ, ಕರ್ಮಯೋಗ, ಜ್ಞಾನಯೋಗ, ರಾಜಯೋಗ, ಶುಭಯೋಗ, ಲಾಭಯೋಗ, ಯೋಗಾ-ಯೋಗ ಮುಂತಾದ ಅನೇಕ ಪ್ರಕಾರಗಳು ಇವೆ.
ಎಲ್ಲ್ಲ ವಿಜ್ಞಾನಗಳಿಗಿಂತ ವೈಪರಿತ್ಯವಾಗಿ ಇನ್ನೊಂದು ವಿಜ್ಞಾನವಿದೆ ಅದು ಯೋಗವಿಜ್ಞಾನ. ಯೋಗಾವಸ್ಥೆಯಲ್ಲಿ ಶ್ವಾಸೋಚ್ಛ್ವಾಸ ನಿಧಾನವಾಗಿ ನಡೆಯುವುದುರಿಂದ ಯೋಗಿಯು ವಿಶ್ರಾಂತಿ ಹಾಗೂ ನೆಮ್ಮದಿ ಅನುಭವ ಪಡೆಯುವನು.ಯೋಗಾವಸ್ಥೆಯಲ್ಲ್ಲಿ ಹೃದಯದಲ್ಲಿ ರಕ್ತ ಹೊಮ್ಮುವಿಕೆ ನಿಯಮಿತವಾಗಿ ನಿರ್ದಿಷ್ಟವಾಗಿ ಕಡಿಮೆಯಾಗುವುದರಿಂದ ಹೃದಯಕ್ಕೆ ಸಾಕಷ್ಟು ವಿಶ್ರಾಂತಿ ದೊರೆಯುತ್ತದೆ. ಯೋಗಾವಸ್ಥೆಯಲ್ಲಿ ಯೋಗಿಯ ಶರೀರದಲ್ಲಿ ಸಂಚರಿಸುವ ರಕ್ತದಲ್ಲಿ ಲ್ಯಾಕ್ಟಿಕ್ ಆಮ್ಲದ ಅಂಶವು ಶೀಘ್ರವಾಗಿ ಕೆಳಮಟ್ಟಕ್ಕೆ ಬರುವುದರಿಂದ ಸಂಪೂರ್ಣ ಶಾಂತಿಯ ಅನುಭವವಾಗುವುದಲ್ಲದೆ ಎಲ್ಲಾ ಪ್ರಕಾರದ ಉದ್ವೇಗ ಹಾಗೂ ನಿರುತ್ಸಾಹದಿಂದ ಮುಕ್ತಿ ಲಭಿಸಿ ನರಮಂಡಲಕ್ಕೆ ಶಕ್ತಿಯು ದೊರೆಯುವದಲ್ಲದೆ ಯಾವುದೇ ತರಹದ ನರಮಂಡಲ ಸಂಬಂಧಿಸಿದ ರೋಗ ನಿವಾರಣೆಯಾಗುತ್ತದೆ.ಯೋಗಾವಸ್ಥೆಯಲ್ಲಿ ಮಾನಸಿಕ ಉದ್ವೇಗ ದೂರವಾಗುವುದರಿಂದ ಮಾನವನ ತ್ವಚೆಯಲ್ಲಿ ಅಸಾಧಾರಣ ರೋಗ ನಿರೋಧಕಶಕ್ತಿಯು ಪ್ರಪುಲ್ಲಿತವಾಗುವುದರಿಂದ ಯೋಗಿಯು ಉಲ್ಲಾಸಭರಿತನಾಗುವನುಹೃದಯವಿಕಾರ, ರಕ್ತದೊತ್ತಡ. ಮಾನಸಿಕ ಅಶಾಂತಿ, ಅರೆಹುಚ್ಚು, ಕ್ರೋಧ, ಕಾಮ, ಮಾನಸಿಕ ಭಯ, ಅಸ್ತವ್ಯಸ್ತತೆಯಿಂದ ಉಂಟಾದ ರೋಗಗಳೂ ಸಹ ಯೋಗದಿಂದ ಓಡಿಹೋಗುತ್ತವೆ.ಯೋಗ ವಿಜ್ಞಾನವು ಮನುಷ್ಯನ ಆವೇಶ(ಎಮೋಷನ್) ಗಳನ್ನು ನಿಯಂತ್ರಿಸಿ ಅವನ ವಿಚಾರಗಳನ್ನು ವ್ಯವಸ್ಥಿತ ಹಾಗೂ ಸ್ಪಷ್ಟಪಡಿಸುತ್ತದೆ.ಯೋಗದ ಫಲವಾಗಿ ನಾವು ಗಹನÀ ಶಾಂತಿಯ ಅನುಭವ ಮಾಡುತ್ತೇವೆ, ಆಗ ಕೊರ್ಟಿಕೋಸ್ಟಿರಾಯಿ ಗ್ರಂಥಿಯ ಅಂತಃಸ್ರಾವದ ಪ್ರಮಾಣ ಕಡಿಮೆಯಾಗಿ ಆರೋಗ್ಯಕ್ಕೆ ಅತ್ಯಂತ ಸಹಾಯಕಾರಿಯಾಗುತ್ತದೆ. ಅದು ನಮಗೆ ಪೆಪ್ಟಿಕ್ ಅಲ್ಸರ್, ರಕ್ತದ ಒತ್ತಡ. ಮಧುಮೇಹದಂತಹ ರೋಗಗಳಿಂದ ದೂರವಿಡುತ್ತದೆ. ಅಲ್ಲದೇ ರೋಗ ಪ್ರತಿರೋಧಕ ಶಕ್ತಿ ಹೆಚ್ಚಾಗುತ್ತದೆವೈಜ್ಞಾನಿಕವಾಗಿ ಹೇಳುವುದಾದರೆ ಯೋಗಿಯು ಏಕರಸತೆ ಮತ್ತು ಅಂತರ್‍ಮುಖತೆ ಹಾಗೂ ಹರ್ಷಿತಮುಖತೆಯ ಸ್ಥಿತಿಯಲ್ಲಿ ಸದಾಕಾಲಕ್ಕೆ ಇರುವುದರಿಂದ ಯೋಗಿಯ ಮಾನಸಿಕ ಹಾಗೂ ಶಾರೀರಿಕ ಕ್ರಿಯೆಗಳಲ್ಲಿ ಅಸಾಧಾರಣ ಬದಲಾವಣೆಗಳಾಗಿ ನಿರೋಗಿ, ಧೀರ್ಘಾಯುವಾಗಿ ತೃಪ್ತಿಮಯ ಜೀವನವನ್ನು ಪಡೆಯುವನುದುಃಖ, ರೋಗ, ಅಧೈರ್ಯ, ಆಸೆ, ಕಾಮ, ಕ್ರೋಧ, ಲೋಭ, ಮೋಹ, ಅಹಂಕಾರಗಳಾದ ಎಲ್ಲಾ ಮನೋರೋಗಗಳನ್ನು ಶಾಶ್ವತವಾಗಿ ನಿರ್ಮೂಲನ ಮಾಡಿ ಶುದ್ಧ ಸಂಕಲ್ಪದಿಂದ ಸದಾ ಇರಲು ಅತಿ ಸುಲಭವಾದ ಏಕೈಕ ಮಾರ್ಗವೇ ಸಹಜ ರಾಜಯೋಗವಾಗಿದೆ.ಯೋಗದಿಂದ ಯೋಗಿಯು ಅತಿನಿದ್ದೆ, ಆಲಸ್ಯ, ಭಯ, ವ್ಯಕ್ತಿದ್ವೇಷ, ಜಾತಿ, ಮತ, ಲಿಂಗಭೇದ, ವಯೋಭೇದಗಳನ್ನು ನಿರ್ಮೂಲಮಾಡಿ ಪ್ರೇಮ, ದಯೆ, ಕರುಣೆ, ಪವಿತ್ರತೆಯಿಂದ ಕೂಡಿ ಕಮಲಪುಷ್ಪದಂತೆ ಅನಾಸಕ್ತನಾಗಿ ಇರಬಲ್ಲನು.
ವಿಶ್ವ ಆರೋಗ್ಯ ಸಂಸ್ಥೆಯು `ಸಂಪೂರ್ಣ ಶಾರೀರಿಕ, ಮಾನಸಿಕ, ಸಾಮಾಜಿಕ, ಆರೋಗ್ಯವೆ ಆರೋಗ್ಯವೆಂದೂ ಸಾರಿz.ÉÉ ಕೇವಲ ರೋಗಗಳಿಲ್ಲದಿರುವಿಕೆ ಪರಿಪೂರ್ಣ ಆರೋಗ್ಯವಲ್ಲ’ ಎಂದು ವ್ಯಾಖ್ಯಾನಿಸಿದೆ. ಯೋಗದಿಂದ ಆರೋಗ್ಯ ಭಾಗ್ಯ ಪಡೆಯುವುದು ಸಹಜವಾಗಿದೆ.ಯೋಗ ದಿನಾಚರಣೆಯಂದು ಶಾಲೆಗಳಲ್ಲಿ, ಕಾಲೇಜುಗಳಲ್ಲಿ, ಕಚೇರಿಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸಾಮೂಹಿಕ ಯೋಗ ಕಾರ್ಯಕ್ರಮಗಳು ನಡೆಯುತ್ತವೆ. ಜನರಲ್ಲಿ ಯೋಗದ ಬಗ್ಗೆ ಅರಿವು ಮೂಡಿಸಲು ಉಪನ್ಯಾಸಗಳು, ಕಾರ್ಯಾಗಾರಗಳು ಮತ್ತು ಮಾಧ್ಯಮಗಳ ಮೂಲಕ ಜಾಗೃತಿ ಕಾರ್ಯಗಳು ನಡೆಸಲಾಗುತ್ತವೆ.
ಯೋಗವು ನಮ್ಮ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಬೇಕು. ಕೇವಲ ಒಂದು ದಿನ ಮಾತ್ರವಲ್ಲ, ಪ್ರತಿದಿನವೂ ಕೆಲ ನಿಮಿಷಗಳನ್ನು ಯೋಗಕ್ಕೆ ಮೀಸಲಿಡುವುದರಿಂದ ನಮ್ಮ ಶಾರೀರಿಕ ಹಾಗೂ ಮಾನಸಿಕ ಆರೋಗ್ಯದಲ್ಲಿ ಮಹತ್ತರವಾದ ಬದಲಾವಣೆಗಳನ್ನು ಕಾಣಬಹುದು. ಯೋಗದ ಶಕ್ತಿ ನಮ್ಮೊಳಗಿನ ಶಕ್ತಿ ಇದನ್ನು ಅರಿತು, ಅನುಸರಿಸೋಣ.