ಬೆಂಗಳೂರು: 2023ರ ವಿಧಾನಸಭಾ ಚುನಾವಣೆಗೆ ಎಲ್ಲಾ ತಯಾರಿ ನಡೆಯುತ್ತಿದ್ದು, ಇಂದು ನಾಮಪತ್ರ ಸಲ್ಲಿಕೆಗೆ ಕಡೆ ದಿನವಾಗಿದೆ. ಹೀಗಾಗಿ ನಾಮಪತ್ರ ಸಲ್ಲಿಕೆ ಮಾಡದವರು ಇಂದು ಮುಗಿಬೀಳುತ್ತಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ಹಾಗೂ ಸಿಎಂ ಬಸವರಾಜ್ ಬೊಮ್ಮಾಯಿ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದು, ಅವರ ಆಸ್ತಿಯ ವಿಚಾರವಾಗಿಯೂ ನಾಮಪತ್ರದಲ್ಲಿ ತಿಳಿಸಿದ್ದಾರೆ. ಮಾಜಿ ಹಾಗೂ ಹಾಲಿ ಸಿಎಂ ಎಷ್ಟು ಕೋಟಿ ಒಡೆಯರು ಎಂಬ ಡಿಟೈಲ್ ಇಲ್ಲಿದೆ.
ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿದಿದ್ದಾರೆ. ಅವರ ಚರಾಸ್ತಿ : 21.35 ಕೋಟಿ ಇದ್ದು, ಸ್ಥಿರಾಸ್ತಿ : 29.42 ಕೋಟಿ ಇದ್ದು ಒಟ್ಟು ಆಸ್ತಿ :50.77 ಕೋಟಿ ಆಸ್ತಿಯನ್ನು ಹೊಂದಿದ್ದಾರೆ.
ಇನ್ನು ಹಾಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಶಿಗ್ಗಾಂವಿಯಿಂದ ಸ್ಪರ್ಧೆಗೆ ಇಳಿದಿದ್ದು, ಅವರ ಬಳಿ ಒಟ್ಟು, 28.94 ಕೋಟಿ ಆಸ್ತಿ ಇದೆ. ಚರಾಸ್ತಿ : 5.98 ಕೋಟಿ ರೂಪಾಯಿ, ಸ್ಥಿರಾಸ್ತಿ : 22.95 ಕೋಟಿ ರೂಪಾಯಿ ಆಸ್ತಿ ಹೊಂದಿದ್ದಾರೆ. ತಾವೂ ಸಲ್ಲಿಸಿರುವ ನಾಮಪತ್ರದಲ್ಲಿ ಇದರ ಉಲ್ಲೇಖ ಮಾಡಲಾಗಿದೆ.
The post ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಿಎಂ ಬೊಮ್ಮಾಯಿ ಅವರ ಆಸ್ತಿ ಎಷ್ಟು ಕೋಟಿ ಗೊತ್ತಾ..? first appeared on Kannada News | suddione.
from ರಾಷ್ಟ್ರೀಯ ಸುದ್ದಿ – Kannada News | suddione https://ift.tt/6U3u2br
via IFTTT