ಕೊಲೆಸ್ಟ್ರಾಲ್ ಹೆಚ್ಚಾಗಿದ್ದರೆ ಈ ತಪ್ಪುಗಳನ್ನು ಮಾಡಬೇಡಿ

Health: ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುವುದರಿಂದ ನೀವು ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಈ ಸಮಯದಲ್ಲಿ ಜನರು ಸಾಮಾನ್ಯವಾಗಿ ಕೆಲವು ತಪ್ಪುಗಳನ್ನು ಮಾಡುತ್ತಾರೆ. ಇದರ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ.  

ಇತ್ತೀಚಿನ ದಿನಗಳಲ್ಲಿ ಕೊಲೆಸ್ಟ್ರಾಲ್ ಸಮಸ್ಯೆ ಸಾಮಾನ್ಯವಾಗಿದೆ. ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುವುದರಿಂದ ನೀವು ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಕೊಲೆಸ್ಟ್ರಾಲ್ ಹೆಚ್ಚಾದಾಗ ನೀವು ಪಾರ್ಶ್ವವಾಯು, ಟೈಪ್ 2 ಮಧುಮೇಹ ಮತ್ತು ಹೃದಯಾಘಾತದಂತಹ ಕಾಯಿಲೆಗಳನ್ನು ಎದುರಿಸಬೇಕಾಗುತ್ತದೆ. ಈ ಸಮಯದಲ್ಲಿ ಜನರು ಸಾಮಾನ್ಯವಾಗಿ ಕೆಲವು ತಪ್ಪುಗಳನ್ನು ಮಾಡುತ್ತಾರೆ. ಇದು ಮುಂದೆ ಅವರಿಗೆ ತುಂಬಾ ಸಮಸ್ಯೆಯನ್ನುಂಟು ಮಾಡುತ್ತದೆ. ಕೊಲೆಸ್ಟ್ರಾಲ್ ಹೆಚ್ಚಾದಾಗ ನಾವು ಯಾವ ತಪ್ಪುಗಳನ್ನು ಮಾಡಬಾರದು ಎಂದು ತಿಳಿಯಿರಿ.

ಈ ತಪ್ಪುಗಳು ಕೊಲೆಸ್ಟ್ರಾಲ್ ಹೆಚ್ಚಿಸುತ್ತವೆ!

ಅನಾರೋಗ್ಯಕರ ಆಹಾರ: ನಿಮ್ಮ ಕೊಲೆಸ್ಟ್ರಾಲ್ ಅಧಿಕವಾಗಿದ್ದರೆ ಮತ್ತು ನೀವು ನಿರಂತರವಾಗಿ ಅನಾರೋಗ್ಯಕರ ಆಹಾರ ಸೇವಿಸುತ್ತಿದ್ದರೆ, ನಿಮ್ಮ ಆರೋಗ್ಯವು ಅಪಾಯದ ಹಂತಕ್ಕೆ ಹೋಗುತ್ತದೆ. ಕೊಲೆಸ್ಟ್ರಾಲ್ ಹೆಚ್ಚಾದಾಗ ಪ್ಯಾಕ್ ಮಾಡಿದ ಆಹಾರ, ಮಾಂಸ ಮತ್ತು ಸಂಸ್ಕರಿಸಿದ ಆಹಾರ ಸೇವಿಸಬಾರದು. ಏಕೆಂದರೆ ಈ ಆಹಾರಗಳ ಸೇವನೆಯು ಕೊಲೆಸ್ಟ್ರಾಲ್ ಮಟ್ಟವನ್ನು ಮತ್ತಷ್ಟು ಹೆಚ್ಚಿಸುತ್ತದೆ.

ವ್ಯಾಯಾಮ ಮಾಡಿ: ನೀವು ವ್ಯಾಯಾಮ ಮಾಡದಿದ್ದರೆ ಹೆಚ್ಚಿದ ಕೊಲೆಸ್ಟ್ರಾಲ್ ನಿಮಗೆ ಕಷ್ಟವಾಗಬಹುದು. ಕೊಲೆಸ್ಟ್ರಾಲ್ ಹೆಚ್ಚಾದಾಗ ಪ್ರತಿದಿನ ವ್ಯಾಯಾಮ ಮಾಡಿ ಆರೋಗ್ಯ ಕಾಪಾಡಿಕೊಳ್ಳಬೇಕು.

ಧೂಮಪಾನ: ಧೂಮಪಾನವು ದೇಹದಲ್ಲಿನ ಒಳ್ಳೆಯ ಕೊಲೆಸ್ಟ್ರಾಲ್ ಕಡಿಮೆ ಮಾಡಿ, ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಿಸುತ್ತದೆ. ಇದು ಹೃದಯಾಘಾತದ ಅಪಾಯವನ್ನೂ ಹೆಚ್ಚಿಸುತ್ತದೆ. ಹೀಗಾಗಿ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವನ್ನು ಕಡಿಮೆ ಮಾಡಲು ಧೂಮಪಾನವನ್ನು ಸಂಪೂರ್ಣವಾಗಿ ತ್ಯಜಿಸಬೇಕು.

(ಗಮನಿಸಿರಿ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆ ತೆಗೆದುಕೊಳ್ಳಬೇಕು. Samagrasuddi.co.in ಇದನ್ನು ದೃಢಪಡಿಸುವುದಿಲ್ಲ.)

Source: https://zeenews.india.com/kannada/health/health-tips-if-cholesterol-is-high-do-not-do-these-mistakes-130499

Leave a Reply

Your email address will not be published. Required fields are marked *