ಯುವನಿಧಿಗೆ ಅರ್ಜಿ ಸಲ್ಲಿಸುವುದು ಹೇಗೆ? ಈ ವಿಡಿಯೋ ‘ಮಿಸ್‌’ ಮಾಡದೇ ನೋಡಿ.

ಬೆಂಗಳೂರು: ನೀವೂ 2023 ರಲ್ಲಿ ಪದವೀಧರರಾಗಿದ್ದು, ಉದ್ಯೋಗದ ಹುಡುಕಾಟ ನಡೆಸುತ್ತಿದ್ದೀರಾ? ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿ ಇಲ್ಲವೇ? ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಏನು? ಪ್ರಕ್ರಿಯೆ ಹೇಗೆ? ಯಾವೆಲ್ಲ ದಾಖಲೆಗಳು ಬೇಕು? ಎಂಬ ಪೂರ್ಣ ಮಾಹಿತಿ ಈ ವೀಡಿಯೋದಲ್ಲಿದೆ.

ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲೊಂದಾದ ಯುವನಿಧಿ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಪದವಿ ಪಾಸಾದವರಿಗೆ ರೂ.3000 ಮತ್ತು ಡಿಪ್ಲೋಮಾ ಪಾಸಾದವರಿಗೆ ರೂ.1500ಗಳನ್ನು ನೀಡಲಾಗುತ್ತದೆ. ಅರ್ಹರು ಸೇವಾ ಸಿಂಧು ಪೋರ್ಟಲ್, ಅಟಲ್ ಜೀ ಕೇಂದ್ರ, ಕರ್ನಾಟಕ-1, ಬಳ್ಳಾರಿ-1 ಮತ್ತು ಇತರೆ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಸಿಕೊಳ್ಳಬಹುದು.

*ಅರ್ಹರು:*
2023ರಲ್ಲಿ ಪದವಿ, ಡಿಪ್ಲೋಮಾ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ. ಪದವಿ, ಡಿಪ್ಲೋಮಾ ನಂತರ ಕನಿಷ್ಠ 6 ತಿಂಗಳ ಅವಧಿಯವರೆಗೆ ಸರ್ಕಾರಿ, ಖಾಸಗಿ ಉದ್ಯೋಗ ಹೊಂದಿಲ್ಲದವರಾಗಿರಬೇಕು. ಸ್ವಯಂ ಉದ್ಯೋಗ ಹೊಂದಿರಬಾರದು. ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವವರು ಅರ್ಹರು. ಕರ್ನಾಟಕದಲ್ಲಿ ವಾಸವಿರುವವರು (ಕನಿಷ್ಠ 6 ವರ್ಷಗಳವರೆಗೆ ಪದವಿ, ಡಿಪ್ಲೋಮಾದವರೆಗೆ ಅಧ್ಯಯನ ಮಾಡಿದವರು). *ದಾಖಲೆಗಳು:* ಎಸ್.ಎಸ್.ಎಲ್.ಸಿ., ಪಿಯುಸಿ, ಪದವಿ ಅಥವಾ ಡಿಪ್ಲೋಮಾ ಪ್ರಮಾಣ ಪತ್ರ.

Source : https://m.dailyhunt.in/news/india/kannada/kannadanewsnow-epaper-kanowcom/yuvanidhige+arji+sallisuvudu+hege+ee+vidiyo+mis+maadade+nodi-newsid-n569778508?listname=topicsList&topic=for%20you&index=0&topicIndex=0&mode=pwa&action=click

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group : https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

ಸಮಗ್ರಸುದ್ದಿ ವ್ಯಾಟ್ಸಪ್ ಗ್ರೂಪ್ ಗೆ ಸೇರಲು ಈ ಕೆಳಗಿನ ಲಿಂಕ್ ಒತ್ತಿ

https://chat.whatsapp.com/KnDIfiBURQ9G5sLEJLqshk

 

Leave a Reply

Your email address will not be published. Required fields are marked *