ಜೆ ಎನ್ ಕೋಟೆ ಗ್ರಾಮದಲ್ಲಿ ಬೃಹತ್ ಕಣ್ಣಿನ ಶಸ್ತ್ರಚಿಕಿತ್ಸಾ ಶಿಬಿರ|ಸತ್ತಾಗ ಕಣ್ಣುಗಳನ್ನು ಮಣ್ಣುಪಾಲು ಮಾಡದೆ ನೇತ್ರದಾನ ಮಾಡಿ: ಡಾ.ಜಿ.ಪಿ.ರೇಣುಪ್ರಸಾದ್.

ಚಿತ್ರದುರ್ಗ ಅ.4: ದಿನಾಂಕ 03-10-2024 ರಂದು ಚಿತ್ರದುರ್ಗ ತಾಲೂಕಿನ ಜೆ.ಎನ್.ಕೋಟೆ ಗ್ರಾಮ ಪಂಚಾಯಿತಿ ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಾಲೂಕ್ ಪಂಚಾಯಿತಿ ಜಿಲ್ಲಾ ಅಂದತ್ವ ನಿವಾರಣ ವಿಭಾಗ ತಾಲೂಕಾ ಆರೋಗ್ಯ ಅಧಿಕಾರಿಗಳ ಕಚೇರಿ ಚಿತ್ರದುರ್ಗ ಶಂಕರ ಕಣ್ಣಿನ ಆಸ್ಪತ್ರೆ, ಬೆಂಗಳೂರು ಜೆ.ಎನ್.ಕೋಟೆ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಬೃಹತ್ ಉಚಿತ ನೇತ್ರ ತಪಾಸಣೆ ಶಸ್ತ್ರಚಿಕಿತ್ಸೆ ಹಾಗೂ ಕನ್ನಡಕ ವಿತರಣಾ ಶಿಬಿರವನ್ನ ಚಾಲನೆ ನೀಡಿ ಜಿಲ್ಲಾ ಆರೋಗ್ಯ ಮತ್ತು ಕು.ಕ.ಅಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಮಾತನಾಡಿ ಕಣ್ಣುಗಳು ನಮ್ಮ ಆತ್ಮದ ಕಿಟಕಿಗಳಿದ್ದಂತೆ ಅದರ ರಕ್ಷಣೆ ಅಮೂಲ್ಯವಾದದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಣ್ಣುಗಳ ಆರೋಗ್ಯವನ್ನು ಕಾಪಾಡಿಕೊಳ್ಳಿ ಸತ್ತಾಗ ಕಣ್ಣುಗಳನ್ನು ಮಣ್ಣುಪಾಲು ಮಾಡದೆ ನೇತ್ರದಾನ ಮಾಡಿ.


ನೇತ್ರ ತಪಾಸಣೆ ಚಿಕಿತ್ಸಾ ಶಿಬಿರವು ಕೇವಲ ಈ ಒಂದು ದಿನಕ್ಕೆ ಮಾತ್ರ ಸೀಮಿತವಾಗಿರದೆ ಪ್ರತಿ ತಿಂಗಳು ಆಯ್ದ ಗ್ರಾಮಗಳಲ್ಲಿ ಶಿಬಿರ ನಟಿಸಲಾಗುವುದು ಸಾರ್ವಜನಿಕರು ಇದರ ಸದುಪಯೋಗ ಆಗಿರುತ್ತದೆ ಪಡಿಸಿಕೊಳ್ಳಿ ಎಂದರು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ರವೀಂದ್ರ ಮಾತನಾಡಿ ಪಂಚೇಂದ್ರಿಯಗಳಲ್ಲಿ ಪ್ರಧಾನವಾದ ಇಂದ್ರಿಯ ಕಣ್ಣು ಕಣ್ಣುಗಳನ್ನು ದಾನ ಮಾಡುವವರು ಮುಂದೆ ಬನ್ನಿ ಅಂದತ್ವ ನಿವಾರಣೆಗಾಗಿ ಎಲ್ಲರೂ ಕೈ ಜೋಡಿಸಿ ಜಿಲ್ಲಾ ಆಸ್ಪತ್ರೆಯಲ್ಲಿ ಈ ವರ್ಷ 1200 ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಿ ಉಚಿತವಾಗಿ ಕನ್ನಡಕಗಳನ್ನು ವಿವರಿಸಲಾಗಿದೆ ಕಾರ್ಯಕ್ರಮದಲ್ಲಿ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾಕ್ಟರ್ ಡಾ.ಜಿ.ಓ.ನಾಗರಾಜ್ ಮಾತನಾಡಿ ಜಿಲ್ಲೆಯಲ್ಲಿ ಅಂಧತ್ವ ನಿಯಂತ್ರಣ ಕಾರ್ಯಕ್ರಮಕ್ಕೆ ತೆಗೆದುಕೊಂಡು ಯೋಜನೆ ಅನುಷ್ಠಾನದ ಬಗ್ಗೆ, ಆಶಾಕಿರಣ ಕಾರ್ಯಕ್ರಮದ ಬಗ್ಗೆ ತಿಳಿಸಿದರು.

ಕಾರ್ಯಕ್ರಮ ದಲ್ಲಿ ಕೆ.ಡಿ.ಪಿ.ಸದಸ್ಯರಾದ ಕೆ.ಸಿ.ನಾಗರಾಜ್, ವಾಣಿಜ್ಯೋದ್ಯಮಿ ಬಾಬಣ್ಣ ಗ್ರಾಮ,ಪಂಚಾಯ್ತಿ ಅಧ್ಯಕ್ಷ ಮಲ್ಲೇಶಪ್ಪ, ಉಪಾದ್ಯಕ್ಷ ನಾಗಮ್ಮ ಪಿ.ಡಿ.ಓ. ಮಂಜುಳ, ಶಂಕರ್ ಶಸ್ಪತ್ರೆ ಡಾ.ರವಿಕಿರಣ್, ಜಿಲ್ಲಾ ಆಯುಷ್ ಅಧಿಕಾರಿ ಚಂದ್ರಕಾಂತ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್, ರಾಮು ನೇತ್ರಾಧಿಕಾರಿ ಯೋಗಗುರು ರವಿ ಕೆ.ಅಂಬೇಕರ್, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿಗಳಾದ ಎನ್.ಎಸ್.ಮಂಜುನಾಥ, ಬಿ.ಜಾನಕಿ ಆಯುಷ್ ಡಾ. ಲಕ್ಷ್ಮಿ ಬಾಗೇಶ್, ಶ್ರೀ ಧರ್ ಪ್ರವೀಣ್ ಇತರರು ಉಪಸ್ಥಿತರಿದ್ದರು ಕಾರ್ಯಕ್ರಮದಲ್ಲಿ 219 ಜನರ ತಪಾಸಣೆ ನಡೆಸಲಾಯಿತು ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಗೆ 52 ಅರ್ಹ ಫಲಾನುಭವಿಗಳು ಆಯ್ಕೆಯಾದರು

Leave a Reply

Your email address will not be published. Required fields are marked *