ವಿಶ್ವದ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ಸತತ 5ನೇ ಬಾರಿ ಸ್ಥಾನ ಪಡೆದ ಮಡಿಕೇರಿಯ ಡಾ.ಜೆ.ಜಿ.ಮಂಜುನಾಥ.

ಕೊಡಗು: ಯು.ಎಸ್.ಎ.ಯ ಸ್ಟ್ಯಾನ್‌ಫೋರ್ಡ್ ವಿ.ವಿ. ಮತ್ತು ಎಲ್ಸ್ವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಪ್ರಕಟಿಸಿರುವ ವಿಶ್ವದ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ಡಾ.ಜೆ.ಜಿ.ಮಂಜುನಾಥ (Dr JG Manjunatha) ಅವರು ಸತತ 5ನೇ ಬಾರಿ ಸ್ಥಾನ ಪಡೆದಿದ್ದಾರೆ.

ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ.ಜೆ.ಜಿ.ಮಂಜುನಾಥ ಅವರು “Analytical Chemistry and Energy” ವಿಷಯಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಕಟಿಸಿರುವ ಸಂಶೋಧನಾ ಲೇಖನಗಳ ಆಧಾರದ ಮೇಲೆ ಇವರು 2024ರ ಸಾಲಿನ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ 8257ನೇ ಸ್ಥಾನವನ್ನು ಮತ್ತು ವಿಶ್ವದ ವೃತ್ತಿಜೀವಮಾನ ಸಾಧಕರ ಪಟ್ಟಿಯಲ್ಲಿ 65119ನೇ ಸ್ಥಾನವನ್ನು ಪಡೆದಿದ್ದಾರೆ (ಸಂಯೋಜಿತ ಅಂಕಗಳ ಆಧಾರದ ಮೇಲೆ ಶ್ರೇಣಿ).

ಇವರು 194 ಅಂತರಾಷ್ಟ್ರೀಯ ಲೇಖನಗಳನ್ನು ಅತ್ಯಂತ ಪ್ರತಿಷ್ಟಿತ ಜರ್ನಲ್‌ಗಳಲ್ಲಿ ಪ್ರಕಟಿಸಿದ್ದು, 25 ಪುಸ್ತಕಗಳನ್ನು ಹೊರ ತಂದಿದ್ದಾರೆ. 27 ಜರ್ನಲ್‌ಗಳಲ್ಲಿ ಎಡಿಟೋರಿಯಲ್ ಬೋರ್ಡ್ಮೆಂಬರ್ ಆಗಿಯೂ ಹಾಗೂ Sensing technology (Taylor and francis) ಜರ್ನಲ್‌ನ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿರುತ್ತಾರೆ.

ಇವರ ಈ ಸಾಧನೆಯೂ ಫೀಲ್ಡ್‌ ಮಾರ್ಷಲ್‌ ಕೆ.ಎಂ.ಕಾರ್ಯಪ್ಪ ಕಾಲೇಜ್ ಗೆ ಹೆಮ್ಮೆ ತಂದಿದೆ ಎಂದು ಮಂಗಳೂರು ವಿಶ್ವವಿದ್ಯಾಲಯ ಮತ್ತು ಕೊಡಗು ವಿಶ್ವವಿದ್ಯಾಲಯದ ಕುಲಪತಿಯವರು, ಕುಲಸಚಿವರು, ಕಾಲೇಜಿನ ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Source : https://vistaranews.com/karnataka/kodagu/km-cariappa-college-dr-jg-manjunatha-has-been-ranked-among-the-worlds-top-scientists-for-the-fifth-time-in-a-row/723354.html

Leave a Reply

Your email address will not be published. Required fields are marked *