ಈಡಿಗ–ಬಿಲ್ಲವ–ನಾಮಧಾರಿ 18 ಬೇಡಿಕೆಗಳ ಈಡೇರಿಕೆಗಾಗಿ 700 ಕಿಮೀ ಪಾದಯಾತ್ರೆ: ಡಾ. ಪ್ರಣವಾನಂದ ಸ್ವಾಮಿಜಿ ಘೋಷಣೆ.

ಚಿತ್ರದುರ್ಗ ಡಿ. 02 ಈಡಿಗ ಬಿಲ್ಲವ ನಾಮಧಾರಿ ಸಮುದಾಯದ 18 ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ 2026 ಜನವರಿ 06 ರಿಂದ ಕಲ್ಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಕರದಾಳ್‍ನ ಶ್ರೀ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದಿಂದ ಪಾದಯಾತ್ರೆಯನ್ನು ಪ್ರಾರಂಭಿಸಲಿದ್ದೇವೆ ಎಂದು ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಕರದಾಳನ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಡಾ. ಪ್ರಣವಾನಂದ ಸ್ವಾಮಿಜಿ ತಿಳಿಸಿದರು.

ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಶ್ರೀಗಳು, ದಿನಕ್ಕೆ 20 ಕಿಲೋಮೀಟರ್ ನಡೆದು 41 ದಿನಗಳ ನಂತರ ಬೆಂಗಳೂರಿಗೆ ತಲುಪಿ ಫ್ರೀಡಂ ಪಾರ್ಕ್ ನಲ್ಲಿ ಬಹಿರಂಗ ಸಭೆ ನಡೆಸಿ ಬೇಡಿಕೆಗಳ ಈಡೇರಿಕೆಗಾಗಿ ಅಮರಣಾಂತರ ಉಪವಾಸ ಸತ್ಯಾಗ್ರಹ ಪ್ರಾರಂಭಿಸಲಾಗುವುದು ಎಂದ ಅವರು, ಈಡಿಗ ಬಿಲ್ಲವ, ನಾಮಧಾರಿ, ಧೀವರ, ತೀಯ ಸೇರಿದಂತೆ 26 ಪಂಗಡಗಳನ್ನು ಹೊಂದಿದ ಸಮಾಜದ ಬೇಡಿಕೆ ಈಡೇರಿಕೆಗಾಗಿ 2026 ಜನವರಿ 06ನೇ ತಾರೀಖಿನಿಂದ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠ ಕರದಾಳದಿಂದ ಬೆಂಗಳೂರುವರೆಗೆ ಐತಿಹಾಸಿಕ ಪಾದಯಾತ್ರೆ (700ಕಿಮಿ 41 ದಿನ) ನಡೆಯಲಿದೆಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ಕೂಡಲೇ 500 ಕೋಟಿ ರೂಪಾಯಿ ಬಿಡುಗಡೆ ಮಾಡಬೇಕು,ಕುಲಕಸುಬು ಕಳೆದುಕೊಂಡ ಕಲ್ಯಾಣ ಕರ್ನಾಟಕ ಭಾಗದ ಸಂತ್ರಸ್ತ ಈಡಿಗರಿಗೆ 5 ಎಕರೆ ಜಮೀನು ಪ್ರತಿ ಕುಟುಂಬಕ್ಕೆ ಮಂಜೂರು ಮಾಡುವುದು ಸಮಾಜವನ್ನು ಈಗಿರುವ 2ಎಯಿಂದ ಎಸ್,ಟಿ ಮೀಸಲಾತಿಗೆ ಸೇರಿಸುವುದಕ್ಕೆ ರಾಜ್ಯ ಸರಕಾರದಿಂದ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಬೇಕು ಬ್ರಹ್ಮಶ್ರೀ ನಾರಾಯಣ ಗುರುಗಳ ಪುತ್ಥಳಿಯನ್ನು ಬೆಂಗಳೂರಿನ ಧಾನಸೌಧದ ಎದುರುಗಡೆ ಸ್ಥಾಪಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದ ಈಡಿಗ ಸಮಾಜದ ಹಾಗೂ ಹಿಂದುಳಿದ ವರ್ಗದ ಭಕ್ತಿ ಶ್ರದ್ಧಾ ಕೇಂದ್ರವಾದ ಶ್ರೀ ಸಿಗಂಧೂರು ಚೌಡೇಶ್ವರಿ ದೇವಸ್ಥಾನದ ವಿರುದ್ಧ ಹೂಡಿದ ಮೊಕ್ಕದ್ದಮೆಗಳನ್ನು ಕೂಡಲೇ ಹಿಂತೆಗೆದುಕೊಂಡು ದೇವಸ್ಥಾನಕ್ಕೆ ಸೂಕ್ತ ಭದ್ರತೆ ನೀಡಿ ಹಾಗೂ ಕ್ಷೇತ್ರಕ್ಕೆ ಅಗತ್ಯ ಭೂಮಿ ಮಂಜೂರು ಮಾಡಬೇಕು. ಮದ್ಯ ಮಾರಾಟದಲ್ಲಿ ಸಮಾಜದ ಈಡಿಗ ಸೇರಿದಂತೆ 26 ಪಂಗಡÀಗಳಿಗೆ ಶೇ 50% ರಷ್ಟು ಮೀಸಲಾತಿ ನೀಡಬೇಕು ಕೋಟಿ ಚೆನ್ನಯ್ಯರ ಜನ್ಮಸ್ಥಳ ಮತ್ತು ಐಕ್ಯಸ್ಥಳ ಅಭಿವೃದ್ಧಿಗಾಗಿ ಕೋಟಿಚೆನ್ನಯ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ಪ್ರತಿ ಬಜೆಟ್‍ನಲ್ಲಿ ಕನಿಷ್ಟ 100 ಕೋಟಿ ರೂಪಾಯಿ ಮಂಜೂರು ಮಾಡಬೇಕು ರಾಜ್ಯದ ಎಲ್ಲಾ ವಿಶ್ವವಿದ್ಯಾಲಯದಲ್ಲಿ ನಾರಾಯಣ ಗುರುಗಳ ಅಧ್ಯಯನ ಪೀಠ ಸ್ಥಾಪಿಸುವುದು ಮತ್ತು ರಾಜ್ಯದ ಒಂದು ವಿಶ್ವವಿದ್ಯಾಲಯಕ್ಕೆ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರು ಘೋಷಣೆ ಮಾಡುವುದು. ಅನುಭವ ಮಂಟಪದಲ್ಲಿ ಈಡಿಗ ಜನಾಂಗದ ಶರಣರಾದ ಹೆಂಡÀದ ಮಾರಯ್ಯನವರ ಜಯಂತಿ ಆಚರಣೆಯನ್ನು ಸರಕಾರ ಘೋಷಣೆ ಮಾಡಬೇಕು ಎಂದು ಡಾ|| ಪ್ರಣವಾನಂದಸ್ವಾಮೀಜಿ ಒತ್ತಾಯಿಸಿದರು.

ರಾಜ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆಯ ಸಂದರ್ಭದಲ್ಲಿ ಸಮುದಾಯದ ಸಾಧಕರಿಗೆ ಬ್ರಹ್ಮಶ್ರೀ ನಾರಾಯಣ ಗುರು “ರಾಜ್ಯ ಮಟ್ಟದ ಪ್ರಶಸ್ತಿಯನ್ನು ಐದು ಲಕ್ಷ ನಗದು ಪುರಸ್ಕಾರದೊಂದಿಗೆ ನೀಡುವುದು ಆಶ್ರಯ ಮತ್ತು ವಸತಿ ಯೋಜನೆಯಲ್ಲಿ ಸಮಾಜಕ್ಕೆ ಪ್ರತ್ಯೇಕವಾಗಿ 25 ಸಾವಿರ ಮನೆ ಮಂಜೂರು ಮಾಡಬೇಕು,ರಾಜ್ಯದ ಎಲ್ಲಾ ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿಯೂ ಬ್ರಹ್ಮಶ್ರೀ ನಾರಾಯಾಣ ಗುರುಭವನ ನಿರ್ಮಿಸುವುದಕ್ಕೆ ಭೂಮಿ ಮಂಜೂರು ಮಾಡಬೇಕು ಮಂಗಳೂರು ವಿಮಾನ ನಿಲ್ದಾಣಕ್ಕೆ ” ಕೋಟಿ ಚೆನ್ನಯ್ಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ” ಎಂದು ಘೋಷಣೆ ಮಾಡಿ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಬೇಕು. ಸಮುದಾಯದ ಟ್ರಸ್ಟ್‍ವೊಂದಕ್ಕೆ ಮೆಡಿಕಲ್ ಕಾಲೇಜು ಮಂಜೂರಾತಿ ಮಾಡುವುದು ಶಿವಮೊಗ್ಗ, ಮಂಗಳೂರು, ಕಾರವಾರ, ಉಡುಪಿ ಪ್ರತಿ ಜಿಲ್ಲೆಯಲ್ಲಿ 5 ಎಕರೆ ಜಮೀನು ಮಂಜೂರು ಮಾಡಿ ಐಎಎಸ್, ಐಪಿಎಸ್, ಕೆಎಎಸ್ ತರಬೇತಿ ಕೇಂದ್ರಗಳನ್ನು ಸ್ಥಾಪಿಸುವುದಕ್ಕೆ ಸರ್ಕಾರ ಮುಂದಾಗಬೇಕಿದೆ ಎಂದರು.

Views: 30

Leave a Reply

Your email address will not be published. Required fields are marked *