
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮ ಟ್ರಸ್ಟ್ ನ ಆಡಳಿತ ಮಂಡಳಿಯ ನೂತನ ಅಧ್ಯಕ್ಷರನ್ನಾಗಿ ಡಾ. ಶ್ರೀಬಸವಮೂರ್ತಿ ಮಾದಾರಚನ್ನಯ್ಯ ಸ್ವಾಮೀಜಿಯವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಮಂಗಳವಾರ ನಡೆದ ಟ್ರಸ್ಟ್ ನ ವಿಶೇಷ ಸಾಮಾನ್ಯ ಸಭೆಯಲ್ಲಿ ಉಪಾಧ್ಯಕ್ಷರಾದ ರಾಘವೇಂದ್ರ ಪಾಟೀಲ್, ಕಾರ್ಯದರ್ಶಿ ಎಸ್ ಕೆ ಬಸವರಾಜನ್, ಖಜಾಂಚಿ ಡಾ. ಜಿ ಎನ್ ಮಲ್ಲಿಕಾರ್ಜುನಪ್ಪ,ವಿಶ್ವಸ್ತ ಮಂಡಳಿಯ ಸದಸ್ಯರಾದ ಪ್ರಕಾಶ್, ಕೆಂಗುಂಟೆ ಜಯಪ್ಪ, ಸೊಂಡೆಕೊಳ ಶ್ರೀನಿವಾಸ್, ರಾಮದಾಸ್,ರವಿಕುಮಾರ್, ರಾಜಪ್ಪ, ಶ್ರೀಕಂಠಮೂರ್ತಿ,ಎಲ್ ಎಸ್ ಶಿವರಾಮಯ್ಯ, ದ್ಯಾಮಣ್ಣ ಪಾಲ್ಗೊಂಡು ಸ್ವಾಮೀಜಿಯವರ ಹೆಸರನ್ನು ಅಧ್ಯಕ್ಷ ಸ್ಥಾನಕ್ಕೆ ಸರ್ವಾನುಮತದಿಂದ ಆಯ್ಕೆ ಮಾಡಿದರು.
ನಂತರ ಶ್ರೀ ಬಸವಮೂರ್ತಿ ಮಾದಾರಚನ್ನಯ್ಯ ಸ್ವಾಮೀಜಿಯವರು ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮದ ಆವರಣದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮೀಜಿ, ಹಾಗೂ ಸೂರ್ ದಾಸ್ ಸ್ವಾಮೀಜಿಯವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಆಶ್ರಮದ ಶಾಲೆ ಕಾಲೇಜು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಸ್ವಾಮೀಜಿಯವರು ಕುಗ್ರಾಮವಾದ ಮಲ್ಲಾಡಿಹಳ್ಳಿಯನ್ನು ಗುರಿತಿಸಿದ ರಾಘವೇಂದ್ರ ಸ್ವಾಮೀಜಿಯವರು ತಮ್ಮ ಅವಿರತ ಸೇವೆಯ ಮೂಲಕ ಮತ್ತು ಶಿಕ್ಷಣ ಸಂಸ್ಕಾರದ ಕ್ರಾಂತಿಯ ಈ ಗ್ರಾಮವನ್ನು ದೇಶದ ಗಮನ ಸೆಳೆಯುವಂತೆ ಮಾಡಿದರು.ಅವರ ಶ್ರಮ ವ್ಯರ್ಥ ವಾಗದಂತೆ ನಡೆದುಕೊಳ್ಳಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1