ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಫೆ. 12
ಚಿತ್ರದುರ್ಗ ವಿಧಾನಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಾರ್ಟಿವತಿಯಿಂದ ಚುನಾವಣಾ ಬೂತ್ ಏಜೆಂಟರಾಗಿ (ಃಐಂ-01) ಜಿಲ್ಲಾ ಉಪಾಧ್ಯಕ್ಷರಾದ ಡಾ. ಸಿದ್ಧಾರ್ಥ ಗುಂಡಾರ್ಪಿರವರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ರವರು ಆದೇಶ ಮಾಡಿದ್ದಾರೆ.
ಈ ಆದೇಶ ಪತ್ರವನ್ನು ಗುರುವಾರ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳು, ಜಿಲ್ಲಾಧಿಕಾರಿಗಳಾದ ವೆಂಕಟೇಶ್ ರವರಿಗೆ ಪಕ್ಷ ನೀಡಿದ ಪತ್ರವನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ನ್ಯಾಯಾವಾದಿ ಕೆ.ಎನ್.ವಿಶ್ವನಾಥಯ್ಯ, ಜಿಲ್ಲಾ ಉಪಾಧ್ಯಕ್ಷರಾದ ಲಿಂಗರಾಜು, ನಗರಾಧ್ಯಕ್ಷ ಲೋಕೇಶ್, ಗ್ರಾಮಾಂತರ ಅಧ್ಯಕ್ಷ ನಾಗರಾಜ್, ನಗರ ಉಪಾಧ್ಯಕ್ಷರಾದ ಬಸವರಾಜು ಉಪಸ್ಥಿತರಿದ್ದರು.
