Ballari Hospital Doctor Kidnapped : ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ್ ವಾಕಿಂಗ್ ಮಾಡುವಾಗ ಅಪಹರಣ ಮಾಡಲಾಗಿದೆ. ಸದ್ಯ ಮೂರು ಕೋಟಿ ರೂಗಳಿಗೆ ಅಪಹರಣಕಾರರು ಬೇಡಿಕೆ ಇಟ್ಟಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು ಕಿಡ್ನಾಪರ್ ಪತ್ತೆಗೆ ಮುಂದಾಗಿದ್ದಾರೆ. ಈ ಬಗ್ಗೆ ಮಾಹಿತಿ ಇಲ್ಲಿದೆ.
ಹೈಲೈಟ್ಸ್:
- ಜಿಲ್ಲಾ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ್ ಅಪಹರಣ.
- ಮೂರು ಕೋಟಿ ರೂ. ಬೇಡಿಕೆ ಇಟ್ಟ ಕಿಡ್ನಾಪರ್ಸ್.
- ಬೆಳಿಗ್ಗೆ ವಾಕಿಂಗ್ ಮಾಡುವ ಸಂದರ್ಭದಲ್ಲಿ ಕಾರಿನಲ್ಲಿ ಬಂದು ಎತ್ತಿಕೊಂಡು ಹೋದ ಅಪಹರಣಕಾರರು.
ಬಳ್ಳಾರಿ: ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ್ ಅವರನ್ನು ನಗರದ ಸತ್ಯನಾರಾಯಣ ಪೇಟೆಯಲ್ಲಿನ ಶನೇಶ್ವರ ದೇವಸ್ಥಾನದ ಬಳಿ ವಾಕಿಂಗ್ ಮಾಡುವಾಗ ಅಪರಿಚಿತ ವ್ಯಕ್ತಿಗಳು ಶನಿವಾರ ಬೆಳಗ್ಗೆ ಕಿಡ್ನಾಪ್ ಮಾಡಿದ್ದು, ಮೂರು ಕೋಟಿ ರೂಗಳಿಗೆ ಅಪಹರಣಕಾರರು ಬೇಡಿಕೆ ಇಟ್ಟಿದ್ದಾರೆ.
ಟಾಟಾ ಇಂಡಿಗೋ ಕಾರಿನಲ್ಲಿ ಬಂದಿದ್ದ ಅಪಹರಣಕಾರರು ವೈದ್ಯರನ್ನು ತಕ್ಷಣ ಬಾಯಿಮುಚ್ಚಿ ಕಾರಿನಲ್ಲಿ ಕೂಡಿಸಿಕೊಂಡು ತೆರಳಿದ್ದಾರೆ. ಇವರ ಸಹೋದರ ವೇಣು ಅವರು ಜಿಲ್ಲಾ ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷರಾಗಿದ್ದಾರೆ. ಇವರ ಬಳಿ ಹೆಚ್ಚಿನ ಹಣ ಇದೆಂದು ಕಿಡ್ನಾಪ್ ಮಾಡಿಸಲಾಗಿದೆಂದು ಹೇಳಲಾಗುತ್ತಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು ಕಿಡ್ನಾಪರ್ ಪತ್ತೆಗೆ ಮುಂದಾಗಿದ್ದಾರೆ.