ಚಿತ್ರದುರ್ಗ: ಹಿಂದುಳಿದ ವರ್ಗಗಳ ಸಂಘಟನೆ ಹಾಗೂ ಕಾಂಗ್ರೆಸ್ ಪಕ್ಷ ಬಲವರ್ಧನೆಗೆ ಡಿ.ಟಿ. ಶ್ರೀನಿವಾಸ್ ಕರೆ.

ಸಮಗ್ರ ಸುದ್ದಿ, ಚಿತ್ರದುರ್ಗ ಸೆ. 28

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ನಮ್ಮ ವಿಭಾಗದಲ್ಲಿ ಕೆಲಸ ಮಾಡುವವರು ಉತ್ತಮವಾಗಿ ಕೆಲಸ ಮಾಡುತ್ತಿರುವವರಾಗಿರಬೇಕು ಯಾವುದೇ ಕಾರಣಕ್ಕೂ ವಿಸಿಟಿಂಗ್ ಕಾರ್ಡ್ ತೆಗೆದುಕೊಂಡು ಕಛೇರಿಗಳಿಗೆ ಹೋಗಿ ತಮ್ಮ ಕೆಲಸಗಳನ್ನು ಮಾಡಿಕೊಳ್ಳು ವಂತಹ ಕಾರ್ಯಕರ್ತರು ನಮಗೆ ಬೇಕಿಲ್ಲ ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಿ.ಟಿ. ಶ್ರೀನಿವಾಸ್ ತಿಳಿಸಿದರು.

ಕೆಪಿಸಿಸಿ ಅಧ್ಯಕ್ಷರಾದ ಬಿಕೆ ಹರಿಪ್ರಸಾದ್ ಅವರ ಸೂಚನೆಯಂತೆ, ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರು ಹಾಗೂ ಎಂಎಲ್.ಸಿ ಡಿ.ಟಿ. ಶ್ರೀನಿವಾಸ್ ಚಿತ್ರದುರ್ಗ ಜಿಲ್ಲೆಯ ಹಿಂದುಳಿದ ವರ್ಗಗಳ ವಿಭಾಗದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲು ಸೋಮವಾರ ಓಬಿಸಿ ಅಧ್ಯಕ್ಷರಾದ ಎನ್.ಡಿ.ಕುಮಾರ್ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ ಹಿಂದುಳಿದ ವರ್ಗಗಳ ಹಾಗೂ ಸಮಾಜಗಳ ಜನಸಂಖ್ಯೆ ಭಿನ್ನವಾಗಿದೆ. ಚಿತ್ರದುರ್ಗ, ಕರಾವಳಿ ಹಾಗೂ ಮಂಡ್ಯ ಸೇರಿದಂತೆ ವಿವಿಧ ಭಾಗಗಳಲ್ಲಿ ಹಿಂದುಳಿದ ವರ್ಗಗಳ ಸಂಖ್ಯೆ ಹೆಚ್ಚಾಗಿದ್ದು, ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಸುಮಾರು 3.5 ಕೋಟಿಗೂ ಹೆಚ್ಚು ಹಿಂದುಳಿದ ವರ್ಗಗಳ ಜನರಿದ್ದಾರೆ. ಈ ವಾಸ್ತವ ಸ್ಥಿತಿಯನ್ನು
ಅರಿತು ಪದಾಧಿಕಾರಿಗಳನ್ನು ಆಯ್ಕೆ ಮಾಡಲು ಜಿಲ್ಲಾ ಪ್ರವಾಸಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

2028ರ ರಾಜ್ಯ ವಿಧಾನಸಭೆ ಹಾಗೂ 2029ರ ಲೋಕಸಭಾ ಚುನಾವಣೆಗಳನ್ನು ಪ್ರಮುಖ ಗುರಿಯಾಗಿಸಿಕೊಂಡು, ಅಹಿಂಧ ಸಮುದಾಯಗಳನ್ನು ಪಕ್ಷದ ಅಡಿಯಲ್ಲಿ ಸಂಘಟಿಸಿ ಬಲಪಡಿಸುವುದು ಅತ್ಯಗತ್ಯವಾಗಿದೆ ಎಂದು ಪ್ರತಿಪಾದಿಸಿ ಕಳೆದ 12 ವರ್ಷಗಳಿಂದ ಅಧಿಕಾರದಲ್ಲಿರುವ ಕೇಂದ್ರ ಸರ್ಕಾರವು 2014ರ ಚುನಾವಣೆ ವೇಳೆ ಬೆಲೆ ಏರಿಕೆ, ಉದ್ಯೋಗ ಸೃಷ್ಟಿ, ಆರ್ಥಿಕತೆ ಹಾಗೂ ಭ್ರಷ್ಟಾಚಾರದ ಕುರಿತು ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ, ನಿರುದ್ಯೋಗ, ತೈಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಕುರಿತು ಆಕ್ಷೇಪ ವ್ಯಕ್ತಪಡಿಸಿದರು.

ದೇಶದಲ್ಲಿ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳು ಹಾಗೂ ವಿದ್ಯಾರ್ಥಿಗಳ ಆತ್ಮಹತ್ಯೆ ಘಟನೆಗಳು ಯುವಜನತೆ ಮತ್ತು ಪೋಷಕರ ಭವಿಷ್ಯವನ್ನು ಆತಂಕಕ್ಕೆ ದೂಡಿವೆ. ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದ ಮೂಲಕ ಯುವಕರ ಮತ್ತು ವಿದ್ಯಾರ್ಥಿಗಳ ಧ್ವನಿಗೆ ಧ್ವನಿಯಾಗುವ ಕೆಲಸ ನಡೆಯುತ್ತಿದೆ ಪ್ರಸ್ತುತ ಸಾಮಾಜಿಕ ಜಾಲತಾಣಗಳ ಮೂಲಕ ಸತ್ಯ ಮಾಹಿತಿಯನ್ನು ಹಾಗೂ ಪಕ್ಷದ ವಿಚಾರಧಾರೆಗಳನ್ನು ಪ್ರತಿಯೊಬ್ಬ ಕಾರ್ಯಕರ್ತ ಮತ್ತು ಜನಸಾಮಾನ್ಯರಿಗೆ ತಲುಪಿಸುವ ಅಗತ್ಯವಿದೆ ಎಂದು ಕರೆ ನೀಡಿದರು.

ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಸಾರ್ವಜನಿಕರಿಗೆ ತಲುಪಿಸುವುದು, ಹಿಂದುಳಿದ ವರ್ಗಗಳ ಹಕ್ಕುಗಳನ್ನು ರಕ್ಷಿಸುವುದು ಹಾಗೂ ಸಾಮಾಜಿಕ ಜಾಲತಾಣಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ಮುಖ್ಯವಾಗಿದೆ. 2028 ಮತ್ತು 29ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಂತಹ ಕಾರ್ಯವನ್ನು ಪಕ್ಷದ ಎಲ್ಲಾ ಕಾರ್ಯಕರ್ತರು ಮಾಡಬೇಕಾಗಿದೆ.ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಮುಂಚೆ ವಿವಿಧ ರೀತಿಯ ಆಶ್ವಾಸನೆಗಳನ್ನು ನೀಡಿತ್ತು ಆದರೆ ಯಾವುದನ್ನು ಸಹ ಈಡೇರಿಸಿಲ್ಲ.ಇದರ ಬಗ್ಗೆ ಮತದಾರರಿಗೆ ಮನವರಿಕೆ ಮಾಡಿಕೊಡಬೇಕಿದೆ.. ದೇಶದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಹಿಂದೆ ಇದ್ದಂತಹ ಯುಪಿಎ ಸರ್ಕಾರವನ್ನು ಟೀಕೆ ಮಾಡುತ್ತಾ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ತನ್ನ ಅಧಿಕಾರಾವಧಿಯಲ್ಲಿ ಯಾವುದೇ ಪ್ರಕರಣಗಳನ್ನು ತನಿಖೆ ಮಾಡದೇ ಯಾರೊಬ್ಬರಿಗೂ ಸಹ ಶಿಕ್ಷೆಯನ್ನು ಕೊಡಿಸಿಲ್ಲ.

ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲಾ ಸಮಿತಿಯನ್ನು ರಚಿಸಲಾಗುವುದು. ಮುಂದೆ ಬರುವಂತಹ ಎಲ್ಲಾ ಸ್ಥಳೀಯ ಚುನಾವಣೆಗಳಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಸ್ಪರ್ಧೆ ಮಾಡುವುದರ ಮೂಲಕ ಗೆಲುವನ್ನು ಸಾಧಿಸಿ ಅಧಿಕಾರವನ್ನು ಹಿಡಿಯಬೇಕಾಗಿದೆ.ಇದಕ್ಕೆ ಬೇಕಾದ ತಯಾರಿಯನ್ನು ಮಾಡಿಕೊಂಡು ಮತದಾರರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗೆಲುವು ಸಾಧಿಸುವತ್ತ ಮುನ್ನಡೆಯಬೇಕಾಗಿದೆ ಮುಂಬರುವ ರಾಜ್ಯ ಹಾಗೂ ಕೇಂದ್ರ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಹಿಂದುಳಿದ ವರ್ಗಗಳ (ಅಹಿಂಧ) ಸಂಘಟನೆ ಮತ್ತು ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ಕಾರ್ಯವನ್ನು ಪ್ರಾರಂಭ ಮಾಡಿದ್ದಿ ಈಗಾಗಲೇ 15 ಜಿಲ್ಲೆಗಳಲ್ಲಿ ಪ್ರವಾಸ ಮಾಡಲಾಗಿದೆ ಎಂದು ಡಿ.ಟಿ. ಶ್ರೀನಿವಾಸ್ ತಿಳಿಸಿದರು.

ಸಚಿವರಾದ ರಘುಮೂರ್ತಿ ಮಾತನಾಡಿ, ಸ್ಥಳೀಯ ಸಂಸ್ಥೆಗಳು, ಕಾರ್ಯಕರ್ತರು ಹಾಗೂ ಜನಪ್ರತಿನಿಧಿಗಳ ಸಕ್ರಿಯ
ಭಾಗವಹಿಸುವಿಕೆಯಿಂದ ಮಾತ್ರ ಕಾಂಗ್ರೆಸ್ ಪಕ್ಷವನ್ನು ರಾಜ್ಯ ಮತ್ತು ದೇಶಮಟ್ಟದಲ್ಲಿ ಅಧಿಕಾರಕ್ಕೆ ತರಲು ಸಾಧ್ಯವಿದೆ. ಈ ಹಿಂದೆ ಚುನಾವಣೆ ಸಂದರ್ಭದಲ್ಲಿ ಮಧು ಬಂಗಾರಪ್ಪನವರು ಇದರ ಅಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸಿದ್ದರು ಪ್ರಸ್ತುತ ವಿವಿಧ ನಾಯಕರು ಈ ಹೊಣೆಗಾರಿಕೆಯನ್ನು ಮುನ್ನಡೆಸುತ್ತಿದ್ದಾರೆ ಎಂದು ಹೇಳಿದರು. ಕೆಪಿಸಿಸಿಯ ಬೇರೆ ಬೇರೆ ವಿಭಾಗಗಳು ಮತ್ತು ಘಟಕಗಳ ಅಧ್ಯಕ್ಷರಾಗಿ ಬರುವ ಎಲ್ಲ ನಾಯಕರೊಂದಿಗೂ ಸಹಕರಿಸಿ ಪಕ್ಷವನ್ನು ಬಲಪಡಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದರು.

ಬರಿ ಶಾಸಕರು ಅಥವಾ ಸಂಸದರು ಮಾತ್ರ ಪಕ್ಷವಲ್ಲ. ಸ್ಥಳೀಯ ಸಂಸ್ಥೆಗಳು ಹಾಗೂ ಕೆಳಮಟ್ಟದ ಕಾರ್ಯಕರ್ತರು, ಮುಖಂಡರು ಗೆದ್ದಾಗ ಮಾತ್ರ ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಾಗುತ್ತದೆ. 2028ರ ರಾಜ್ಯ ಸಾರ್ವತ್ರಿಕ ಚುನಾವಣೆ ಹಾಗೂ 2029ರಲ್ಲಿ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ದೇಶದಲ್ಲಿ ಕಾಂಗ್ರೆಸ್ ಸರ್ಕಾರ ತಂದು, ಅವರನ್ನು ದೇಶದ ಪ್ರಧಾನಮಂತ್ರಿಯನ್ನಾಗಿ ಮಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಕೆಲಸ ಮಾಡಬೇಕಾಗಿದೆ ಕಾಂಗ್ರೆಸ್ಪ ಕ್ಷವನ್ನು ಅಧಿಕಾರಕ್ಕೆ ತರಲು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಪಕ್ಷದ ಕಾರ್ಯಕರ್ತರನ್ನು ಗೆಲ್ಲಿಸಲು ಹಿಂದುಳಿದ ವರ್ಗಗಳ ವಿಭಾಗದ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಸ್ಥಳೀಯ ಮಟ್ಟದಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸಿ,
ಹಿಂದುಳಿದ ವರ್ಗಗಳ ವಿಭಾಗ ಸೇರಿದಂತೆ ಎಲ್ಲಾ ಘಟಕಗಳ ಸಹಯೋಗದೊಂದಿಗೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ಮತ್ತು ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಮಾಡುವುದು ಮುಖ್ಯ ಆಶಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಅಂಜನೇಯ, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ರಘು, ಡಿಸಿಸಿ ಅಧ್ಯಕ್ಷರಾದ ತಾಜ್ ಪೀರ್, ಕಾರ್ಯಾಧ್ಯಕ್ಷರಾಧ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಕೆ ಪಿ ಸಂಪತ್ ಕುಮಾರ್ ಮೈಲಾರಪ್ಪ, ಓಬಿಸಿ ಅಧ್ಯಕ್ಷ ಎನ್.ಡಿ.ಕುಮಾರ್, ಮುದಾಸಿರ್ ಸಿ.ಟಿ.ಕೃಷ್ಣಮೂರ್ತಿ, ಖುದ್ದುಸ್, ಅನ್ವರ್ ಬಾಷಾ, ಸೇರಿದಂತೆ ಇತರರು ಭಾಗವಹಿಸಿದ್ದರು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Whats App Channel: https://whatsapp.com/channel/0029VbDbOsBD8SE2H0L3d40j

Leave a Reply

Your email address will not be published. Required fields are marked *