Dry Coconut Benefits: ನಿಮ್ಮ ದೈನಂದಿನ ಆಹಾರದಲ್ಲಿ ಒಣ ಕೊಬ್ಬರಿಯನ್ನು ಸೇವಿಸುವುದರಿಂದ ಹಲವಾರು ಪ್ರಯೋಜನಗಳಿವೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.
- ದೈನಂದಿನ ಆಹಾರದಲ್ಲಿ ಒಣ ಕೊಬ್ಬರಿ
- ಒಣ ಕೊಬ್ಬರಿ ಆರೋಗ್ಯ ಪ್ರಯೋಜನಗಳು
- ಒಣ ಕೊಬ್ಬರಿಯಿಂದ ದೇಹಕ್ಕಾಗುವ ಲಾಭ

Dry Coconut Benefits: ತೆಂಗಿನಕಾಯಿ ಆಹಾರದ ರುಚಿಯನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಅದಕ್ಕಾಗಿಯೇ ಅನೇಕ ಇದನ್ನು ಅಡುಗೆಯಲ್ಲಿ ಹೆಚ್ಚು ಬಳಸುತ್ತಾರೆ. ಪ್ರಾಚೀನ ಕಾಲದಿಂದಲೂ ಆಹಾರದಲ್ಲಿ ತೆಂಗಿನಕಾಯಿಯನ್ನು ಬಳಸುವುದು ವಾಡಿಕೆ. ಒಣ ಕೊಬ್ಬರಿಯನ್ನು ಪ್ರತಿದಿನ ಸೇವಿಸುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ.
ಒಣ ಕೊಬ್ಬರಿ ದೇಹಕ್ಕೆ ಶಕ್ತಿ ತುಂಬಲು ಪರಿಣಾಮಕಾರಿಯಾಗಿ ಸಹಾಯ ಮಾಡುತ್ತದೆ. ಅದರಲ್ಲೂ ಚಳಿಗಾಲದಲ್ಲಿ ಒಣ ಕೊಬ್ಬರಿ ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ ಎನ್ನುತ್ತಾರೆ ಆರೋಗ್ಯ ತಜ್ಞರು. ಇದರ ಗುಣಲಕ್ಷಣಗಳು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ಇದರಿಂದಾಗಿ ಚಳಿಗಾಲದಲ್ಲಿ ಉಂಟಾಗುವ ಸೋಂಕುಗಳಿಂದ ಸುಲಭವಾಗಿ ಮುಕ್ತಿ ಪಡೆಯಬಹುದು.
ಒಣ ಕೊಬ್ಬರಿಯಲ್ಲಿ ಫೈಬರ್, ಮ್ಯಾಂಗನೀಸ್ ಮತ್ತು ತಾಮ್ರದಂತಹ ದೇಹಕ್ಕೆ ಅಗತ್ಯವಾದ ಅನೇಕ ಪೋಷಕಾಂಶಗಳಿವೆ. ಹಾಗಾಗಿ ಇದನ್ನು ಪ್ರತಿದಿನ ಆಹಾರದಲ್ಲಿ ಒಣ ಕೊಬ್ಬರಿ ಸೇವಿಸುವುದರಿಂದ ಜ್ಞಾಪಕಶಕ್ತಿ ವೃದ್ಧಿಯಾಗುತ್ತದೆ. ಅಲ್ಲದೆ ಮೆದುಳಿನಲ್ಲಿರುವ ಜೀವಕೋಶಗಳ ಸಮಸ್ಯೆಗಳು ಸುಲಭವಾಗಿ ನಿವಾರಣೆಯಾಗುತ್ತವೆ. ವಿಶೇಷವಾಗಿ ರಕ್ತಹೀನತೆ ಸಮಸ್ಯೆಯಿಂದ ಬಳಲುತ್ತಿರುವವರು ಒಣ ಕೊಬ್ಬರಿಯನ್ನು ಪ್ರತಿನಿತ್ಯ ಸೇವಿಸುವುದರಿಂದ ಉತ್ತಮ ಫಲಿತಾಂಶ ಸಿಗುತ್ತದೆ. ಇದರ ಪೌಷ್ಟಿಕಾಂಶದ ಗುಣಲಕ್ಷಣಗಳು ಕಬ್ಬಿಣದ ಕೊರತೆಯನ್ನು ಸಹ ಸುಲಭವಾಗಿ ನಿವಾರಿಸುತ್ತದೆ.
ಹೆಚ್ಚು ಒಣ ಕೊಬ್ಬರಿ ಸೇವಿಸುವುದರಿಂದ ಮಹಿಳೆಯರಿಗೆ ಪುರುಷರಿಗಿಂತ ಹೆಚ್ಚಿನ ಲಾಭವಿದೆ ಎನ್ನುತ್ತಾರೆ ಆರೋಗ್ಯ ತಜ್ಞರು. ಇದರಲ್ಲಿರುವ ಫೈಬರ್ ಮತ್ತು ಇತರ ಪೋಷಕಾಂಶಗಳು ಮಹಿಳೆಯರಲ್ಲಿ ಮೂಳೆಯನ್ನು ಬಲಗೊಳಿಸಲು ಸಹಾಯ ಮಾಡುತ್ತದೆ. ಇದಲ್ಲದೆ, ಇದು ಜೀರ್ಣಕಾರಿ ಸಮಸ್ಯೆಗಳಿಂದ ಸುಲಭವಾಗಿ ಪರಿಹಾರವನ್ನು ನೀಡುತ್ತದೆ.
ಹೊಟ್ಟೆಯ ಹುಣ್ಣು ಸಮಸ್ಯೆಯಿಂದ ಬಳಲುತ್ತಿರುವವರಿಗೆ ಒಣ ಕೊಬ್ಬರಿ ತುಂಬಾ ಸಹಕಾರಿ. ಇದು ಹೃದಯ ಸಂಬಂಧಿ ಕಾಯಿಲೆಗಳನ್ನು ನಿವಾರಿಸುತ್ತದೆ. ದೇಹದಲ್ಲಿನ ಕೊಲೆಸ್ಟ್ರಾಲ್ ಅನ್ನು ಸುಲಭವಾಗಿ ಕರಗಿಸುತ್ತದೆ. ಹಾಗಾಗಿ ಒಣ ಕೊಬ್ಬರಿಯೊಂದಿಗೆ ಡ್ರೈ ಫ್ರೂಟ್ಸ್ ಬೆರೆಸಿ ಲಡ್ಡೂ ಮಾಡಿ ತಿನ್ನುವುದರಿಂದ ಒಳ್ಳೆಯ ಫಲಿತಾಂಶ ಸಿಗುತ್ತದೆ.
ಸೂಚನೆ : ಈ ಲೇಖನವು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಸಮಗ್ರ ಸುದ್ದಿ ಇದನ್ನು ಖಚಿತಪಡಿಸುವುದಿಲ್ಲ.
Source: https://zeenews.india.com/kannada/health/dry-coconut-health-benefits-176517
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group : https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharechat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Views: 0