ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ದೇವೇಂದ್ರ ಫಡ್ನವಿಸ್ ಹೆಸರನ್ನು ನಾನೇ ಪ್ರಸ್ತಾಪಿಸಿದ್ದೇನೆ; ಏಕನಾಥ್ ಶಿಂಧೆ ಸ್ಪಷ್ಟನೆ.

ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಅವರ ಹೆಸರನ್ನು ಪ್ರಸ್ತಾಪಿಸಿರುವುದಾಗಿ ನಿರ್ಗಮಿತಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಕುರಿತು ಮಹಾಯುತಿ ನಾಯಕರು ಜಂಟಿ ನಿರ್ಧಾರ ಕೈಗೊಂಡಿದ್ದಾರೆ. ನಮ್ಮ ಮಹಾಯುತಿ ಮೈತ್ರಿಕೂಟದಲ್ಲಿ ಯಾರೂ ದೊಡ್ಡವರಲ್ಲ ಅಥವಾ ಯಾರೂ ಚಿಕ್ಕವರಲ್ಲ. ಮುಖ್ಯಮಂತ್ರಿ ಸ್ಥಾನಕ್ಕೆ ನಾನೇ ದೇವೇಂದ್ರ ಫಡ್ನವಿಸ್ ಹೆಸರು ಸೂಚಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು. ಮುಂಬೈನ್‌ ಆಜಾದ್ ಮೈದಾನದಲ್ಲಿ ನಾಳೆ (ಡಿ.5) ಸಂಜೆ 5.30ಕ್ಕೆ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ.

ಹೈಲೈಟ್ಸ್‌:

  • ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವಿಸ್ ಹೆಸರು ಘೋಷಣೆ
  • ಸಿಎಂ ಸ್ಥಾನಕ್ಕೆ ಫಡ್ನವಿಸ್ ಹೆಸರು ಪ್ರಸ್ತಾಪಿಸಿರುವುದಾಗಿ ಏಕನಾಥ್ ಶಿಂಧೆ ಸ್ಪಷ್ಟನೆ
  • ಮುಂಬೈನ್‌ ಆಜಾದ್ ಮೈದಾನದಲ್ಲಿ ನಾಳೆ (ಡಿ.5) ಸಂಜೆ 5.30ಕ್ಕೆ ಪ್ರಮಾಣ ವಚನ

ಮಹಾರಾಷ್ಟ್ರ: ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಅವರ ಹೆಸರನ್ನು ಪ್ರಸ್ತಾಪಿಸಿರುವುದಾಗಿ ನಿರ್ಗಮಿತಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಕುರಿತು ಮಹಾಯುತಿ ನಾಯಕರು ಜಂಟಿ ನಿರ್ಧಾರ ಕೈಗೊಂಡಿದ್ದಾರೆ. ನಮ್ಮ ಮಹಾಯುತಿ ಮೈತ್ರಿಕೂಟದಲ್ಲಿ ಯಾರೂ ದೊಡ್ಡವರಲ್ಲ ಅಥವಾ ಯಾರೂ ಚಿಕ್ಕವರಲ್ಲ. ಮುಖ್ಯಮಂತ್ರಿ ಸ್ಥಾನಕ್ಕೆ ನಾನೇ ದೇವೇಂದ್ರ ಫಡ್ನವಿಸ್ ಹೆಸರು ಸೂಚಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ ದೇವೇಂದ್ರ ಫಡ್ನವಿಸ್, ಅವರು ಏಕನಾಥ್ ಶಿಂಧೆ ಅವರನ್ನು ಮಹಾರಾಷ್ಟ್ರ ಸಂಪುಟಕ್ಕೆ ಸೇರಲು ಆಹ್ವಾನಿಸಿದ್ದಾರೆ.

ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರ ಸಿಎಂ

ಮಹಾರಾಷ್ಟ್ರ ನೂತನ ಸಿಎಂ ಯಾರು ಎಂಬ ಹನ್ನೊಂದು ದಿನಗಳ ಕುತೂಹಲಕ್ಕೆ ತೆರೆಬಿದ್ದಿದ್ದು, ದೇವೇಂದ್ರ ಫಡ್ನವಿಸ್ ಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮಹಾರಾಷ್ಟ್ರ ಶಾಸಕಾಂಗ ಪಕ್ಷದ ಸಭೆಯ ಕೇಂದ್ರ ವೀಕ್ಷಕರಾಗಿ ನೇಮಕಗೊಂಡಿದ್ದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾಣಿ ಸಮ್ಮುಖದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ದೇವೇಂದ್ರ ಫಡ್ನವೀಸ್ ಅವರ ಹೆಸರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.

ನಾಳೆ ಪ್ರಮಾಣ ವಚನ

ಮುಂಬೈನ್‌ ಆಜಾದ್ ಮೈದಾನದಲ್ಲಿ ನಾಳೆ (ಡಿ.5) ಸಂಜೆ 5.30ಕ್ಕೆ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರಿಂದ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮೂಲಕ ಬಿಜೆಪಿ, ಶಿಂಧೆ ಬಣದ ಶಿವಸೇನೆ, ಬಣದ ಅಜಿತ್ ಪವಾರ್ ಎನ್‌ಸಿಪಿಗಳನ್ನು ಒಳಗೊಂಡ ಮಹಾಯುತಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿ ಇತರೆ ಪ್ರಮುಖ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ಬಹುತೇಕ ಖಚಿತಗೊಂಡಿದೆ. ಪ್ರಮಾಣ ವಚನ ಸ್ವೀಕಾರವಾದ ಬೆನ್ನಲ್ಲೇ ಬಿಜೆಪಿ, ಶಿವಸೇನೆ, ಎನ್‌ಸಿಪಿ ನಡುವೆ ಸಚಿವ ಸಂಪುಟ ಹಂಚಿಕೆಯಾಗಲಿದೆ. ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 132, ಶಿವಸೇನೆ 57 ಮತ್ತು ಎನ್ ಸಿಪಿ 41 ಸ್ಥಾನಗಳನ್ನು ಗಳಿಸಿವೆ.

Source : https://vijaykarnataka.com/news/mumbai/eknath-shinde-says-i-proposed-devendra-fadnavis-name-as-chief-minister/articleshow/115976015.cms

Leave a Reply

Your email address will not be published. Required fields are marked *