ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ.ಮೇ.08: 2023ರ ಕರ್ನಾಟಕ ಸಾರ್ವತ್ರಿಕ ವಿಧಾನ ಸಭಾ ಚುನಾವಣೆಗೆ ಮೇ.10 ರಂದು ಮತದಾನ ನಡೆಯಲಿದೆ. ಮತದಾನಕ್ಕೂ 48 ಗಂಟೆಗಳ ಮುನ್ನ, ಬಹಿರಂಗ ಪ್ರಚಾರಕ್ಕೆ ನೀಡಿದ್ದ ಅವಕಾಶ ಅಂತ್ಯವಾಗಲಿದೆ.
ಈ ಹಿನ್ನಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಮೇ.8 ಸಂಜೆ 6 ಗಂಟೆಯಿಂದ ದೂರದರ್ಶನ, ಕೇಬಲ್ ಟಿ.ವಿ, ರೇಡಿಯೋ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಮಾಧ್ಯಮ ಹಾಗೂ ಫೇಸ್ ಬುಕ್,ಯೂಟೂಬ್, ಟ್ವಿಟರ್ ಸೇರಿದಂತೆ ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗ ಪ್ರಚಾರ ನಡೆಸುವುದನ್ನು ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ.
ಆದೇಶ ಉಲ್ಲಂಘಿಸುವ ಯಾರೇ ವ್ಯಕ್ತಿ, ಪ್ರಜಾ ಪ್ರಾತಿನಿಧ್ಯ ಕಾಯ್ದೆ ಅನ್ವಯ ಎರಡು ವರ್ಷಗಳವರೆಗೆ ವಿಸ್ತರಿಸಬಹುದಾದ ಕಾರಾವಾಸ, ಜುಲ್ಮಾನೆ ಸಹಿತ ದಂಡನೆಗೆ ಗುರಿಯಾಗುತ್ತಾರೆ. ಆದ್ದರಿಂದ ರಾಜಕೀಯ ಪಕ್ಷಗಳು ಹಾಗೂ ಕಣದಲ್ಲಿರುವ ಅಭ್ಯರ್ಥಿಗಳು ಚುನಾವಣೆ ಸಂಬಂಧಿಸಿದ ವಿಷಯವನ್ನು ಯಾವುದೇ ಎಲೆಕ್ಟ್ರಾನಿಕ್ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರದರ್ಶಿಸತಕ್ಕದ್ದಲ್ಲ. ಇಂತಹ ಪ್ರಕರಣಗಳು ಕಂಡುಬಂದರೆ, ಚುನಾವಣಾಧಿಕಾರಿಗಳು ತಕ್ಷಣವೇ ಎಫ್.ಆರ್.ಐ ದಾಖಲಿಸಿ ಕ್ರಮಕೈಗೊಳ್ಳುವಂತೆ ಅವರು ತಿಳಿಸಿದ್ದಾರೆ.
The post ಮೇ.8ರ ಸಂಜೆ ಬಹಿರಂಗ ಪ್ರಚಾರ ಅಂತ್ಯ : ಎಲೆಕ್ಟ್ರಾನಿಕ್ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಕೂಡ ಪ್ರಚಾರಕ್ಕೆ ನಿರ್ಬಂಧ first appeared on Kannada News | suddione.
from ಚಿತ್ರದುರ್ಗ – Kannada News | suddione https://ift.tt/L60zq13
via IFTTT