ಚಿತ್ರದುರ್ಗ ಜೂ. 07
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಭಾನುವಾರ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು ಭಾರತಾಂಬೆಯ ಭಾವಚಿತ್ರಕ್ಕೆ ಮಾಜಿ ಶಾಸಕರಾದ ಜಿಎಸ್ ತಿಪ್ಪಾರೆಡ್ಡಿ ಪುಷ್ಪಾರ್ಚನೆಯನ್ನು ಮಾಡುವ ಮೂಲಕ ಸಭೆಯನ್ನು ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ನಗರ ಅಧ್ಯಕ್ಷರಾದ ಲೋಕೇಶ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಜಿಲ್ಲಾ ಉಪಾಧ್ಯಕ್ಷರುಗಳಾದ ಡಾ. ಸಿದ್ದಾರ್ಥ್ ಗುಂಡಾರ್ಪಿ, ಲಿಂಗರಾಜು ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ವೆಂಕಟೇಶ್ಯಾದವ್ ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ರೇಖಾ ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೆ ಸಹ ವಕ್ತಾರರಾದ ಚಾಲುಕ್ಯ ನವೀನ್ ಜಿಲ್ಲಾ ಓಬಿಸಿ ಮೋರ್ಚಾ ಅಧ್ಯಕ್ಷ ಬಾಲರಾಜ್ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಅರುಣ್ ಕುಮಾರ್ ಮಾಜಿ ನಗರಸಭಾ ಸದಸ್ಯ ಸುರೇಶ್ ನಗರ ಪ್ರಧಾನ ಕಾರ್ಯದರ್ಶಿ ಲೀಲಾ ಶಶಿಧರ್ ಹಾಗೂ ಮಂಡಲದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.