ಭಾರತಕ್ಕೆ ಅಫ್ಘಾನ್ ಸವಾಲು; ಕೊಹ್ಲಿ- ನವೀನ್ ಮುಖಾಮುಖಿ ನೋಡಲು ಅಭಿಮಾನಿಗಳು ಕಾತುರ

Sports: India Vs Afghanistan, ICC World Cup 2023: ಭಾರತ ಕ್ರಿಕೆಟ್ ತಂಡ ವಿಶ್ವಕಪ್-2023 ರಲ್ಲಿ ತನ್ನ ಎರಡನೇ ಪಂದ್ಯವನ್ನು ಇಂದು ಅಂದರೆ, ಅಕ್ಟೋಬರ್ 11ರ ಬುಧವಾರದಂದು ಅಫ್ಘಾನಿಸ್ತಾನ ವಿರುದ್ಧ ಆಡಲಿದೆ. ಈ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಕ್ರಿಕೆಟ್ ತಂಡ ವಿಶ್ವಕಪ್-2023 ರಲ್ಲಿ (ICC world cup 2023) ತನ್ನ ಎರಡನೇ ಪಂದ್ಯವನ್ನು ಇಂದು ಅಂದರೆ, ಅಕ್ಟೋಬರ್ 11ರ ಬುಧವಾರದಂದು ಅಫ್ಘಾನಿಸ್ತಾನ ವಿರುದ್ಧ India Vs Afghanistan ಆಡಲಿದೆ. ಈ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಟೂರ್ನಿಯಲ್ಲಿ ಟೀಂ ಇಂಡಿಯಾ ಗೆಲುವಿನೊಂದಿಗೆ ಪಯಣ ಆರಂಭಿಸಿದೆ. ಭಾನುವಾರ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯವನ್ನು 6 ವಿಕೆಟ್‌ಗಳಿಂದ ಸೋಲಿಸಿತು. ಈ ಗೆಲುವಿನ ನಂತರ ಟೀಂ ಇಂಡಿಯಾದ (Team India) ಮನೋಬಲ ಹೆಚ್ಚಿದ್ದು, ಸತತ ಎರಡನೇ ಗೆಲುವಿನತ್ತ ದೃಷ್ಟಿ ನೆಟ್ಟಿದೆ. ಬುಧವಾರ ನಡೆಯಲಿರುವ ಪಂದ್ಯದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ (VIrat Kohli) ಹಾಗೂ ಅಫ್ಘಾನಿಸ್ತಾನ ಬೌಲರ್ ನವೀನ್ ಉಲ್ ಹಕ್ (Naveen Ul Haq) ಮುಖಾಮುಖಿಯಾಗಲಿದ್ದಾರೆ. ಈ ಇಬ್ಬರು ಆಟಗಾರರ ನಡುವೆ ಕಳೆದ ಐಪಿಎಲ್​ನಲ್ಲಿ ನಡೆದಿದ್ದ ಮಾತಿನ ಚಕಮಕಿ ಈ ಪಂದ್ಯದಲ್ಲಿ ಯಾವ ರೀತಿಯ ಪರಿಣಾಮ ಬೀರಲಿದೆ ಎಂಬುದನ್ನು ನೋಡಲು ಅಭಿಮಾನಿಗಳು ಕಾತುರರಾಗಿದ್ದಾರೆ.

ಕೊಹ್ಲಿ- ನವೀನ್ ನಡುವಿನ ಫೈಟ್

ವಾಸ್ತವವಾಗಿ ಕಳೆದ ಐಪಿಎಲ್​ನಲ್ಲಿ ಲಕ್ನೋ ಸೂಪರ್‌ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದಲ್ಲಿ ಈ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು. ಆಗಿನಿಂದ ನವೀನ್​ರನ್ನು ಟಾರ್ಗೆಟ್ ಮಾಡಿದ್ದ ಕೊಹ್ಲಿ ಅಭಿಮಾನಿಗಳು, ನವೀನ್ ಆಡುವ ಪ್ರತಿಯೊಂದು ಮ್ಯಾಚ್​ನಲ್ಲಿಯೂ ಅಂದಿನ ಘಟನೆಯನ್ನು ನೆನಪಿಸುತ್ತಾರೆ.

ನವೀನ್ ಕಾಲೆಳೆದ ಫ್ಯಾನ್ಸ್

ಇದಕ್ಕೆ ಉದಾಹರಣೆಯಾಗಿ ಹಿಮಾಚಲ ಪ್ರದೇಶದ ಧರ್ಮಶಾಲಾ ಮೈದಾನದಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ನವೀನ್ ಉಲ್ ಹಕ್ ಬೌಂಡರಿಯಲ್ಲಿ ಫೀಲ್ಡಿಂಗ್ ಮಾಡುತ್ತಿದ್ದಾಗ ಪ್ರೇಕ್ಷಕರು ಕೊಹ್ಲಿ-ಕೊಹ್ಲಿ ಎಂದು ಘೋಷಣೆಗಳನ್ನು ಕೂಗಿದ್ದರು. ಇದರ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ನವೀನ್ ಉಲ್ ಹಕ್ ಅವರನ್ನು ನೋಡುತ್ತಿದ್ದ ಪ್ರೇಕ್ಷಕರು ಕೊಹ್ಲಿ-ಕೊಹ್ಲಿ ಎಂದು ಘೋಷಣೆ ಕೂಗಿದ್ದು ವೈರಲ್ ಆಗಿರುವ ವಿಡಿಯೋದಲ್ಲಿ ಕಂಡುಬಂದಿತ್ತು.

ಮುಖಾಮುಖಿ ವರದಿ

ಇನ್ನು ಈ ಉಭಯ ತಂಡಗಳ ಮುಖಾಮುಖಿಯಲ್ಲಿ ಟೀಂ ಇಂಡಿಯಾ ಇದುವರೆಗೆ ಅಫ್ಘಾನಿಸ್ತಾನದ ಮೇಲೆ ಪ್ರಾಬಲ್ಯ ಸಾಧಿಸಿದೆ. ಭಾರತದ ವಿರುದ್ಧ ಅಫ್ಘಾನಿಸ್ತಾನ ಇನ್ನೂ ಒಂದೇ ಒಂದು ಪಂದ್ಯವನ್ನು ಗೆದ್ದಿಲ್ಲ. ಆದರೆ ಅಫ್ಘಾನಿಸ್ತಾನ ತಂಡವನ್ನು ರೋಹಿತ್ ಪಡೆ ಕಡೆಗಣಿಸುವಂತಿಲ್ಲ. ಏಕೆಂದರೆ ಈ ತಂಡ ಗೆಲುವಿಗಾಗಿ ಕೊನೆಯವರೆಗೂ ಹೋರಾಟ ನಡೆಸುವ ಸಾಮಥ್ಯ್ರ ಹೊಂದಿದೆ. ಅಫ್ಘಾನಿಸ್ತಾನ ವಿರುದ್ಧ ಟೀಂ ಇಂಡಿಯಾ ಇದುವರೆಗೆ ಒಟ್ಟು 3 ಏಕದಿನ ಪಂದ್ಯಗಳನ್ನು ಆಡಿದೆ. ಈ ಪೈಕಿ 2 ಪಂದ್ಯಗಳಲ್ಲಿ ಟೀಂ ಇಂಡಿಯಾ ಮೇಲುಗೈ ಸಾಧಿಸಿದ್ದರೆ, ಒಂದು ಪಂದ್ಯ ಟೈ ಆಗಿದೆ. ಹೀಗಾಗಿ ಇದೀಗ ಟೀಂ ಇಂಡಿಯಾಗೆ ಮೂರನೇ ಗೆಲುವು ಸಿಗುತ್ತೋ ಅಥವಾ ಅಫ್ಘಾನಿಸ್ತಾನ ಗೆಲುವಿನ ಖಾತೆ ತೆರೆಯುತ್ತೋ ಎಂಬುದನ್ನು ಕಾದು ನೋಡಬೇಕಾಗಿದೆ.

Source: https://tv9kannada.com/sports/cricket-news/icc-world-cup-2023-india-vs-afghanistan-match-match-9-preview-in-kannada-psr-690375.html

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

 WhatsApp Group : https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharechat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *