BS Yeddyurappa Rape Case: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.
- ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ
- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ
- ಮಹಿಳೆ ದೂರಿನನ್ವಯ ಸದಾಶಿವನಗರ ಠಾಣೆಯಲ್ಲಿ ದೂರು ದಾಖಲು

ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.
ಸಂತ್ರಸ್ತೆಯ ತಾಯಿ ನೀಡಿದ ದೂರಿನ ಅನ್ವಯ ಸದಾಶಿವನಗರ ಠಾಣಾ ಪೊಲೀಸರು ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಫೆಬ್ರವರಿ 2 ರಂದು ಸಹಾಯ ಕೇಳಲು ಹೋಗಿದ್ದಾಗ ತನಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಸಂತ್ರಸ್ತೆಯು ಎಫ್ಐಆರ್ನಲ್ಲಿ ಉಲ್ಲೇಖಿಸಿದ್ದಾಳೆ ಎಂದು ತಿಳಿದುಬಂದಿದೆ.
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಬಿಜೆಪಿಯು ಬಿರುಸಿನ ಚಟುವಟಿಕೆಗಳನ್ನು ನಡೆಸುತ್ತಿದೆ. ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಓಡಾಡ ನಡೆಸುತ್ತಿರುವ ಯಡಿಯೂರಪ್ಪ ಅವರು ಚುನಾವಣಾ ಪ್ರಚಾರಕ್ಕೆ ಅಣಿಯಾಗುತ್ತಿದ್ದಾರೆ. ಈ ನಡುವೆ ಪೋಕ್ಸೋ ಪ್ರಕರಣ ದಾಖಲಾಗಿರುವುದು ಯಡಿಯೂರಪ್ಪ ಅವರು ಸಂಕಷ್ಟಕ್ಕೆ ಸಿಲುಕಿಸಿದಂತಾಗಿದೆ. ಬಂಧನದ ಭೀತಿಯೂ ಎದುರಾಗಿದೆ.
53 ಮಂದಿ ವಿರುದ್ಧ ದೂರು ನೀಡಿದ ಮಹಿಳೆ
ಸದ್ಯ ಮಹಿಳೆ ದೂರಿನನ್ವಯ ಸದಾಶಿವನಗರ ಠಾಣೆಯಲ್ಲಿ ಬಿಎಸ್ ಯಡಿಯೂರಪ್ಪ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು , ಬಿಸಿನೆಸ್ ಮ್ಯಾನ್‌ಗಳು ಸೇರಿದಂತೆ ಒಟ್ಟು 53 ಮಂದಿ ವಿರುದ್ದವೇ ಸಂತ್ರಸ್ತ ಬಾಲಕಿಯ ತಾಯಿ ಸದಾಶಿವನಗರ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಪೊಲೀಸರು ಪ್ರಕರಣದ ಸತ್ಯಾಸತ್ಯೆಯನ್ನ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1