
ಬೆಂಕಿ ಅವಘಡದಲ್ಲಿ ಶಂಕರ್ ಕೈ, ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಶ್ವಾಸಕೋಶಕ್ಕೆ ಹೊಗೆ ನುಗ್ಗಿ ತೀವ್ರ ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸದ್ಯ ಪವನ್ ಕಲ್ಯಾಣ್ ಪುತ್ರನನ್ನು ಸಿಂಗಾಪುರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸಿಂಗಾಪುರ: ಆಂಧ್ರಪ್ರದೇಶ ಡಿಸಿಎಂ, ನಟ ಪವನ್ ಕಲ್ಯಾಣ್ (Pawan Kalyan) ಕಿರಿಯ ಮಗ ಓದುತ್ತಿದ್ದ ಸಿಂಗಾಪುರ (Singapore) ಶಾಲೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಪುತ್ರ ಮಾರ್ಕ್ ಶಂಕರ್ ಗಂಭೀರ ಗಾಯಗೊಂಡಿದ್ದಾರೆ.
ಪವನ್ ಕಲ್ಯಾಣ್ ಹಾಗೂ ಅನ್ನಾ ದಂಪತಿಗೆ 2017ರಲ್ಲಿ ಮಾರ್ಕ್ ಶಂಕರ್ ಜನಿಸಿದರು. ಸದ್ಯ ಪವನ್ ಕಲ್ಯಾಣ್ ಮೂರನೇ ಹೆಂಡತಿ ಅನ್ನಾ ಸಿಂಗಪುರದಲ್ಲೇ ಇದ್ದಾರೆ. ಮಾರ್ಕ್ ಶಂಕರ್ ಕೂಡ ಸಿಂಗಾಪುರದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಪವನ್ ಕಲ್ಯಾಣ್ ಕಿರಿಯ ಪುತ್ರ ಮಾರ್ಕ್, ಸಿಂಗಪುರದ ಶಾಲೆಯಲ್ಲಿ ಕಲಿಯುತ್ತಿದ್ದಾರೆ. ಅವರ ಪತ್ನಿಯೂ ಸಹ ಸಿಂಗಪುರದಲ್ಲಿಯೇ ನೆಲೆಸಿದ್ದಾರೆ. ಪವನ್ ಕಲ್ಯಾಣ್ ಅವರು ಆಗಾಗ್ಗೆ ಸಿಂಗಪುರಕ್ಕೆ ಹೋಗಿ ಬರುತ್ತಿರುತ್ತಾರೆ. ಇತ್ತೀಚೆಗೆ ಮಾರ್ಕ್ ಶಂಕರ್ ಕಲಿಯುತ್ತಿದ್ದ ಶಾಲೆಯಲ್ಲಿ ಬೆಂಕಿ ಅವಘಡ ನಡೆದಿದ್ದು, ಅವಘಡದಲ್ಲಿ ಮಾರ್ಕ್ರ ಕಾಲು, ಬೆನ್ನು, ಕೈಗಳಿಗೆ ತೀವ್ರ ಸುಟ್ಟ ಗಾಯಗಳಾಗಿವೆ. ಇದರ ಜೊತೆಗೆ ಅತಿಯಾದ ಹೊಗೆಯಿಂದಾಗಿ ಉಸಿರಾಟದ ಸಮಸ್ಯೆಯೂ ಸಹ ಮಾರ್ಕ್ಗೆ ಕಾಣಿಸಿಕೊಂಡಿದ್ದು, ಮಾರ್ಕ್ ಶಂಕರ್ ಅನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪವನ್ ಕಲ್ಯಾಣ್ ಮೂರನೇ ಪತ್ನಿ ಅನ್ನಾ ಲೆಜ್ನೇವಾ ಅವರಿಗೆ ಇಬ್ಬರು ಮಕ್ಕಳು ಮಾರ್ಕ್ ಶಂಕರ್ ಮತ್ತು ಪೊಲೇನಾ ಅಂಜನಾ. ಈ ಇಬ್ಬರೂ ಸಹ ಸಿಂಗಪುರದಲ್ಲಿ ನೆಲೆಸಿದ್ದಾರೆ. ಅಲ್ಲಿಯೇ ಶಾಲೆ ಕಲಿಯುತ್ತಿದ್ದಾರೆ. ಪವನ್ ಕಲ್ಯಾಣ್ ಅವರ ಎರಡನೇ ಪತ್ನಿ ರೇಣುಕಾ ಅವರಿಗೂ ಇಬ್ಬರು ಮಕ್ಕಳು. ಅಕಿರಾ ನಂದ ಮತ್ತು ಆದ್ಯಾ, ಅಕಿರಾ ನಂದ ಸಿನಿಮಾ ಹೀರೋ ಆಗಲು ಸಜ್ಜಾಗಿದ್ದಾರೆ. ಈಗಾಗಲೇ ಅವರು ಪವನ್ ಕಲ್ಯಾಣ್ ನಟನೆಯ ಇನ್ನೂ ಬಿಡುಗಡೆ ಆಗದ ‘ಓಜಿ’ ಸಿನಿಮಾನಲ್ಲಿ ನಟಿಸಿದ್ದಾರೆ ಎನ್ನಲಾಗುತ್ತಿದೆ. ಪವನ್ ಕಲ್ಯಾಣ್ ಅವರ ಮೊದಲೇ ಪತ್ನಿ ನಂದಿನಿಗೆ ಮಕ್ಕಳಾಗಿರಲಿಲ್ಲ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1