ಏಷ್ಯನ್ ಗೇಮ್ಸ್​: ಅಥ್ಲೆಟಿಕ್ಸ್​ನಲ್ಲಿ ಭಾರತಕ್ಕೆ ಮೊದಲ ಚಿನ್ನ

Asian Games 2023: ಪ್ರಸ್ತುತ ಏಷ್ಯನ್ ಗೇಮ್ಸ್​ ಪದಕ ಪಟ್ಟಿಯಲ್ಲಿ ಭಾರತವು ನಾಲ್ಕನೇ ಸ್ಥಾನದಲ್ಲಿದೆ. ಭಾರತೀಯ ಕ್ರೀಡಾಪಟುಗಳು ಇದುವರೆಗೆ 12 ಚಿನ್ನದ ಪದಕಗಳನ್ನು ಹಾಗೂ 16 ಬೆಳ್ಳಿ ಮತ್ತು 16 ಕಂಚಿನ ಪದಕಗಳನ್ನು ಗೆದ್ದುಕೊಂಡಿದ್ದಾರೆ. ಈ ಮೂಲಕ ಒಟ್ಟು 44 ಪದಕಗಳೊಂದಿಗೆ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ.

ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ನ ಪುರುಷರ 3000 ಮೀಟರ್ ಸ್ಟೀಪಲ್‌ಚೇಸ್‌ನಲ್ಲಿ ಭಾರತದ ಅವಿನಾಶ್ ಸಬ್ಲೆ ಚಿನ್ನದ ಪದಕ ಗೆದ್ದಿದ್ದಾರೆ. ಇದರೊಂದಿಗೆ ಅಥ್ಲೆಟಿಕ್ಸ್​ನಲ್ಲಿ ಭಾರತ ತಂಡವು ಮೊದಲ ಸ್ವರ್ಣ ಪದಕದ ಖಾತೆ ತೆರೆದಿದೆ. ಈ ಪಂದ್ಯದಲ್ಲಿ 8:19:50 ಸೆಕೆಂಡ್‌ಗಳಲ್ಲಿ ಗುರಿ ಮುಟ್ಟುವ ಮೂಲಕ ಅವನಾಶ್ ಸಬ್ಲೆ ಏಷ್ಯನ್ ಗೇಮ್ಸ್​ನಲ್ಲಿ ಭಾರತದ ಪರ ಹೊಸ ದಾಖಲೆ ಬರೆದರು.

2022 ರ ಕಾಮನ್‌ವೆಲ್ತ್ ಗೇಮ್ಸ್​ನಲ್ಲಿ ಬೆಳ್ಳಿ ಪದಕ ಗೆದ್ದಿದ್ದ ಅವಿನಾಶ್, ಈ ಬಾರಿ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ. ಇದಾಗ್ಯೂ ತಮ್ಮ ರಾಷ್ಟ್ರೀಯ ದಾಖಲೆಯನ್ನು ಮುರಿಯಲಾಗಲಿಲ್ಲ. ಸ್ಟೀಪಲ್‌ಚೇಸ್‌ನಲ್ಲಿ ಕೇವಲ 8 ನಿಮಿಷ 11.20 ಸೆಕೆಂಡುಗಳಲ್ಲಿ ಗುರಿ ಮುಟ್ಟುವ ಮೂಲಕ ಅವಿನಾಶ್ ಸೆಬ್ಲೆ ರಾಷ್ಟ್ರೀಯ ದಾಖಲೆ ಬರೆದಿದ್ದಾರೆ. ಈ ಮೂಲಕ ಜಪಾನ್‌ನ ಮಿಯುರಾ ರ್ಯುಜಿ (8:09.91) ನಂತರ ಏಷ್ಯಾದ ಎರಡನೇ ವೇಗದ ಸ್ಟೀಪಲ್​ಚೇಸ್ ರೇಸರ್ ಎನಿಸಿಕೊಂಡಿದ್ದಾರೆ.

ನನಗೆ ಸ್ಟೀಪಲ್‌ಚೇಸ್ ಬಗ್ಗೆ ವಿಶ್ವಾಸವಿದೆ ಮತ್ತು ಆ ಸ್ಪರ್ಧೆಯಲ್ಲಿ ಚಿನ್ನ ಗೆಲ್ಲುವುದು ನನ್ನ ಮುಖ್ಯ ಗುರಿಯಾಗಿದೆ. ಇದೀಗ 3000 ಮೀಟರ್​ನಲ್ಲಿ ಯಶಸ್ವಿಯಾಗಿದ್ದು, ಇನ್ನು 5000 ಮೀಟರ್‌ ಸ್ಪರ್ಧೆಯಲ್ಲೂ ಕಣಕ್ಕಿಳಿಯಲಿದ್ದೇನೆ. ಹೀಗಾಗಿ ಅದರಲ್ಲೂ ಪದಕ ಗೆಲ್ಲುವ ವಿಶ್ವಾಸವಿದೆ ಎಂದು ಅವಿನಾಶ್ ಸೆಬ್ಲೆ ಹೇಳಿದ್ದಾರೆ.

ನಾಲ್ಕನೇ ಸ್ಥಾನದಲ್ಲಿ ಭಾರತ:

ಪ್ರಸ್ತುತ ಏಷ್ಯನ್ ಗೇಮ್ಸ್​ ಪದಕ ಪಟ್ಟಿಯಲ್ಲಿ ಭಾರತವು ನಾಲ್ಕನೇ ಸ್ಥಾನದಲ್ಲಿದೆ. ಭಾರತೀಯ ಕ್ರೀಡಾಪಟುಗಳು ಇದುವರೆಗೆ 12 ಚಿನ್ನದ ಪದಕಗಳನ್ನು ಹಾಗೂ 16 ಬೆಳ್ಳಿ ಮತ್ತು 16 ಕಂಚಿನ ಪದಕಗಳನ್ನು ಗೆದ್ದುಕೊಂಡಿದ್ದಾರೆ. ಈ ಮೂಲಕ ಒಟ್ಟು 44 ಪದಕಗಳೊಂದಿಗೆ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ.

ಇನ್ನು 120 ಚಿನ್ನ, 71 ಬೆಳ್ಳಿ, 37 ಕಂಚಿನ ಪದಕಗಳೊಂದಿಗೆ ಒಟ್ಟು 228 ಪದಕಗಳನ್ನು ಗೆದ್ದಿರುವ ಆತಿಥೇಯ ಚೀನಾ (ಗಣತಂತ್ರ) ದೇಶವು ಪದಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ.

Source : https://tv9kannada.com/sports/asian-games-avinash-sable-wins-gold-zp-683430.html

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

 WhatsApp Group : https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharechat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *