ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಐವರು ದುರ್ಮರಣ ಹೊಂದಿರುವಂತಹ ಘಟನೆ ನಡೆದಿದೆ. ಒಂದೇ ಕುಟುಂಬದ ನಾಲ್ವರು, ಮತ್ತೊಂದು ಕಾರು ಚಾಲಕ ಸಹ ಮೃತಪಟ್ಟಿದ್ದಾರೆ. ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ತುಮಕೂರು, ಸೆಪ್ಟೆಂಬರ್ 08: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ (collision) ಹೊಡೆದ ಪರಿಣಾಮ ಓರ್ವ ಬಾಲಕಿ ಸೇರಿ ಐವರು ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಬಳಿ ನಡೆದಿದೆ. ಮಹಿಳೆ ಮತ್ತು ಬಾಲಕನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮಧುಗಿರಿ ಠಾಣೆಯ ಪೊಲೀಸರು ಮೃತರ ಗುರುತು ಪತ್ತೆ ಹಚ್ಚುತ್ತಿದ್ದಾರೆ. ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೆಎ-03 NB 2646 ಸಂಖ್ಯೆಯ ನೆಕ್ಸಾ ಮಾರುತಿ ಕಾರು ಹಾಗೂ ಕೆಎ-64 M 2627 ಸಂಖ್ಯೆಯ ಟಿಯಾಗೋ ಕಾರು ನಡುವೆ ಅಪಘಾತ ಸಂಭವಿಸಿದೆ. ಮಧುಗಿರಿ ಕಡೆಯಿಂದ ತುಮಕೂರು ಕಡೆಗೆ ಟಿಯಾಗೋ ಕಾರು ಹೊರಟಿತ್ತು. ಸ್ಥಳಕ್ಕೆ ಮಧುಗಿರಿ ಪಿಎಸ್ಐ ವಿಜಯ್ ಕುಮಾರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಅಪಘಾತ ಕಾರುಗಳ ತೆರವು ಕಾರ್ಯಾಚರಣೆ ಮಾಡಲಾಗಿದೆ.