ಏಕಾಏಕಿ ಡಿಕ್ಕಿ ಹೊಡೆದ ಬೊಲೆರೋ: ಕೂಲಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಐವರು ದುರಂತ ಸಾವು.

ಕೋಲಾರ, ಡಿಸೆಂಬರ್​ 18: ಮೂರು ದ್ವಿಚಕ್ರ‌ ವಾಹನಕ್ಕೆ ಬೊಲೆರೋ ವಾಹನ ಡಿಕ್ಕಿ (Accident) ಹೊಡೆದ ಪರಿಣಾಮ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರುವಂತಹ ಘಟನೆ ಮುಳಬಾಗಿಲು ತಾಲ್ಲೂಕಿನ ಎನ್.ವಡ್ಡಹಳ್ಳಿ-ಗುಡಿಪಲ್ಲಿಗೆ ಹೋಗುವ ಮುಖ್ಯ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಕೋನಂಗುಂಟೆ ಗ್ರಾಮದ ರಾಧಪ್ಪ (45), ವೆಂಕಟರಾಮಪ್ಪ (45), ವೆಂಕಟರಾಮಪ್ಪ ಪತ್ನಿ ಅಲುವೇಲಮ್ಮ (30) ಹಾಗೂ ಇಬ್ಬರು ಅಪರಿಚಿತರು ಮೃತಪಟ್ಟಿದ್ದಾರೆ. ಕೂಲಿ ಕೆಲಸ ಮಾಡಿಕೊಂಡು ಮನೆಗೆ ಹೋಗುತ್ತಿದ್ದ ಸಮಯದಲ್ಲಿ‌ ಈ ಘಟನೆ ಸಂಭವಿಸಿದ್ದು, ನಂಗಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Source : https://tv9kannada.com/karnataka/kolar-road-accident-many-people-death-in-bolero-collision-crime-news-in-kannada-ggs-951763.html

Leave a Reply

Your email address will not be published. Required fields are marked *