
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಮೇ. 30 ಜಿಲ್ಲಾ ಪೌರಕಾರ್ಮಿಕರ ಸಂಘದ ವತಿಯಿಂದ ನಗರಸಭೆಯ ಮುಂದೆ ಕಳೆದ ೨೭ ರಿಂದ ನಡೆಸುತ್ತಿರುವ ಅನಿರ್ಧಿಷ್ಟ ಮುಷ್ಕರ ಸ್ಥಳಕ್ಕೆ ಇಂದು ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ ಭೇಟಿ ಮಾಡುವುದರ ಮೂಲಕ ನಿಮ್ಮ ಪರವಾಗಿ ನಾವು ಇದ್ದೇವೆ. ನಮ್ಮ ಪಕ್ಷ ವಿರೋಧಪಕ್ಷದಲ್ಲಿ ಇದೆ, ನಮ್ಮ ಮುಖಂಡರಿಗೆ ಹೇಳಿ ವಿಧಾನಸಭೆಯಲ್ಲಿ ನಿಮ್ಮ ಪರವಾಗಿ ಮಾತನಾಡಿ ನಿಮ್ಮ ಬೇಡಿಕೆಗಳನ್ನು ಈಡೇರಿಸುವಲ್ಲಿ ಮುಖ್ಯಮಂತ್ರಿಗಳನ್ನು ಒತ್ತಾಯಿಸುವಂತೆ ಹೇಳುತ್ತೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪೌರಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿದ ಜಿ.ಎಚ್.ತಿಪ್ಪಾರೆಡ್ಡಿ ಅವರು, ರಾಜ್ಯದಲ್ಲಿರುವ ಎಲ್ಲಾ ಮಹಾನಗರ ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರ ಸಾಕಷ್ಟು ಸಂಕಷ್ಟಗಳನ್ನು ಅನುಭವಿಸುತ್ತಿದ್ದಾರೆ.
ಆದರೂ ಕೂಡ ಸರ್ಕಾರ ನಮ್ಮಗಳತ್ತ ಗಮನಹರಿಸದೆ ನಿರ್ಲಕ್ಷ್ಯ ತೋರುತ್ತಿದೆ. ಕೋವಿಡ್ ಸಮಯದಲ್ಲಿ ಈ ಪೌರ ಕಾರ್ಮಿಕರು
ಯಾರು ಮಾಡದ ಕೆಲಸವನ್ನು ಮಾಡಿದ್ದಾರೆ. ಕಸವನ್ನು ತೆಗೆದು ಹಾಕುವುದರ ಮೂಲಕ ರೋಗಕ್ಕೆ ಹತ್ತಿರವಾಗಿ ಕೆಲಸವನ್ನು
ಮಾಡಿದ್ದಾರೆ. ಇವರ ಕೆಲಸವನ್ನು ಬೇರೆ ಯಾರು ಸಹಾ ಮಾಡುವುದಿಲ್ಲ, ಇವರಿಗೆ ಇವರೇ ಸಾಟಿಯಾಗಿದ್ದಾರೆ. ಇಂತಹರಿಗೆ
ಸರ್ಕಾರ ಉತ್ತಮವಾದ ಸೌಕರ್ಯವನ್ನು ನೀಡಬೇಕಿದೆ. ಅವರನ್ನು ಚನ್ನಾಗಿ ನೋಡಿಕೊಳ್ಳಬೇಕಿದೆ ಸರ್ಕಾರ ತನ್ನ ಬೇರೆ
ನೌಕರರಿಗಿಂತ ಇವರಿಗೆ ಹೆಚ್ಚಿನ ಅದ್ಯತೆಯನ್ನು ನೀಡಬೇಕಿದೆ ಎಂದು ಸರ್ಕಾರವನ್ನು ಒತ್ತಾಯಿಸಿದರು.
ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸಬೇಕು. ಸುಮಾರು ೨೫-೩೦ ವರ್ಷಗಳಿಂದ ಹೊರಗುತ್ತಿಗೆ ಮೇಲೆ
ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ಮೇಲೆ ಕಾರ್ಯನಿರ್ವಹಿಸುತ್ತಿರುವ ವಾಹನ ಚಾಲಕರು, ನೀರು ಸರಬರಾಜು ಸಿಬ್ಬಂದಿಗಳು, ಲೋಡರ್ಸ್, ಗುತ್ತಿಗೆ ಲೆಕ್ಕಿಗರು, ಕ್ಲೀನರ್ ಪೌರಕಾರ್ಮಿಕರು, ಸೂಪರ್ ವೈಸರ್ಸ್, ಕಂಪ್ಯೂಟರ್ ಆಪರೇಟರ್‌ಗಳು, ಜ್ಯೂನಿಯರ್ಪ್ರೋ ಗ್ರಾಸ್ ಸಿಬ್ಬಂದಿಗಳನ್ನು ಖಾಯಂ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದು, ಕೆ.ಜಿ.ಐ.ಡಿ., ಜಿ.ಪಿ.ಎಫ್., ಜ್ಯೋತಿ ಸಂಜೀವಿನಿ, ಸೇರಿದಂತೆ ಸರ್ಕಾರಿ ನೌಕರರಿಗೆ ಸಿಗುವ ಸೌಲಭ್ಯವನ್ನು ಪೌರ ನೌಕರರಿಗೂ ಜಾರಿ ಮಾಡಬೇಕು.
೨೦೨೨-೨೩ನೇ ಸಾಲಿನಲ್ಲಿ ಪೌರಕಾರ್ಮಿಕರ ವಿಶೇಷ ನೇಮಕಾತಿಯಡಿ ಪೌರಕಾರ್ಮಿಕರು ನೇಮಕಾತಿ ಹೊಂದಿದ್ದು, ನೌಕರರಿಗೆ ಸರ್ಕಾರವು ನಗರ ಸ್ಥಳೀಯ ಸಂಸ್ಥೆಯ ಸ್ಥಳೀಯ ನಿಧಿಯಿಂದ ವೇತನ ಪಡೆಯಲು ಆದೇಶಿಸಲಾಗಿದ್ದನ್ನು ರದ್ದುಪಡಿಸಿ, ಎಸ್.ಎಫ್.ಸಿ ಅನುದಾನದಡಿ ವೇತನವನ್ನು ನೀಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.
ಈಗ ನಾನು ಆಧಿಕಾರದಲ್ಲಿ ಇಲ್ಲ ಅಲ್ಲದೆ ನಮ್ಮ ಪಕ್ಷವೂ ಸಹಾ ಅಧಿಕಾರವನ್ನು ನಡೆಸುತ್ತಿಲ್ಲ ಆದರೆ ವಿಧಾನ ಸಭೆಯಲ್ಲಿ ನಮ್ಮ ಪಕ್ಷ
ವಿರೋಧ ಪಕ್ಷದಲ್ಲಿ ಇದೆ, ನಮ್ಮ ಮುಖಂಡರಿಗೆ ಹೇಳಿ ವಿಧಾನಸಭೆಯಲ್ಲಿ ನಿಮ್ಮ ಪರವಾಗಿ ಮಾತನಾಡಿ ನಿಮ್ಮ ಬೇಡಿಕೆಗಳನ್ನು
ಈಡೇರಿಸುವಲ್ಲಿ ಮುಖ್ಯಮಂತ್ರಿಗಳನ್ನು ಒತ್ತಾಯಿಸುವಂತೆ ಹೇಳುತ್ತೇನೆ, ನಿಮ್ಮ ಪರವಾಗಿ ನಾನು ಯಾವಾಗಲೂ ಇದ್ದೇನೆ ನನ್ನ
ಅಧಿಕಾರದ ಅವಧಿಯಲ್ಲಿ ಹಲವಾರು ಪೌರ ಕಾರ್ಮಿಕರನ್ನು ಕೆಲಸಕ್ಕೆ ಸೇರಿಸಿದ್ದೇ, ಅವರಿಗೆ ಮನೆಗಳನ್ನು ಸಹಾ ನೀಡಿದ್ದೇ ಎಂದು
ಜ್ಞಾಪಕ ಮಾಡಿಕೊಂಡರು.
ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಶ್ರೀನಿವಾಸ್, ಹರೀಶ್, ದೀಪು, ಮಾಜಿ ಸದಸ್ಯರಾದ ಕೃಷ್ಣಮೂರ್ತಿ, ರವಿಶಂಕರ್,
ಪೌರಕಾರ್ಮಿಕರ ಸಂಘದ ಸಿ.ರೇಣುಕಾ, ಎಸ್.ಪಿ.ಲವ, ಪುಟ್ಟಸ್ವಾಮಿ, ಸೇರಿದಂತೆ ಪೌರಕಾರ್ಮಿಕರು ಭಾಗವಹಿಸಿದ್ದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1