ಚಿತ್ರದುರ್ಗ (ಫೆ. 08): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗದ ವತಿಯಿಂದ ಮೊಳಕಾಲ್ಮುರು ನೂತನ ಬಸ್ ಘಟಕ ಹಾಗೂ ಬಸ್ ನಿಲ್ದಾಣದ ಶಂಕು ಸ್ಥಾಪನಾ ಸಮಾರಂಭವನ್ನು ಇದೇ ಫೆಬ್ರವರಿ 11ರಂದು ಮಧ್ಯಾಹ್ನ 12ಕ್ಕೆ ಹಳೆಯ ತಾಲ್ಲೂಕು ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಘನ ಉಪಸ್ಥಿತಿವಹಿಸುವರು. ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಶಂಕುಸ್ಥಾಪನೆ ನೆರವೇರಿಸುವರು.
ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್, ಹೊಳಲ್ಕೆರೆ ಶಾಸಕ ಹಾಗೂ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಂ.ಚಂದ್ರಪ್ಪ, ವಿಧಾನ ಪರಿಷತ್ ಮುಖ್ಯ ಸಚೇತಕ ಡಾ.ವೈ.ಎ.ನಾರಾಯಣಸ್ವಾಮಿ ಗೌರವಾನ್ವಿತ ಉಪಸ್ಥಿತಿವಹಿಸುವರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ರಾಜ್ಯ ರಸ್ತೆ ಸಾರಿಗೆ ನಿಗಮ ಉಪಾಧ್ಯಕ್ಷ ಮೋಹನ್ ಮೆಣಸಿನಕಾಯಿ, ಮೊಳಕಾಲ್ಮುರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಟಿ.ರವಿಕುಮಾರ್, ರಾಯಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಿ.ಬಿ.ಪಾಪಣ್ಣ, ರಾಜ್ಯ ರಸ್ತೆ ಸಾರಿಗೆ ನಿಗಮ ಮಂಡಳಿ ನಿರ್ದೇಶಕರಾದ ಪಿ.ರುದ್ರೇಶ್, ಆರುಂಡಿ ನಾಗರಾಜ್, ರಾಜು ವಿಠಲಸ ಜರತಾರಘರ ಭಾಗವಹಿಸುವರು. ವಿಶೇಷ ಆಹ್ವಾನಿತರಾಗಿ ಸಾರಿಗೆ ಇಲಾಖೆ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ರಾಜ್ಯ ರಸ್ತೆ ಸಾರಿಗೆ ನಿಗಮ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್, ಸಿಬ್ಬಂದಿ ಮತ್ತು ಜಾಗೃತಿ ನಿರ್ದೇಶಕ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಜಿ.ಪಂ ಸಿಇಒ ಎಂ.ಎಸ್.ದಿವಾಕರ್, ಎಸ್ ಪಿ ಕೆ.ಪರುಶುರಾಮ ಭಾಗವಹಿಸಲಿದ್ದಾರೆ ಎಂದು ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ ಎನ್.ಹೆಬ್ಬಾಳ್ ತಿಳಿಸಿದ್ದಾರೆ.
The post ಫೆಬ್ರವರಿ 11ರಂದು ಮೊಳಕಾಲ್ಮೂರು ನೂತನ ಬಸ್ ಘಟಕ ಹಾಗೂ ಬಸ್ ನಿಲ್ದಾಣದ ಶಂಕು ಸ್ಥಾಪನಾ ಸಮಾರಂಭ first appeared on Kannada News | suddione.
from ಚಿತ್ರದುರ್ಗ – Kannada News | suddione https://ift.tt/guVAGcs
via IFTTT