ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸಾವು.

ROAD ACCIDENT : ಭೀಕರ ರಸ್ತೆ ಅಪಘಾತದಲ್ಲಿ ಹುಬ್ಬಳ್ಳಿಯ ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹುಬ್ಬಳ್ಳಿ: ಭೀಕರ ರಸ್ತೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಹೊರವಲಯದ ನೂಲ್ವಿ ಕ್ರಾಸ್ ಬಳಿ ನಡೆದಿದೆ.

ವರೂರುನಿಂದ ಹುಬ್ಬಳ್ಳಿ ಕಡೆ ಬರುತಿದ್ದ ಕ್ವಿಡ್ ಕಾರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದ್ದು, ಕಾರು ನುಜ್ಜು ಗುಜ್ಜಾಗಿದೆ. ಡಿಕ್ಕಿ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟರೆ, ಇನ್ನೊಬ್ಬರಿಗೆ ಗಂಭೀರ ಗಾಯವಾಗಿದ್ದು, ಕೆಎಂಸಿಆರ್ ಐ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಹುಬ್ಬಳ್ಳಿ ಲಿಂಗರಾಜನಗರದ ಶಂಕುತಲಾ ಹಿರೇಮಠ ಎಂಬುವರ ಕುಟುಂಬಸ್ಥರು ಒಂದೇ ಕಾರಿನಲ್ಲಿ ಐವರು ಪ್ರಯಾಣ ಬೆಳೆಸಿದ್ದರು. ಮೃತರಲ್ಲಿ ಒಬ್ಬರಾದ ಶಂಕುತಲಾ ಹಿರೇಮಠ ಖಾಸಗಿ ಪ್ರೌಢ ಶಾಲಾ ವಿಭಾಗದ ನಿವೃತ್ತ ಶಿಕ್ಷಕಿಯಾಗಿದ್ದರು.

ಮೃತರನ್ನು ಹುಬ್ಬಳ್ಳಿ ಲಿಂಗರಾಜ್ ನಗರ ನಿವಾಸಿಗಳಾದ ಒಂದೇ ಕುಟುಂಬದ ಸುಜಾತಾ ಹಿರೇಮಠ (61), ಶಂಕುತಲಾ ಹಿರೇಮಠ್​ (75), ಸಂಪತ್ ಕುಮಾರಿ ಹಿರೇಮಠ (60) ಹಾಗೂ ಗಾಯತ್ರಿ ಹಿರೇಮಠ್​ (65) ಎಂದು ಗುರುತಿಸಲಾಗಿದೆ. ಗಾಯಗೊಂಡ ವ್ಯಕ್ತಿ ವೀರಬಸಯ್ಯ (69) ಇವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿದರು. ಈ ಕುರಿತಂತೆ ಹುಬ್ಬಳ್ಳಿ ಗ್ರಾಮೀಣ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group:https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *