ಚಿತ್ರದುರ್ಗದಲ್ಲಿ ಮಾರ್ಚ್ 9 ರಂದು ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ : ಹೆಚ್ಚಿನ ಮಾಹಿತಿ ಇಲ್ಲಿದೆ…!

 

ಚಿತ್ರದುರ್ಗ, (ಮಾ.08) : ಕಂಚಿ ಕಾಮಕೋಟಿ ಮೆಡಿಕಲ್ ಟ್ರಸ್ಟ್ ಶಂಕರ ಕಣ್ಣಿನ ಆಸ್ಪತ್ರೆ ಶಿವಮೊಗ್ಗ, ಆರ್ಯವೈಶ್ಯ ವಿದ್ಯಾಭಿವೃದ್ದಿ ಸಂಘ, ವಾಸವಿ ವಿದ್ಯಾಸಂಸ್ಥೆ, ಆರ್ಯವೈಶ್ಯ ಅಧಿಕಾರಿಗಳ ಹಾಗೂ ವೃತ್ತಿನಿರತರ ಸಂಘ ಇವರ ಸಹಯೋಗದೊಂದಿಗೆ 21 ನೇ ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ಮಾರ್ಚ್ 9 ರ ಇಂದು ಬೆಳಿಗ್ಗೆ ಹತ್ತು ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ವಾಸವಿ ವಿದ್ಯಾಸಂಸ್ಥೆ ಆವರಣದಲ್ಲಿ ನಡೆಯಲಿದೆ.

ಶಿಬಿರದಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗುವವರನ್ನು ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಉಚಿತವಾಗಿ ಶಸ್ತ್ರ ಚಿಕಿತ್ಸೆ ನೆರವೇರಿಸಿ ಲೆನ್ಸ್ ಅಳವಡಿಸಲಾಗುವುದು. ಊಟ ಸಾರಿಗೆ ವಸತಿ ವ್ಯವಸ್ಥೆ ಎಲ್ಲವೂ ಉಚಿತ.

ಶಿಬಿರಕ್ಕೆ ಬರುವವರು ಒಂದು ಫೋಟೋ, ಮತದಾರರ ಗುರುತಿನ ಚೀಟಿ, ಆಧಾರ್‌ ಕಾರ್ಡ್, ವೋಟರ್ ಐಡಿ, ಪಡಿತರ ಚೀಟಿ, ಹಿರಿಯ ನಾಗರೀಕರ ಗುರುತಿನ ಪತ್ರದ ಜೆರಾಕ್ಸ್ ಪ್ರತಿಗಳನ್ನು ತರಬೇಕು.

ಹೆಚ್ಚಿನ ಮಾಹಿತಿಗಾಗಿ
ಮೊ: 9916371966, 9448588849 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.

The post ಚಿತ್ರದುರ್ಗದಲ್ಲಿ ಮಾರ್ಚ್ 9 ರಂದು ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ : ಹೆಚ್ಚಿನ ಮಾಹಿತಿ ಇಲ್ಲಿದೆ…! first appeared on Kannada News | suddione.

from ಚಿತ್ರದುರ್ಗ – Kannada News | suddione https://ift.tt/KI5tZ9u
via IFTTT

Leave a Reply

Your email address will not be published. Required fields are marked *