ಚಿತ್ರದುರ್ಗ: ಲಿಂಗವರಹಟ್ಟಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ.

ಚಿತ್ರದುರ್ಗ ಜೂ. 23

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭೀವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ ಚಿತ್ರದುರ್ಗ ತಾಲ್ಲೂಕು ಹಾಗೂ ಪ್ರಾದೇಶಿಕ, ಜಿಲ್ಲಾ, ಹಾಗೂ ಯೋಜನಾ ಕಚೇರಿಯಡಿಯಲ್ಲಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಆರೋಗ್ಯ ತಪಾಸಣಾ ಶಿಬಿರವನ್ನು ಲಿಂಗವರಹಟ್ಟಿ ದೀಪಶ್ರೀ ಜ್ಞಾನ ವಿಕಾಸಕೇಂದ್ರ ಮಂಗಳವಾರ ಹಮ್ಮಿಕೊಳ್ಳಲಾಗಿತ್ತು.

ಶಿಬಿರವನ್ನು ಚಿತ್ರದುರ್ಗ ತಾಲೂಕಿನ ಯೋಜನಾಧಿಕಾರಿಗಳು ಚಂದ್ರಹಾಸ್. ಬಿ ಚಾಲನೆಯನ್ನು ನೀಡಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಸದಸ್ಯರು ಉಚಿತ ಆರೋಗ್ಯ ತಪಾಸಣೆ ಶಿಬಿರದ ಸದುಪಯೋಗ ಎಲ್ಲರೂ ಪಡೆದುಕೊಳ್ಳಿ ಎಂದರು.

ಅಕ್ಷಯ ಗ್ಲೋಬಲ್ ಆಸ್ಪತ್ರೆಯ ಡಾಕ್ಟರ್ ರವೀಂದ್ರ ಹಲ್ಲಿನ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಬಗ್ಗೆ ನಮ್ಮ ಆರೋಗ್ಯವನ್ನು ಶಿಸ್ತುಬದ್ಧವಾಗಿ ಇಟ್ಟುಕೊಳ್ಳುವ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮಕ್ಕೆ ಆಗಮಿಸಿದ ಸದಸ್ಯರು ಉಚಿತ ಆರೋಗ್ಯ ತಪಾಸಣೆ ಶಿಬಿರದ ಸದುಪಯೋಗ ಪಡೆದುಕೊಳ್ಳಿ ಎಂದರು.

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಮಂಜಮ್ಮ ವಹಿಸಿದ್ದರು. ಕಾರ್ಯ ಕ್ರಮದಲ್ಲಿ ಜನಜಾಗೃತಿ ಯೋಜನಾಧಿಕಾರಿಗಳು ನಾಗರಾಜ್ ಮತ್ತು ಚಿತ್ರದುರ್ಗ ಯೋಜನಾ ಗ್ರಾಮ ಪಂಚಾ ಯತಿ ಮಾಜಿ ಸದಸ್ಯರಾದ ರಾಮರೆಡ್ಡಿ, ಕಸಬಾ ಬಿ ವಲಯದ ಮೇಲ್ವಿಚಾರಕರು ಸಂತೋಷ್,ಜ್ಞಾನವಿಕಾಸ ಸಮನ್ವಯ ಅಧಿಕಾರಿ ಚಂದ್ರಮ್ಮ, ವಿಮಾ ಸಮನ್ವಧಿಕಾರಿ ರಾಜು ಕೆ.ಎಸ್, ಸಮನ್ವಯಧಿಕಾರಿ ಮಂಜುನಾಥ್ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ನಾಗರತ್ನಮ್ಮ ಹಿರಿಯ ಆರೋಗ್ಯ ಕಣ್ಣಿನ ವೈದ್ಯರಾದ ದರ್ಶನ್, ದೃಷ್ಟಿ ಕಣ್ಣಿನ ಆಸ್ಪತ್ರೆ ಹಾಗೂ ಅಕ್ಷಯ ಗ್ಲೋಬಲ್ ಆಸ್ಪತ್ರೆಯ ಸಿಬ್ಬಂದಿ ವರ್ಗ ಕೇಂದ್ರದ ಸದಸ್ಯರು ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Follow the ಸಮಗ್ರ ಸುದ್ದಿ Telegram Channel: https://t.me/SamagraSuddi

ಸಮಗ್ರ ಸುದ್ದಿ channel on WhatsApp:

https://whatsapp.com/channel/0029VbDbOsBD8SE2H0L3d40j

Leave a Reply

Your email address will not be published. Required fields are marked *