Free Travel For Senior Citizen: ಇನ್ಮುಂದೆ ಹಿರಿಯ ನಾಗರಿಕರಿಗೂ ಉಚಿತ ಬಸ್ ಸೇವೆ!

Free Travel Facility For Senior Citizen: ಈ ಯೋಜನೆ ಕರ್ನಾಟಕದಲ್ಲಿ ಜಾರಿಯಾಗಿಲ್ಲ. ಮಹಾರಾಷ್ಟ್ರ ಮತ್ತು ಹರಿಯಾಣ ಸರ್ಕಾರಗಳು ಏಪ್ರಿಲ್ ತಿಂಗಳಲ್ಲಿ ಈ ಸೌಲಭ್ಯವನ್ನು ಪ್ರಾರಂಭಿಸಿವೆ. ​

ನವದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಹಿಳೆಯರು ಮತ್ತು ಹಿರಿಯ ನಾಗರಿಕರಿಗಾಗಿ ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದೆ. ಇದೀಗ ರಾಜ್ಯ ಸರ್ಕಾರದಿಂದ ಮಹಿಳೆಯರು ಮತ್ತು ಹಿರಿಯ ನಾಗರಿಕರಿಗೆ ಮತ್ತೊಂದು ಗುಡ್​ ನ್ಯೂಸ್​ ದೊರೆತಿದೆ.

ಹೌದು, ಇನ್ನು ಮುಂದೆ ಮಹಿಳೆಯರು ಮತ್ತು ಹಿರಿಯ ನಾಗರಿಕರು ಅರ್ಧ ಟಿಕೆಟ್ ಮಾತ್ರ ತೆಗೆದುಕೊಳ್ಳಬೇಕು. ರಾಜ್ಯ ಸರ್ಕಾರ ಟಿಕೆಟ್ ದರವನ್ನು ಕಡಿತಗೊಳಿಸಿದೆ. ಇನ್ಮುಂದೆ ಪ್ರಯಾಣದ ವೇಳೆ ಕೇವಲ ಶೇ.50ರಷ್ಟು ಅಂದರೆ ಅರ್ಧದಷ್ಟು ದರವನ್ನು ಮಾತ್ರ ಪಾವತಿಸಬೇಕಾಗುತ್ತದೆ.  

ಗಮನಿಸಬೇಕಾದ ಮುಖ್ಯ ವಿಷಯವೆಂದರೆ ಈ ಯೋಜನೆ ಕರ್ನಾಟಕದಲ್ಲಿ ಜಾರಿಯಾಗಿಲ್ಲ. ಮಹಾರಾಷ್ಟ್ರ ಮತ್ತು ಹರಿಯಾಣ ಸರ್ಕಾರಗಳು ಏಪ್ರಿಲ್ ತಿಂಗಳಲ್ಲಿ ಈ ಸೌಲಭ್ಯವನ್ನು ಪ್ರಾರಂಭಿಸಿವೆ. ಮಹಾರಾಷ್ಟ್ರದಲ್ಲಿ ‘ಮಹಿಳಾ ಸಮ್ಮಾನ್ ಯೋಜನೆ’ ಅಡಿಯಲ್ಲಿ ಮಹಿಳೆಯರಿಗೆ ಬಸ್ ಟಿಕೆಟ್ ದರವನ್ನು ಶೇ.50ರಷ್ಟು ಕಡಿಮೆ ಮಾಡಲಾಗಿದೆ. ಇದೇ ವೇಳೆ ಹಿರಿಯ ನಾಗರಿಕರಿಗೂ ಈ ಸೌಲಭ್ಯ ನೀಡಲಾಗುತ್ತಿದೆ. ಇದರಲ್ಲಿ 65 ರಿಂದ 75 ವರ್ಷದ ಹಿರಿಯ ನಾಗರಿಕರು ಪ್ರಯೋಜನ ಪಡೆಯುತ್ತಿದ್ದಾರೆ. ಅದೇ ರೀತಿ 75 ವರ್ಷಕ್ಕಿಂತ ಮೇಲ್ಪಟ್ಟ ನಾಗರಿಕರಿಗೆ ರಾಜ್ಯದಲ್ಲಿ ಬಸ್ ಸೇವೆ ಉಚಿತವಾಗಿದೆ.

ಬಜೆಟ್ ಅಧಿವೇಶನದಲ್ಲಿ ಘೋಷಣೆ

ನೀವು ಸಹ ಈ ಯೋಜನೆಗೆ ಅರ್ಹ ವ್ಯಕ್ತಿಯಾಗಿದ್ದಲ್ಲಿ ಬಸ್ ದರದಲ್ಲಿ ಈ ರಿಯಾಯಿತಿ ಪಡೆಯುತ್ತೀರಿ. ಈ ಸೌಲಭ್ಯವನ್ನು ರಾಜ್ಯ ಸಾರಿಗೆ ಸಂಸ್ಥೆ ಒದಗಿಸುತ್ತಿದೆ. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಬಜೆಟ್ ಅಧಿವೇಶನದಲ್ಲಿ ಇದನ್ನು ಘೋಷಿಸಿದ್ದಾರೆ. ಇದರೊಂದಿಗೆ ಹರಿಯಾಣ ಸರ್ಕಾರವು ಹಿರಿಯ ನಾಗರಿಕರಿಗೆ ಟಿಕೆಟ್ ದರವನ್ನು ಕಡಿಮೆ ಮಾಡಿದೆ.

ಏಪ್ರಿಲ್ ತಿಂಗಳಿಂದಲೇ ಈ ಸೌಲಭ್ಯ!  

ಹಿರಿಯ ನಾಗರಿಕರ ಪ್ರಯಾಣ ದರವನ್ನು ಶೇ.50ರಷ್ಟು ಕಡಿಮೆ ಮಾಡಲಾಗಿದೆ. ಈ ಪ್ರಯೋಜನವು ಹರಿಯಾಣ ರಾಜ್ಯದಲ್ಲಿ ವಾಸಿಸುವ ಜನರಿಗೆ ಮಾತ್ರ ಲಭ್ಯವಿದೆ. ಈ ಸೌಲಭ್ಯದ ಪ್ರಯೋಜನವನ್ನು ಪಡೆಯಲು ನೀವು ಬಸ್‌ನಲ್ಲಿ ಪ್ರಯಾಣಿಸುವಾಗ ಟಿಕೆಟ್ ಬುಕಿಂಗ್ ಸಮಯದಲ್ಲಿ ಹರಿಯಾಣದ ನಿವಾಸಿ ಪ್ರಮಾಣಪತ್ರವನ್ನು ತೋರಿಸಬೇಕಾಗುತ್ತದೆ.

ಹಲವು ರಾಜ್ಯಗಳಲ್ಲಿಯೂ ಸೌಲಭ್ಯ 

ಈ ಹಿಂದೆ ಹರಿಯಾಣದಲ್ಲಿ 60 ವರ್ಷ ವಯಸ್ಸಿನ ಮಹಿಳೆಯರು ಮಾತ್ರ ಈ ಸೌಲಭ್ಯದ ಪ್ರಯೋಜನವನ್ನು ಪಡೆಯುತ್ತಿದ್ದರು. ಆದರೆ ಇನ್ನು ಮುಂದೆ 65 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರು ಈ ಪ್ರಯೋಜನವನ್ನು ಪಡೆಯಲಿದ್ದಾರೆ. ದೆಹಲಿ ಮತ್ತು ಪಂಜಾಬ್‌ನಲ್ಲಿ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತವಾಗಿದೆ. ಇದಲ್ಲದೆ ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಹಿರಿಯ ನಾಗರಿಕರಿಗೆ ಬಸ್ ದರದಲ್ಲಿ ರಿಯಾಯಿತಿ ನೀಡಲಾಗುತ್ತಿದೆ.

Source : https://zeenews.india.com/kannada/business/free-travel-for-senior-citizen-free-bus-service-for-senior-citizens-from-now-on-141960

Leave a Reply

Your email address will not be published. Required fields are marked *