Sapota for Weight Loss: ಮಾರುಕಟ್ಟೆಯಲ್ಲಿ ಸಪೋಟಾ ಹಣ್ಣು ಕಡಿಮೆ ಬೆಲೆಗೆ ಸಿಗುತ್ತದೆ. ಈ ಹಣ್ಣಿನ ಸೇವನೆಯಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ.
- ಸಪೋಟಾ ಹಣ್ಣಿನ ಆರೋಗ್ಯ ಪ್ರಯೋಜನ
- ಸುಲಭವಾಗಿ ತೂಕವನ್ನು ಕಳೆದುಕೊಳ್ಳಬಹುದು
- ಅನೇಕ ಪೋಷಕಾಂಶಗಳನ್ನು ಹೊಂದಿದೆ

Sapota for Weight Loss: ಮಾರುಕಟ್ಟೆಯಲ್ಲಿ ಸಪೋಟಾ ಹಣ್ಣು ಕಡಿಮೆ ಬೆಲೆಗೆ ಸಿಗುತ್ತದೆ. ಈ ಹಣ್ಣಿನ ಸೇವನೆಯಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಸಪೋಟಾ ಹಣ್ಣನ್ನು ನಮ್ಮ ಆಹಾರದಲ್ಲಿ ಸೇವಿಸುವುದರಿಂದ ನಾವು ಸುಲಭವಾಗಿ ತೂಕವನ್ನು ಕಳೆದುಕೊಳ್ಳಬಹುದು. ಇದು ಅನೇಕ ಪೋಷಕಾಂಶಗಳನ್ನು ಹೊಂದಿದೆ. ಚಿಕ್ಕೂ ಹಣ್ಣು ಎಂದು ಸಹ ಇದನ್ನು ಕರೆಯುತ್ತಾರೆ. ಸಪೋಟಾ ತಿನ್ನುವುದರಿಂದ ಹೊಟ್ಟೆಯ ಕೊಬ್ಬನ್ನು ಸುಲಭವಾಗಿ ಕಡಿಮೆ ಮಾಡಬಹುದು.
ಸಪೋಟಾ ಹಣ್ಣಿನಲ್ಲಿ ಪೋಷಕಾಂಶಗಳು ಹೇರಳವಾಗಿವೆ. ಈ ಹಣ್ಣು ಚಯಾಪಚಯವನ್ನು ಸುಧಾರಿಸುತ್ತದೆ. ಹೊಟ್ಟೆಯ ಕೊಬ್ಬನ್ನು ಸುಲಭವಾಗಿ ಕಡಿಮೆ ಮಾಡಬಹುದು. ಸಪೋಟಾ ಹಣ್ಣಿನಲ್ಲಿ ವಿಟಮಿನ್ ಎ, ಸಿ, ಪೊಟಾಸಿಯಂ ಮತ್ತು ಫೋಲೇಟ್ ಇದೆ. ಇವುಗಳು ನಿಮ್ಮ ಹೊಟ್ಟೆಯ ಕೊಬ್ಬನ್ನು ಸುಲಭವಾಗಿ ಸುಡುತ್ತವೆ. ಆಹಾರದಲ್ಲಿ ಸಪೋಟಾ ಸೇರಿಸುವುದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.
ಸಪೋಟಾ ಹಣ್ಣನ್ನು ತಿನ್ನುವುದರಿಂದ ತೂಕ ಇಳಿಕೆಯಾಗುತ್ತದೆ. ಇದು ನಮ್ಮ ದೇಹದಲ್ಲಿರುವ ಹೆಚ್ಚುವರಿ ಕ್ಯಾಲೋರಿಗಳನ್ನು ಕರಗಿಸುತ್ತದೆ. ಇದಲ್ಲದೆ, ಸಪೋಟಾ ಹಣ್ಣಿನಲ್ಲಿ ನೈಸರ್ಗಿಕ ಸಕ್ಕರೆ ಇರುತ್ತದೆ. ತೂಕ ಹೆಚ್ಚಾಗುವ ಭಯವಿಲ್ಲ. ಸಪೋಟ ಹಣ್ಣನ್ನು ಆರಾಮವಾಗಿ ತಿನ್ನಬಹುದು. ಸಪೋಟ ಹಣ್ಣನ್ನು ತಿಂದರೆ ಶುಗರ್ ಹೆಚ್ಚಾಗುವ ಚಿಂತೆಯಿಲ್ಲ. ಇದರಲ್ಲಿರುವ ವಿಟಮಿನ್‌ಗಳು ನಮ್ಮ ದೇಹವನ್ನು ಆರೋಗ್ಯಕರವಾಗಿರಿಸಲು ಸಹಾಯ ಮಾಡುತ್ತದೆ. ಈ ಸಪೋಟಾ ಹಣ್ಣು ರಕ್ತದಲ್ಲಿನ ಸಕ್ಕರೆ ಅಂಶ ಹೆಚ್ಚಾಗುವುದನ್ನು ತಡೆಯುತ್ತದೆ. ಆದರೆ, ಮಧುಮೇಹಿಗಳು ಈ ಹಣ್ಣನ್ನು ಸೇವಿಸುವ ಮುನ್ನ ವೈದ್ಯರ ಸಲಹೆ ಪಡೆಯಬೇಕು.
ಸಪೋಟಾ ಹಣ್ಣಿನಲ್ಲಿ ನಾರಿನಂಶ ಹೇರಳವಾಗಿದೆ. ಇದರಿಂದ ಮಲಬದ್ಧತೆ ಸಮಸ್ಯೆಗೆ ಪರಿಹಾರ ಸಿಗುವುದು. ಸಪೋಟಾ ಸೇವಿಸಿದರೆ ಹೆಚ್ಚು ಹೊತ್ತು ಹಸಿವಾಗುವುದಿಲ್ಲ. ಹೊಟ್ಟೆ ತುಂಬಿದ ಅನುಭವವಾಗುತ್ತದೆ. ಫೈಬರ್ ಹೊಂದಿರುವ ಆಹಾರವು ತೂಕವನ್ನು ಹೆಚ್ಚಿಸುವುದಿಲ್ಲ. ಇದು ಅತಿಯಾಗಿ ತಿನ್ನುವುದನ್ನು ತಡೆಯುತ್ತದೆ. ಸಪೋಟಾ ಹಣ್ಣನ್ನು ನಮ್ಮ ಆಹಾರದಲ್ಲಿ ಸೇರಿಸುವುದರಿಂದ ಕರುಳಿನ ಆರೋಗ್ಯವನ್ನು ಸುಧಾರಿಸಬಹುದು.
ಸಪೋಟಾ ಹಣ್ಣು ಮಾರುಕಟ್ಟೆಯಲ್ಲಿ ಸುಲಭವಾಗಿ ಸಿಗುತ್ತದೆ. ಇವು ಅತ್ಯಂತ ಕಡಿಮೆ ದರದಲ್ಲಿ ದೊರೆಯುತ್ತವೆ. ಈ ಹಣ್ಣುಗಳು ನಮ್ಮ ಜೀರ್ಣಕ್ರಿಯೆಯನ್ನು ಸುಲಭಗೊಳಿಸಲು ಸಹಾಯ ಮಾಡುತ್ತದೆ. ಸಪೋಟಾ ಹಣ್ಣು ಕರುಳಿನ ಚಲನೆಗೆ ತುಂಬಾ ಸಹಕಾರಿ. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆ ಇರುವವರು ವೈದ್ಯರ ಸಲಹೆಯಂತೆ ಸಪೋಟಾ ಹಣ್ಣನ್ನು ಆಹಾರದಲ್ಲಿ ಸೇರಿಸಿಕೊಳ್ಳಬಹುದು.
ಸಪೋಟಾ ಹಣ್ಣು ಇತರ ಹಣ್ಣುಗಳಿಗೆ ಹೋಲಿಸಿದರೆ ಕಡಿಮೆ ಕ್ಯಾಲೋರಿ ಮಟ್ಟವನ್ನು ಹೊಂದಿದೆ. ಇದರೊಂದಿಗೆ ನೀವು ರುಚಿಯನ್ನು ಆನಂದಿಸುತ್ತಾ ಸುಲಭವಾಗಿ ತೂಕವನ್ನು ಕಳೆದುಕೊಳ್ಳಬಹುದು.
Source : https://zeenews.india.com/kannada/health/weight-loss-by-consuming-sapota-fruit-203762
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1