ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ: ಬೋವಿ ಗುರುಪೀಠದಲ್ಲಿ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮೀಜಿಗಳನ್ನು ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಆದಿ ಜಾಂಬವ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾದ ಜಿ ಎಸ್ ಮಂಜುನಾಥ್‍ರವರು ಭೇಟಿ ಮಾಡಿ ಆಶೀರ್ವಾದವನ್ನು ಪಡೆದು ಸನ್ಮಾನವನ್ನು ಸ್ವೀಕರಿಸಿದರು ಹಾಗೂ ಇದೇ ಸಂದರ್ಭದಲ್ಲಿ ಕುಂಚಿಟಿಗ ಮಹಾ ಸಂಸ್ಥಾನದ ಪರಮಪೂಜ್ಯ ಶ್ರೀಗಳಾದ ಶ್ರೀ ಶಾಂತವೀರ ಮಹಾಸ್ವಾಮೀಜಿ ಗಳನ್ನು ಭೇಟಿ ಮಾಡಿ ಆಶೀರ್ವಾದವನ್ನು ಪಡೆದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನೇರಲಗುಂಟೆ ಎಂ ರಾಮಪ್ಪ ಚಿತ್ರದುರ್ಗ ಜಿಲ್ಲಾ ಇತರೆ ಹಿಂದುಳಿದ ವರ್ಗಗಳ ವಿಭಾಗದ ಕಾಂಗ್ರೆಸ್ ಅಧ್ಯಕ್ಷರಾದ ಎನ್ ಡಿ ಕುಮಾರ್ ಚಿತ್ರದುರ್ಗ ಜಿಲ್ಲಾ ಬೋವಿ ಸಮಾಜದ ಅಧ್ಯಕ್ಷರಾದ ಚಿಕ್ಕಂದವಾಡಿ ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.