ಚಿತ್ರದುರ್ಗ ಜಿಲ್ಲೆಯ ವಿವಿದೆಡೆ ಅಧಿಕಾರಿಗಳು ದಾಳಿ ನಡೆಸಿದ್ದು ಚಿತ್ರದುರ್ಗ ಮತ್ತು ಹೊಸದುರ್ಗ ಸೇರಿ ಒಟ್ಟು 12 ಪಿಓಪಿ ಗಣೇಶ ಮೂರ್ತಿಗಳನ್ನು ವಶಕ್ಕೆ ಪಡೆಯಲಾಗಿದೆ. ಚಿತ್ರದುರ್ಗದಲ್ಲಿ 8, ಹೊಸದುರ್ಗದಲ್ಲಿ 4 ಪಿಓಪಿ ಗಣೇಶ ಮೂರ್ತಿ ವಶಕ್ಕೆ ಪಡೆಯಲಾಗಿದೆ. ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ರೇಣುಕಾ, ಪರಿಸರ ಇಲಾಖೆ ಅಧಿಕಾರಿ ಪ್ರಕಾಶ್ ನೇತೃತ್ವದಲ್ಲಿ ದಾಳಿ ನಡೆದಿದ್ದು ಸಾಗಣೆ ಹಾಗೂ ಮಾರಾಟ ಮಾಡುತ್ತಿದ್ದ ಪಿಓಪಿ ಗಣೇಶ ಮೂರ್ತಿಗಳನ್ನು ವಶಕ್ಕೆ ಪಡೆಯಲಾಗಿದೆ.

ಚಿತ್ರದುರ್ಗ, ಸೆ.14: ಗಣೇಶ ಹಬ್ಬಕ್ಕೆ(Ganesha Chaturthi)ಕೆಲವೇ ದಿನಗಳು ಬಾಕಿ ಉಳಿದಿವೆ. ದೇಶದ ಅನೇಕ ಕಡೆ ಗಣೇಶ ಮೂರ್ತಿ ತಯಾರಕರು ದೊಡ್ಡ ಪ್ರಮಾಣದಲ್ಲಿ ಗಣೇಶ ಮೂರ್ತಿಗಳನ್ನು ಸಿದ್ದಗೊಳಿಸುತ್ತಿದ್ದಾರೆ. ಇನ್ನು ಮತ್ತೊಂದೆಡೆ ನಿಷೇಧದ ನಡುವೆಯೂ ಅನೇಕ ಕಡೆಗಳಲ್ಲಿ ಪಿಓಪಿ ಗಣೇಶ ಮೂರ್ತಿಗಳನ್ನು(POP Ganesha) ತಯಾರಿಸಿ ಮಾರಾಟ ಮಾಡಲಾಗುತ್ತಿದೆ. ಪರಿಸರದ ಮೇಲೆ ದುಷ್ಪರಿಣಾಮ ಬೀರುವ ಪಿಓಪಿ ಗಣೇಶ ಮೂರ್ತಿಗಳನ್ನು ತಯಾರಿಸಿದ್ದವರಿಗೆ ಚಿತ್ರದುರ್ಗ, ಹೊಸದುರ್ಗದಲ್ಲಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ ವಿವಿದೆಡೆ ಅಧಿಕಾರಿಗಳು ದಾಳಿ ನಡೆಸಿದ್ದು ಚಿತ್ರದುರ್ಗ ಮತ್ತು ಹೊಸದುರ್ಗ ಸೇರಿ ಒಟ್ಟು 12 ಪಿಓಪಿ ಗಣೇಶ ಮೂರ್ತಿಗಳನ್ನು ವಶಕ್ಕೆ ಪಡೆಯಲಾಗಿದೆ. ಚಿತ್ರದುರ್ಗದಲ್ಲಿ 8, ಹೊಸದುರ್ಗದಲ್ಲಿ 4 ಪಿಓಪಿ ಗಣೇಶ ಮೂರ್ತಿ ವಶಕ್ಕೆ ಪಡೆಯಲಾಗಿದೆ.
ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ರೇಣುಕಾ, ಪರಿಸರ ಇಲಾಖೆ ಅಧಿಕಾರಿ ಪ್ರಕಾಶ್ ನೇತೃತ್ವದಲ್ಲಿ ದಾಳಿ ನಡೆದಿದ್ದು ಸಾಗಣೆ ಹಾಗೂ ಮಾರಾಟ ಮಾಡುತ್ತಿದ್ದ ಪಿಓಪಿ ಗಣೇಶ ಮೂರ್ತಿಗಳನ್ನು ವಶಕ್ಕೆ ಪಡೆಯಲಾಗಿದೆ. ಜಿಲ್ಲೆಯಲ್ಲಿ ಪಿಓಪಿ ಗಣೇಶ ವಿಗ್ರಹ ಮಾರಾಟಕ್ಕೆ ಅಧಿಕಾರಿಗಳು ಬ್ರೇಕ್ ಹಾಕಿದ್ದು ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಪರಿಸರಕ್ಕೆ ಮಾರಕವಾದ ಪಿಓಪಿ ಗಣೇಶ ಬಳಸದಂತೆ ಎಚ್ವರಿಕೆ ನೀಡಿದ್ದಾರೆ.
ಪಿಓಪಿ ಗಣೇಶ
ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ: https://chat.whatsapp.com/KnDIfiBURQ9G5sLEJLqshk
ನಮ್ಮ Facebook page: https://www.facebook.com/samagrasudii