
ಮಹಿಳಾ ಪ್ರೀಮಿಯರ್ ಲೀಗ್ನ (Women’s Premier League) ಆರನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (Royal Challengers Bangalore and Gujarat Titans) ತಂಡಗಳು ಬುಧವಾರ ಮುಖಾಮುಖಿಯಾಗಲಿವೆ. ಬೆತ್ ಮೂನಿ (Beth Mooney) ನಾಯಕತ್ವದ ಗುಜರಾತ್ ಮತ್ತು ಸ್ಮೃತಿ ಮಂಧಾನ (Smriti Mandhana) ನೇತೃತ್ವದ ಆರ್ಸಿಬಿ ಮೊದಲ ಗೆಲುವಿನ ನಿರೀಕ್ಷೆಯಲ್ಲಿವೆ. ಎರಡೂ ತಂಡಗಳು ಆರಂಭಿಕ ಪಂದ್ಯಗಳಲ್ಲಿ ಸೋತಿವೆ. ಹೀಗಿರುವಾಗ ಉಭಯ ತಂಡಗಳು ಗೆಲುವಿನ ಖಾತೆ ತೆರೆಯಲು ಉತ್ಸುಕವಾಗಿವೆ. ಗುಜರಾತ್ ತಂಡವು ಲೀಗ್ನ ಆರಂಭಿಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 143 ರನ್ಗಳಿಂದ ಸೋತಿತು. ಆ ಬಳಿಕ ತಮ್ಮ ಎರಡನೇ ಪಂದ್ಯದಲ್ಲಿ ಯುಪಿ ವಾರಿಯರ್ಸ್ ಎದುರು 3 ವಿಕೆಟ್ಗಳಿಂದ ಸೋತಿತು.
ಲೀಗ್ನ ಅತ್ಯಂತ ದುಬಾರಿ ಆಟಗಾರ್ತಿ ಮಂಧಾನ ನಾಯಕತ್ವದ ಆರ್ಸಿಬಿ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 60 ರನ್ಗಳಿಂದ ಮತ್ತು ಎರಡನೇ ಪಂದ್ಯದಲ್ಲಿ ಮುಂಬೈ ವಿರುದ್ಧ 9 ವಿಕೆಟ್ಗಳಿಂದ ಸೋತಿತ್ತು.
Jasprit Bumrah: ಜಸ್ಪ್ರೀತ್ ಬುಮ್ರಾಗೆ ಯಶಸ್ವಿ ಶಸ್ತ್ರಚಿಕಿತ್ಸೆ; ಮೈದಾನಕ್ಕೆ ರೀ ಎಂಟ್ರಿ ಯಾವಾಗ ಗೊತ್ತಾ?
ಪಂದ್ಯದ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ
ಗುಜರಾತ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯ ಯಾವಾಗ ನಡೆಯಲಿದೆ?
ಗುಜರಾತ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯ ಮಾರ್ಚ್ 8 ಬುಧವಾರ ನಡೆಯಲಿದೆ.
ಗುಜರಾತ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?
ಗುಜರಾತ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯ ರಾತ್ರಿ 7:30 ಕ್ಕೆ ನಡೆಯಲಿದೆ. ಏಳು ಗಂಟೆಗೆ ಟಾಸ್ ನಡೆಯಲಿದೆ.
ಗುಜರಾತ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದ ನೇರ ಪ್ರಸಾರ ಎಲ್ಲಿ ವೀಕ್ಷಿಸಬಹುದು?
ಗುಜರಾತ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದ ನೇರ ಪ್ರಸಾರವು ಸ್ಪೋರ್ಟ್ಸ್ 18 ಚಾನೆಲ್ನಲ್ಲಿರಲಿದೆ.
ಗುಜರಾತ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬಹುದು?
ಗುಜರಾತ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದ ಲೈವ್ ಸ್ಟ್ರೀಮಿಂಗ್ ಜಿಯೋ ಸಿನಿಮಾ ಅಪ್ಲಿಕೇಶನ್ನಲ್ಲಿ ಇರಲಿದೆ.
ಗುಜರಾತ್ ಜೈಂಟ್ಸ್ ತಂಡ: ಆಶ್ಲೇ ಗಾರ್ಡ್ನರ್, ಬೆತ್ ಮೂನಿ, ಸ್ನೇಹ ರಾಣಾ, ಮಾನಸಿ ಜೋಶಿ, ಶಬ್ನಮ್ ಶಕೀಲ್, ಸೋಫಿ ಡಂಕ್ಲಿ, ಅನ್ನಾಬೆಲ್ ಸದರ್ಲ್ಯಾಂಡ್, ಹರ್ಲೀನ್ ಡಿಯೋಲ್, ಡಿಯಾಂಡ್ರಾ ಡಾಟಿನ್, ಡೈಲನ್ ಹೇಮಲತಾ, ಮೋನಿಕಾ ಪಟೇಲ್, ತನುಜಾ ಕನ್ವರ್, ಸುಷ್ಮಾ ವರ್ಮಾ, ಹರ್ಲಿಹಾಮ್ ಗಾಲಾ, ಎಸ್ ಮೇಘನಾ, ಆಶ್ವಿಯಾ ಕುಮಾರಿ, ಜಾರ್ಜಿಯಾ , ಪರುನಿಕಾ ಸಿಸೋಡಿಯಾ.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಸ್ಮೃತಿ ಮಂಧಾನ(ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ದಿಶಾ ಕಸತ್, ರಿಚಾ ಘೋಷ್(ವಿಕೆಟ್ ಕೀಪರ್), ಹೀದರ್ ನೈಟ್, ಕನಿಕಾ ಅಹುಜಾ, ಆಶಾ ಶೋಬನಾ, ಮೇಗನ್ ಸ್ಚುಟ್, ಪ್ರೀತಿ ಬೋಸ್, ರೇಣುಕಾ ಠಾಕೂರ್ ಸಿಂಗ್, ಡೇನ್ ವ್ಯಾನ್ ನೀಕರ್ಕ್, ಇಂದ್ರಾಣಿ ರಾಯ್, ಎರಿನ್ ಬರ್ನ್ಸ್, ಪೂನಂ ಖೇಮ್ನಾರ್, ಸಹನಾ ಪವಾರ್, ಶ್ರೇಯಾಂಕ ಪಾಟೀಲ್, ಕೋಮಲ್ ಝಂಝಾದ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Views: 0