ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಜು. 27 : ಜಾಗತಿಕ ಲಿಂಗಾಯತ ಮಹಾಸಭಾ (ರಿ), ಬೆಂಗಳೂರು ಚಿತ್ರದುರ್ಗ ಜಿಲ್ಲಾ ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭವು ಜು.29ರ ಸೋಮವಾರ, ಬೆಳಿಗ್ಗೆ 10.30 ಗಂಟೆಗೆ ತ.ರಾ.ಸು. ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ಪ್ರಧಾನ ಸಂಚಾಲಕರಾದ ಜಿ.ಡಿ. ಕೆಂಚವೀರಪ್ಪ ತಿಳಿಸಿದ್ದಾರೆ.
ಚಿತ್ರದುಗ ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಲಿಂಗಾಯತ ಸಮುದಾಯಕ್ಕೆ ಸಂಬಂಧಪಟ್ಟಂತೆ ಹಲವಾರು ಸಂಘಟನೆಗಳು ಇವೆ. ಅದರಲ್ಲಿ ಲಿಂಗಾಯತ ಸಮುದಾಯದ 102 ಜಾತಿಗಳನ್ನು ಸೇರಿಕೊಂಡು ಸಮುದಾಯವನ್ನು ನಿರ್ಮಾಣವನ್ನು ಯಾರು ಸಹಾ ಮಾಡಿಲ್ಲ, ಆದರೆ ನಮ್ಮ ಸಂಘಟನೆಯಲ್ಲಿ ಇವರನ್ನು ಸೇರಿಸಿಕೊಂಡು ನಿರ್ಮಾಣ ಮಾಡಲಾಗಿದೆ. ಲಿಂಗಾಯತವನ್ನು ಸ್ವತಂತ್ರ ಧರ್ಮವನ್ನಾಗಿ ಮಾಡಲು ಹೋರಾಟವನ್ನು ರೂಪಿಸಲಾಗುವುದು 2018ರಲ್ಲಿ ಅಸ್ಥಿತ್ವಕ್ಕೆ ಬಂದ ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾವಾರು ಸಮಿತಿಯನ್ನು ರೂಪಿಸುತ್ತದೆ ಎಂದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಸಾಣೆಹಳ್ಳಿಯ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ ಶಾಖಾಮಠದ ಶ್ರೀ ಡಾ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯರಾದ ಡಾ ಶ್ರೀ ಜಯಬಸವಕುಮಾರ ಸ್ವಾಮಿಗಳು ವಹಿಸಲಿದ್ದಾರೆ.
ಕಾರ್ಯಕ್ರಮದ ಉದ್ಘಾಟನೆಯನ್ನು ನಿವೃತ್ತ ಐ.ಎ.ಎಸ್. ಅಧಿಕಾರಿ, ಜಾಗತಿಕ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಡಾ ಶಿವಾನಂದ ಜಾಮದಾರ ನೇರವೇರಿಸಲಿದ್ದಾರೆ. ಚಿತ್ರದುರ್ಗದ ಬಸವಮಂಟಪದ ಮಾತಾ ದಾನೇಶ್ವರಿ ತಾಯಿ ಆಗಮಿಸಲಿದ್ದು, ಅಧ್ಯಕ್ಷತೆಯನ್ನು ನಿವೃತ್ತ ಪ್ರಾಧ್ಯಾಪಕರು ಹಾಗೂ ಸಾಹಿತಿಗಳಾದ ಡಾ ಜಿ.ಎನ್. ಮಲ್ಲಿಕಾರ್ಜುನಪ್ಪ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಾಗತಿಕ ಲಿಂಗಾಯತ ಮಹಾಸಭಾದ ಬೆಳಗಾಂ ಜಿಲ್ಲಾ ಘಟಕದ ಅಧ್ಯಕ್ಷರಾದ ಬಸವರಾಜ ರೊಟ್ಟಿ, ಚಿಕ್ಕಮಗಳೂರು ಜಿಲ್ಲಾ ಘಟಕದ ಸಂಚಾಲಕರಾದ ಶ್ರೀಮತಿ ಪುಷ್ಪಲತಾ ಎಸ್.ವಿ, ಕೊಪ್ಪಳ ಜಿಲ್ಲಾ ಘಟಕದ ಅಧ್ಯಕ್ಷರಾದ ಹನುಮೇಶ ಕಲಮಂಗಿ, ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷರಾದ ಮಹಾದೇವಪ್ಪ, ದಾವಣಗೆರೆ ಜಿಲ್ಲಾ ಘಟಕ ಅಧ್ಯಕ್ಷರಾದ ರುದ್ರಮುನಿಸ್ವಾಮಿ, ದಾವಣಗೆರೆ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಕುಸುಮ ಲೋಕೇಶ್ ಭಾಗವಹಿಸಲಿದ್ದಾರೆ. ಶ್ರೀ ಗಾನಯೋಗಿ ಸಂಗೀತ ಬಳಗದ ತೋಟಪ್ಪ ಉತ್ತಂಗಿ ಮತ್ತು ಸಂಗಡಿಗರಿಂದ ವಚನ ಗಾಯನ ಕಾರ್ಯಕ್ರಮ ನಡೆಯಲಿದೆ.
ಗೋಷ್ಟಿಯಲ್ಲಿ ನಂದೀಶ್, ಧನಂಜಯ, ಬಸವರಾಜಪ್ಪ, ಹಳಿಯೂರು ಸಿದ್ದಪ್ಪ ಭಾಗವಹಿಸಿದ್ದರು.