IAF Recruitment 2023: ಸೆಪ್ಟೆಂಬರ್ 16ರಂದು ನೇರ ಸಂದರ್ಶನ ನಡೆಯಲಿದ್ದು, ಸೆ.12-17ರವರೆಗೆ ನೇಮಕಾತಿ ರ್ಯಾಲಿ ನಡೆಯಲಿದೆ. ಈ ಹುದ್ದೆಗಳ ನೇಮಕಾತಿ ಪರೀಕ್ಷೆ ಸೆ.12-16ರವರೆಗೆ ನಡೆಯಲಿದೆ.

ನವದೆಹಲಿ: SSLC ಪಾಸಾದ ಅಭ್ಯರ್ಥಿಗಳಿಗೆ ಇಲ್ಲಿದೆ ಸುವರ್ಣಾವಕಾಶ. ಭಾರತೀಯ ವಾಯುಪಡೆಯ ಅಗ್ನಿವೀರ್ ವಾಯು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ನೇರ ಸಂದರ್ಶನ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 16ರಂದು ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು. ಈ ನೇಮಕಾತಿ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಹುದ್ದೆಗಳ ವಿವರ: ಇಂಡಿಯನ್ ಏರ್‍ಫೋರ್ಸ್ (IAF)ನಲ್ಲಿ ಖಾಲಿ ಇರುವ ಅಗ್ನಿವೀರ್ ವಾಯು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ: ಅರ್ಹ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ: ಅಭ್ಯರ್ಥಿಗಳ ಗರಿಷ್ಠ ವಯಸ್ಸು 21 ವರ್ಷದೊಳಗಿರಬೇಕು. ಮೀಸಲಾತಿ ವರ್ಗಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ಸ್ಟ್ರೀಮ್ ಸೂಕ್ತತೆ ಪರೀಕ್ಷೆ, ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
ಮಾಸಿಕ ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 30 ರಿಂದ 40 ಸಾವಿರ ರೂ. ನೀಡಲಾಗುತ್ತದೆ.
ಪ್ರಮುಖ ದಿನಾಂಕ: ಸೆಪ್ಟೆಂಬರ್ 16ರಂದು ನೇರ ಸಂದರ್ಶನ ನಡೆಯಲಿದ್ದು, ಸೆ.12-17ರವರೆಗೆ ನೇಮಕಾತಿ ರ್ಯಾಲಿ ನಡೆಯಲಿದೆ. ಈ ಹುದ್ದೆಗಳ ನೇಮಕಾತಿ ಪರೀಕ್ಷೆ ಸೆ.12-16ರವರೆಗೆ ನಡೆಯಲಿದೆ. ಈ ಹುದ್ದೆಗಳಿಗೆ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಸೆ.1 ಆಗಿರುತ್ತದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು indianairforce.nic.in ವೆಬ್‍ಸೈಟ್‍ಗೆ ಭೇಟಿ ನೀಡಬಹುದಾಗಿದೆ.