ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡಿಸಲು ರಾಜ್ಯದ ಎಲ್ಲಾ ಭಾಗದಲ್ಲಿ ಒಮ್ಮೆಲೇ ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಆಹಾರ ಇಲಾಖೆ ಹೆಚ್ಚುವರಿ ನಿರ್ದೇಶಕ ಘ್ಯಾನೇಂದ್ರ ಮಾಹಿತಿ ನೀಡಿದ್ದಾರೆ.

ಬೆಂಗಳೂರು : ಬಿಪಿಎಲ್, ಎಪಿಎಲ್ ಕಾರ್ಡ್ ದಾರರಿಗೆ ಆಹಾರ ಇಲಾಖೆ ಗುಡ್ ನ್ಯೂಸ್ ನೀಡಿದೆ. ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ನೀಡಿ ಆಹಾರ ಇಲಾಖೆ ಆದೇಶ ಹೊರಡಿಸಿದೆ. ಇಂದಿನಿಂದ 9 ದಿನಗಳ ಕಾಲ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ನೀಡಲಾಗಿದೆ . ಅಂದರೆ ಇಂದಿನಿಂದ ಅಕ್ಟೋಬರ್ 13 ರವರೆಗೆ ಪಡಿತರಾ ಚೀಟಿಯಲ್ಲಿ ತಿದ್ದುಪಡಿ ಮಾಡಿಸಿಕೊಳ್ಳಬಹುದಾಗಿದೆ.
ಅ.5ರಿಂದ 13ರವರೆಗಗೂ ತಿದ್ದುಪಡಿಗೆ ಅವಕಾಶ :
ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡಿಸಲು ರಾಜ್ಯದ ಎಲ್ಲಾ ಭಾಗದಲ್ಲಿ ಒಮ್ಮೆಲೇ ಅವಕಾಶ ಕಲ್ಪಿಸಲಾಗಿದೆ. ರೇಶನ್ ಕಾರ್ಡ್ ತಿದ್ದುಪಡಿ ಮಾಡುವ ಪ್ರಕ್ರಿಯೆಯನ್ನು ವಿಭಾಗವಾರುಗಳಂತೆ ವಿಂಗಡಿಸಲಾಗಿದ್ದು, ಪ್ರತಿ ವಿಭಾಗಕ್ಕೆ ತಲಾ ಮೂರು ದಿನಗಳ ಕಾಲ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ಮಾಡಿ ಕೊಡಲಾಗಿದೆ. ಈ ಬಗ್ಗೆ ಆಹಾರ ಇಲಾಖೆ ಹೆಚ್ಚುವರಿ ನಿರ್ದೇಶಕ ಘ್ಯಾನೇಂದ್ರ ಮಾಹಿತಿ ನೀಡಿದ್ದಾರೆ.
ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಅವಕಾಶ :
ಮೊದಲ ವಲಯದಲ್ಲಿ ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳ ಎಪಿಎಲ್, ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಅಗಸ್ಟ್ 5ರಿಂದ 7ರವರೆಗೂ ಇಲ್ಲಿ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ವಿಶೇಷ ಎಂದರೆ ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಇಲ್ಲಿ ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಮಾತ್ರ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ.
ರೇಶನ್ ಕಾರ್ಡ್ ಎಲ್ಲಿ ತಿದ್ದುಪಡಿ ಮಾಡಿಸಬಹುದು ? :
ಕಳೆದ ತಿಂಗಳು ಕೂಡಾ ಆಹಾರ ಇಲಾಖೆ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಿತ್ತು. ಆದರೆ ಸರ್ವರ್ ಡೌನ್ ಆಗಿ ಸಾರ್ವಜನಿಕರಿಗೆ ಈ ಅವಕಾಶವನ್ನು ಬಳಸಿಕೊಳ್ಳುವುದು ಸಾಧ್ಯವಾಗಿರಲಿಲ್ಲ. ತಿದ್ದುಪಡಿ ಮಾಡಿಸಲು ಬಂದ ಸಾರ್ವಜನಿಕರು ಸಮಸ್ಯೆ ಎದುರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಮತ್ತೆ ಸರ್ಕಾರ ಈ ಅವಕಾಶ ನೀಡಿದೆ. ಸೇವಾ ಕೇಂದ್ರದಲ್ಲಿ ಮಾತ್ರ ಈ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಇನ್ನು, ರೇಷನ್ ಕಾರ್ಡ್ ತಿದ್ದುಪಡಿಗೆ ಬಯೋಮೆಟ್ರಿಕ್ ಸೌಲಭ್ಯ ಇರುವ ಕಂಪ್ಯೂಟರ್ ಅವಶ್ಯವಾಗಿದ್ದು, ಬೆಂಗಳೂರು ಒನ್, ಗ್ರಾಮ ಒನ್, ಕರ್ನಾಟಕ ಒನ್ ಸೇವಾ ಕೇಂದ್ರದಲ್ಲಿ ತಿದ್ದುಪಡಿ ಮಾಡಿಸಬಹುದಾಗಿದೆ.
ಏನೇನು ತಿದ್ದುಪಡಿ ಮಾಡಬಹುದು? :
1. ಫಲಾನುಭವಿ ಹೆಸರು ಬದಲಾವಣೆ, ಪಡಿತರ ಕೇಂದ್ರ ಬದಲಾವಣೆ
2. ಕಾರ್ಡ್ ಸದಸ್ಯರ ಹೆಸರು ಡಿಲಿಟ್ & ಸೇರ್ಪಡೆ
3. ಕಾರ್ಡ್ ಮುಖ್ಯಸ್ಥರ ಹೆಸರು ಬದಲಾವಣೆ
4. ಮಹಿಳೆಯನ್ನು ಮನೆಯ ಯಜಮಾನಿ ಎಂದು ಎಂದು ಇಲ್ಲಿ ಹೆಸರು ಬದಲಾವಣೆ ಮಾಡಿಕೊಳ್ಳಬಹುದು.
ರಾಜ್ಯದ ಎಲ್ಲಾ ಭಾಗದಲ್ಲಿ ಅವಕಾಶ :
ವಿಭಾಗವಾರುವಿನಂತೆ ತಲಾ ಮೂರು ದಿನಗಳ ಕಾಲ, ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.
1. ಮೊದಲ ವಲಯದಲ್ಲಿ ಬೆಂಗಳೂರು ನಗರ, ಗ್ರಾಮಾಂತರ – ಅ. 5ರಿಂದ 7ರವರೆಗೆ
2. ಕಲಬುರಗಿ ವಲಯ – ಅ.8ರಿಂದ 10ವರೆಗೆ
3.ಬೆಳಗಾವಿ ವಲಯ – ಅ.11ರಿಂದ 13ರವರೆಗೆ ಅವಕಾಶ
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group : https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharechat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1