SSC Stenographer Jobs: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 12ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಬೆಂಗಳೂರು: ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ ಖಾಲಿ ಇರುವ ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ ಮತ್ತು ‘ಡಿ’ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 12ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಶೀಘ್ರ ಲಿಪಿ ಮತ್ತು ಬೆರಳಚ್ಚು ಕೌಶಲ್ಯ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆ ಮೂಲಕ ನೇಮಕಾತಿ ನಡೆಯಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಗಸ್ಟ್ 23ರೊಳಗೆ https://ssc.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
ನೇಮಕಾತಿಯ ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆಯ ಪ್ರಾರಂಭದ ದಿನಾಂಕ : 02-08-2023
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ : 23-08-2023
ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ : 24-08- 2023
SSC ಸ್ಟೆನೋಗ್ರಾಫರ್ ಪರೀಕ್ಷೆ ದಿನಾಂಕ: 2023ರ ಅಕ್ಟೋಬರ್ 12 ಮತ್ತು 13
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ 080-25502520 ಸಂಖ್ಯೆಗೆ ಕರೆ ಮಾಡಬಹುದು. ಸೋಮವಾರದಿಂದ ಶುಕ್ರವಾರ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ SSC ಮುಖ್ಯ ಕಚೇರಿಯ ವೆಬ್‍ಸೈಟ್ https://ssc.nic.in ಮತ್ತು SSC ಬೆಂಗಳೂರಿನ ಸ್ಥಳೀಯ ಕಛೇರಿಯ ವೆಬ್‍ಸೈಟ್ www.ssckkr.kar.nic.in ನ್ನು ಸಂಪರ್ಕಿಸಬಹುದು.
Source : https://zeenews.india.com/kannada/career/govt-jobs-good-news-for-sslc-passed-job-aspirants-151649
Views: 0