IPL 2023: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್: ಸ್ಟಾರ್ ಆಟಗಾರ ಕಣಕ್ಕಿಳಿಯುವುದು ಖಚಿತ

IPL 2023 RCB vs MI: ಭಾನುವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಆದರೆ ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಮೂವರು ಸ್ಟಾರ್ ಆಟಗಾರರು ಅಲಭ್ಯರಾಗಲಿದ್ದಾರೆ. ಪಾದದ ನೋವಿನಿಂದ ಬಳಲುತ್ತಿರುವ ರಜತ್ ಪಾಟಿದಾರ್ ಹಾಗೂ ಮೊಣಕಾಲಿನ ನೋವಿಗೆ ಒಳಗಾಗಿರುವ ಜೋಶ್ ಹ್ಯಾಝಲ್​ವುಡ್ ಮೊದಲ ಪಂದ್ಯದಲ್ಲಿ ಕಾಣಿಸಿಕೊಳ್ಳುವುದಿಲ್ಲ. ಹಾಗೆಯೇ ನ್ಯೂಜಿಲೆಂಡ್ ವಿರುದ್ಧ ಸರಣಿ ಆಡುತ್ತಿರುವ ಶ್ರೀಲಂಕಾ ವನಿಂದು ಹಸರಂಗ ಕೂಡ ಮುಂಬೈ ಇಂಡಿಯನ್ಸ್ ವಿರುದ್ಧ ಆಡುತ್ತಿಲ್ಲ. ಇದಾಗ್ಯೂ ಗಾಯಗೊಂಡಿದ್ದ ಗ್ಲೆನ್ ಮ್ಯಾಕ್ಸ್​ವೆಲ್ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯುವುದು ಖಚಿತವಾಗಿ. ಫಿಟ್​ನೆಸ್ ಸಮಸ್ಯೆ ಹೊಂದಿರುವ ಮ್ಯಾಕ್ಸ್​ವೆಲ್ ಮೊದಲ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎನ್ನಲಾಗಿತ್ತು. ಆದರೀಗ ಅವರ ಫಿಟ್​ನೆಸ್​ನಲ್ಲಿ ಚೇತರಿಕೆ ಕಂಡಿದ್ದು, ಹೀಗಾಗಿ ಚಿನ್ನಸ್ಚಾಮಿ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ಆಲ್​ರೌಂಡರ್ ಕಣಕ್ಕಿಳಿಯಲಿದ್ದಾರೆ.ಇನ್ನು ಜೋಶ್ ಹ್ಯಾಝಲ್​ವುಡ್ ಬದಲಿಗೆ ಆರ್​ಸಿಬಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಇಂಗ್ಲೆಂಡ್ ವೇಗಿ ರೀಸ್ ಟೋಪ್ಲಿಗೆ ಸ್ಥಾನ ಸಿಗಲಿದೆ. ಇನ್ನು ಹಸರಂಗ ಬದಲಿಗೆ ಮೈಕಲ್ ಬ್ರೇಸ್​ವೆಲ್​ಗೆ ಚಾನ್ಸ್ ಸಿಕ್ಕರೂ ಅಚ್ಚರಿಪಡಬೇಕಿಲ್ಲ.ಒಟ್ಟಿನಲ್ಲಿ ತವರು ಮೈದಾನದಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಮುಂಬೈ ಇಂಡಯನ್ಸ್​ಗೆ ಸೋಲುಣಿಸಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಶುಭಾರಂಭ ಮಾಡುವ ಇರಾದೆಯಲ್ಲಿದೆ.RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್.

source https://tv9kannada.com/photo-gallery/cricket-photos/ipl-2023-rcbs-glenn-maxwell-plays-vs-mumbai-indians-kannada-news-zp-au50-547444.html

Views: 0

Leave a Reply

Your email address will not be published. Required fields are marked *