ಬೆಂಗಳೂರು:2022-23ನೇ ಸಾಲಿನ ಪಾಲಿಕೆಯ ಅಮೃತ ಮಹೋತ್ಸವ ಲ್ಯಾಪ್ ಟಾಪ್ ಗೆ ಈಗಾಗಲೇ ಅರ್ಜಿ ಸಲ್ಲಿಸಿರುವವರು ತಮ್ಮ ದಾಖಲೆಗಳನ್ನು ಅಪ್ ಲೋಡ್ ಮಾಡಲು ಅವಕಾಶ ನೀಡಿರುವ ಬಗ್ಗೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ 2022-23ನೇ ಸಾಲಿನಲ್ಲಿ ಅಮೃತ ಮಹೋತ್ಸವ ಲ್ಯಾಪ್ ಟಾಪ್ ಕಾರ್ಯಕ್ರಮದಡಿ ವಿದ್ಯಾರ್ಥಿಗಳು ಈಗಾಗಲೇ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ್ದು, ಸಮರ್ಪಕವಾಗಿ ಅಗತ್ಯವಿರುವ ದಾಖಲೆಗಳನ್ನು ಆನ್ ಲೈನ್ ಮುಖಾಂತರ ಸಲ್ಲಿಸದೇ ಇರುವ ವಿದ್ಯಾರ್ಥಿಗಳು ಮತ್ತೊಮ್ಮೆ ಅರ್ಹ ದಾಖಲೆಗಳನ್ನು ಅಪ್ ಲೋಡ್ ಮಾಡಲು ಕಾಲಾವಕಾಶ ನೀಡಲಾಗಿರುತ್ತದೆ.
ಅದರಂತೆ, ಪಾಲಿಕೆಯ ವೆಬ್ ಸೈಟ್ https://welfare.bbmpgov.in/ ಗೆ ಭೇಟಿ ನೀಡಿ ಅರ್ಜಿಯ ಪ್ರಸ್ತುತ ಸ್ಥತಿ ಹಾಗೂ ಅರ್ಜಿಯ ತಿದ್ದುಪಡಿಗೆ ಭೇಟಿ ನೀಡಿ ಈಗಾಗಲೇ ಅರ್ಜಿಯಲ್ಲಿ ನಮೂದಿಸಿರುವ ಮೊಬೈಲ್ ಸಂಖ್ಯೆ ಮತ್ತು ಅರ್ಜಿ ಸಂಖ್ಯೆ ನಮೂದಿಸುವ ಮೂಲಕ ಅರ್ಜಿ ಸ್ಥಿಯನ್ನು ತಿಳಿದು ತಿದ್ದುಪಡಿ ಮಾಡಿಕೊಳ್ಳಲು ಅಥವಾ ಹೊಸದಾಗಿ ದಾಖಲೆಗಳನ್ನು ಅಪ್ಲೋಡ್ ಮಾಡಲು ಅವಕಾಶ ಕಲ್ಪಿಸಲಾಗಿರುತ್ತದೆ.
ಸದರಿ ಕಾರ್ಯಕ್ರಮದಡಿ ಅಗತ್ಯವಾಗಿ ಬೇಕಾಗಿರುವ ದಾಖಲೆಗಳನ್ನು ಅಪ್ ಲೋಡ್ ಮಾಡಲು ದಿನಾಂಕ: 19.02.2024 ರಿಂದ ದಿನಾಂಕ: 29.02.2024ರ ವರೆಗೆ ಕಾಲಾವಕಾಶವನ್ನು ಮತ್ತೊಮ್ಮೆ ನೀಡಲಾಗಿದೆ. ಅಂತಿಮ ದಿನಾಂಕದ ನಂತರ ಅಗತ್ಯ ದಾಖಲೆಗಳು ಸಲ್ಲಿಕೆಯಾಗದೇ ಇರುವಂತಹ ಅರ್ಜಿಗಳನ್ನು ಅನರ್ಹವೆಂದು ಪರಿಗಣಿಸಲಾಗುವುದು.
*ಸೂಚನೆ:* ಹೆಚ್ಚಿನ ವಿವರಗಳಿಗೆ ಸಂಬಂಧಪಟ್ಟ ವಲಯದ ಸಹಾಯಕ ಕಂದಾಯ ಅಧಿಕಾರಿ ರವರನ್ನು ಸಂಪರ್ಕಿಸುಬಹುದೆಂದು ಕಲ್ಯಾಣ ವಿಭಾಗದ ವಿಶೇಷ ಆಯುಕ್ತರು ರವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿರುತ್ತಾರೆ.
*ಹೆಚ್ಚಿನ ಮಾಹಿತಿಗಾಗಿ ಪತ್ರಿಕಾ ಪ್ರಕಟಣೆಯ ಪ್ರತಿಯನ್ನು ಲಗತ್ತಿಸಿದೆ*
*ಹೆಚ್ಚಿನ ಸಂಪರ್ಕಕ್ಕಾಗಿ:*
*ಶ್ರೀ ಭಿಮಾ ಶಂಕರ್, ಸಹಾಯಕ ಆಯುಕ್ತರು, ಕಲ್ಯಾಣ ವಿಭಾಗ, ಬಿಬಿಎಂಪಿ.*
*ಮೊ.ಸಂ: 9480683063*
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1