Turmeric, Kumkum & Bangles Gift: ಈ ತಿಂಗಳ 25ರ ಶುಕ್ರವಾರ ಶ್ರೀ ವರಮಹಾಲಕ್ಷ್ಮಿ ವ್ರತ ನಡೆಯಲಿದೆ. ಈ ದಿನದಂದು ಎಲ್ಲಾ ಅಧಿಸೂಚಿತ ದೇವಸ್ಥಾನಗಳಿಗೆ ಆಗಮಿಸುವ ಮಹಿಳೆಯರಿಗೆ ಅರಿಶಿನ, ಕುಂಕುಮ ಮತ್ತು ಬಳೆಗಳನ್ನು ನೀಡಲಾಗುತ್ತದೆ.

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಮಹಿಳೆಯರಿಗೆ ಅರಿಶಿನ, ಕುಂಕುಮ ಮತ್ತು ಬಳೆಗಳನ್ನು ಗಿಫ್ಟ್ ನೀಡಲಾಗುತ್ತಿದೆ.
ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ರಾಜ್ಯದ ಮಹಿಳೆಯರಿಗೆ ಅರಿಶಿನ, ಕುಂಕುಮ ಮತ್ತು ಬಳೆಗಳು ಸಿಗಲಿವೆ. ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ದೇವಾಲಯಕ್ಕೆ ಆಗಮಿಸುವ ಮಹಿಳೆಯರಿಗೆ ಈ ಗಿಫ್ಟ್ ದೊರೆಯಲಿದೆ.
ಈ ತಿಂಗಳ 25ರ ಶುಕ್ರವಾರ ಶ್ರೀ ವರಮಹಾಲಕ್ಷ್ಮಿ ವ್ರತ ನಡೆಯಲಿದೆ. ಈ ದಿನದಂದು ಎಲ್ಲಾ ಅಧಿಸೂಚಿತ ದೇವಸ್ಥಾನಗಳಿಗೆ ಆಗಮಿಸುವ ಮಹಿಳೆಯರಿಗೆ ಅರಿಶಿನ, ಕುಂಕುಮ ಮತ್ತು ಬಳೆಗಳನ್ನು ನೀಡಲಾಗುತ್ತದೆ. ಆಯಾ ದೇವಾಲಯಗಳ ವತಿಯಿಂದ ಉತ್ತಮ ಗುಣಮಟ್ಟದ ಕಸ್ತೂರಿ, ಅರಿಶಿಣ- ಕುಂಕುಮ ಮತ್ತು ಹಸಿರು ಬಳೆಗಳನ್ನು ತಂದು ದೇವರ ಮುಂದಿಟ್ಟು ಪೂಜಿಸಿ, ಗೌರವ ಪೂರ್ವಕವಾಗಿ ಮಹಿಳೆಯರಿಗೆ ನೀಡಲು ಆದೇಶಿಸಲಾಗಿದೆ.
ಇದರ ವೆಚ್ಚವನ್ನು ಆಯಾ ದೇವಸ್ಥಾನದ ನಿಧಿಯಿಂದ ನಿಯಮಾನುಸಾರ ಭರಿಸಲು ತಿಳಿಸಲಾಗಿದೆ. ಪ್ರಸಾದ ರೂಪವಾದ ಅರಿಶಿಣ, ಕುಂಕುಮವನ್ನು ಕಾಗದದ ಲಕೋಟೆಗಳಲ್ಲಿ ಸರ್ಕಾರದ ಲಾಂಛನದೊಂದಿಗೆ ದೇವಾಲಯದ ಹೆಸರನ್ನು ಮುದ್ರಿಸಿ ದೇವಾಲಯಕ್ಕೆ ಆಗಮಿಸುವ ಮಹಿಳೆಯರಿಗೆ ನೀಡಲು ಸೂಚಿಸಲಾಗಿದೆ.