ಜಿ.ಎಸ್. ಅನಿಲ್ ಕುಮಾರ್ ಜನ್ಮದಿನ ಕಾರ್ಯಕ್ರಮದಲ್ಲಿ ಸರ್ಕಾರದ ವಿರುದ್ಧ ಸಂಸದ ಗೋವಿಂದ ಕಾರಜೋಳ ವಾಗ್ದಾಳಿ.
ವರದಿ ಮತ್ತು ಫೋಟೋ ಕೃಪೆ ವೇದಮೂರ್ತಿ ಭೀಮಸಮುದ್ರ ಮೊ : 8088076203
ಭೀಮಸಮುದ್ರ:
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಯಾವುದೇ ಅಭಿವೃದ್ಧಿ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಬರ ಪರಿಸ್ಥಿತಿ ಎದುರಾದರೂ ಗೋಶಾಲೆಗಳನ್ನು ಪ್ರಾರಂಭಿಸಿಲ್ಲ. ರೈತರ ಸಾಲವನ್ನೂ ಮನ್ನಾ ಮಾಡುತ್ತಿಲ್ಲ. ಸರ್ಕಾರ ನಿಷ್ಕ್ರಿಯವಾಗಿದೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ಎಂ. ಗೋವಿಂದ ಕಾರಜೋಳ ಟೀಕಿಸಿದರು.
ಭೀಮಸಮುದ್ರ ಗ್ರಾಮದ ಜಿ.ಎಂ. ಸಿದ್ದೇಶ್ವರ ಅವರ ನಿವಾಸದಲ್ಲಿ ನಡೆದ ಜಿ.ಎಸ್. ಅನಿಲ್ ಕುಮಾರ್ ಅವರ 48ನೇ ಜನ್ಮದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭಾಶಯ ಕೋರಿದ ಬಳಿಕ ಅವರು ಮಾತನಾಡಿದರು. ಜಿ.ಎಸ್. ಅನಿಲ್ ಕುಮಾರ್ ಅವರು ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಮುಂದಿನ ದಿನಗಳಲ್ಲಿ ಅವರಿಗೆ ಉತ್ತಮ ಅವಕಾಶಗಳು ದೊರೆಯಲಿ. ಭಗವಂತ ಅವರಿಗೆ ಐಶ್ವರ್ಯ, ಅಧಿಕಾರ ಹಾಗೂ ಯಶಸ್ಸನ್ನು ಕರುಣಿಸಲಿ. ಅವರ ತಾತ ಕೇಂದ್ರದಲ್ಲಿ ಲೋಕಸಭಾ ಸದಸ್ಯರಾಗಿದ್ದು, ತಂದೆಯವರು ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅದೇ ರೀತಿ ಅನಿಲ್ ಕುಮಾರ್ ಅವರಿಗೂ ಭವಿಷ್ಯದಲ್ಲಿ ಉತ್ತಮ ಅವಕಾಶಗಳು ದೊರೆಯಲಿ. ಪತ್ನಿಯೊಂದಿಗೆ ಸುಖವಾಗಿ ನೂರು ಕಾಲ ಬಾಳಲಿ ಎಂದು ಹಾರೈಸಿದರು.

WANTED – experienced MDS/BDS doctors for smyleXl dental clinic, Chitradurga.
Contact -9448668006
ಬಳಿಕ ಭೀಮಸಮುದ್ರ ಗ್ರಾಮದಲ್ಲಿ ಗಣಿಗಾರಿಕೆ ಹಾಗೂ ಲಾರಿಗಳ ಸಂಚಾರದಿಂದ ಉಂಟಾಗುತ್ತಿರುವ ಧೂಳಿನ ಸಮಸ್ಯೆಯ ಕುರಿತು ಮಾತನಾಡಿದ ಅವರು, ಗ್ರಾಮಸ್ಥರು ಕೈಗೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರ ತಮ್ಮ ಗಮನಕ್ಕೆ ಬಂದಿದೆ. ಈ ಕುರಿತು ಸರ್ಕಾರಕ್ಕೆ ಪತ್ರ ಬರೆದಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಗಣಿಗಾರಿಕೆಯಿಂದ ಉಂಟಾಗುವ ಧೂಳಿನಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ರೈತರ ಬೆಳೆಗಳಿಗೆ ಹಾನಿಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿನ ಮೂಲಗಳಾದ ಕೆರೆಕಟ್ಟೆಗಳು ಕಲುಷಿತಗೊಳ್ಳುವ ಆತಂಕವೂ ಇದೆ. ಅಲ್ಲದೆ, ಪರಿಸರದ ಮೇಲೂ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಈ ಎಲ್ಲ ಸಮಸ್ಯೆಗಳ ಕುರಿತು ಸರ್ಕಾರ ಹಾಗೂ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದೇನೆ ಎಂದು ತಿಳಿಸಿದರು.
ಜನರ ಆರೋಗ್ಯ, ರೈತರ ಬೆಳೆಗಳ ರಕ್ಷಣೆ ಹಾಗೂ ರಸ್ತೆಗಳ ಸಂರಕ್ಷಣೆಗೆ ಸರ್ಕಾರ ಮತ್ತು ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಳ್ಳಬೇಕು. ಗಣಿಗಾರಿಕೆ ಹಾಗೂ ಲಾರಿಗಳ ಸಂಚಾರದಿಂದ ಗ್ರಾಮಸ್ಥರಿಗೆ ಆಗುತ್ತಿರುವ ತೊಂದರೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ. ಕುಮಾರಸ್ವಾಮಿ ಮಾತನಾಡಿ, ಜಿ.ಎಸ್. ಅನಿಲ್ ಕುಮಾರ್ ಅವರು ಪಕ್ಷದ ಯುವ ನಾಯಕರಾಗಿದ್ದು, ಕಾರ್ಯಕರ್ತರಿಗೆ ಪ್ರೇರಣಾಶಕ್ತಿಯಾಗಿದ್ದಾರೆ. ಅವರು ಮುಂದಿನ ದಿನಗಳಲ್ಲಿ ಭವಿಷ್ಯದ ನಾಯಕರಾಗಿ ಹೊರಹೊಮ್ಮಲಿ. ಅವರಿಗೆ ಉತ್ತಮ ಆಯಸ್ಸು, ಆರೋಗ್ಯ ಹಾಗೂ ಯಶಸ್ಸು ದೊರೆಯಲಿ ಎಂದು ಹಾರೈಸಿದರು.
ಜನ್ಮದಿನದ ಕಾರ್ಯಕ್ರಮದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಟಿ.ಜಿ. ಅರುಣ್ ಕುಮಾರ್, ಮಾಜಿ ಉಪಾಧ್ಯಕ್ಷ ಶರತ್ ಪಟೇಲ್, ಬಿಜೆಪಿ ಮುಖಂಡರಾದ ಟಿ.ಜಿ. ಮಲ್ಲಿಕಾರ್ಜುನ್, ನಂದಿ ನಾಗರಾಜ್, ಜಿಲ್ಲಾ ಮಾಜಿ ಬಿಜೆಪಿ ಅಧ್ಯಕ್ಷ ಮುರಳಿ, ಮಾಧುರಿ ಗಿರೀಶ್, ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಸುರೇಶ್, ವೆಂಕಟೇಶ್ ಸೇರಿದಂತೆ ಪಕ್ಷದ ಮುಖಂಡರು, ಅಭಿಮಾನಿಗಳು, ಕಾರ್ಯಕರ್ತರು ಹಾಗೂ ಯುವಕರು ಭಾಗವಹಿಸಿ ಜಿ.ಎಸ್. ಅನಿಲ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶಯ ಕೋರಿದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Whats App Channel: https://whatsapp.com/channel/0029VbDbOsBD8SE2H0L3d40j