ಬಿಜೆಪಿ ಕಚೇರಿಯ ಸುದ್ದಿಗೋಷ್ಟಿಯಲ್ಲಿ ಜಾತಿ ಗಣತಿ ಹಾಗೂ ಒಳ ಮೀಸಲಾತಿ ಬಗ್ಗೆ ಬಿಜೆಪಿ ನಿಲುವು? ಗೋವಿಂದ ಕಾರಜೋಳ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ಅ. 9 ಒಳ ಮೀಸಲಾತಿ ವಿಚಾರದಲ್ಲಿ ಬಿಜೆಪಿದ್ದು ಸ್ಪಷ್ಟ ನಿಲುವಿದೆ. ನಾವು ಎಲ್ಲರಿಗೂ ನ್ಯಾಯ ಕೊಡಿಸುವ ಶಿಫಾರಸ್ಸು ಮಾಡಿದ್ದೇವೆ.
ಕಾಂಗ್ರೆಸ್‍ನವರು ಡಬಲ್ ಗೇಮ್ ಆಡುತ್ತಿದ್ದಾರೆ. ಮೊದಲು ಸಂವಿಧಾನ ತಿದ್ದುಪಡಿ ಆದ ಮೇಲೆ ಮಾಡುತ್ತೇವೆ ಅಂತ ಕಣ್ಣೆರೆಸುವ ತಂತ್ರ
ಮಾಡಿದರು. ಈಗ ಸುಪ್ರೀಂ ಕೋರ್ಟ್ ಆದೇಶ ಬಂದ ಮೇಲೆ ಚರ್ಚೆ ಮಾಡುತ್ತೇವೆ ಅಂತ ಹೇಳುತ್ತಾರೆ. ಅವರಿಗೆ ದಲಿತರಾಗಲಿ
ಹಿಂದುಳಿದವರಾಗಲಿ ಅಭೀವೃದ್ದಿ ಆಗುವುದು ಬೇಡ ಎನ್ನುವಂತಿದೆ ಎಂದು ಮಾಜಿ ಉಪ ಮುಖ್ಯಮಂತ್ರಿಗಳು ಸಂಸದರಾದ ಗೋವಿಂದ
ಕಾರಜೋಳ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.


ಚಿತ್ರದುರ್ಗ ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಜಾತಿ ಗಣತಿ ಹಾಗೂ ಒಳ ಮೀಸಲಾತಿ ಬಗ್ಗೆ ಬಿಜೆಪಿ ನಿಲುವಿನ ಕುರಿತು
ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನವರು ಬಿಜೆಪಿಯನ್ನು ಸಂವಿಧಾನ ವಿರೋಧಿ ಎಂದು ಬಿಂಬಿಸಲು ಪ್ರಯತ್ನ
ಮಾಡಿದರು. ಆದರೆ, ಜನರು ಸಬ್ ಕಾ ವಿಕಾಸ್, ಶ್ರೇಷ್ಠ ಭಾರತ, ಅಮೃತ ಕಾಲ ವಿಚಾರಗಳಿಗೆ ಜನರು ಬೆಂಬಲ ಕೊಟ್ಟಿದ್ದಾರೆ. ಅಭಿವೃದ್ಧಿ
ಜಾತಿ ಗಣತಿ ವಿಚಾರದಲ್ಲಿಯೂ ಅಷ್ಟೆ ಬೊಮ್ಮಾಯಿ, ಯಡಿಯೂರಪ್ಪ ಸ್ವೀಕಾರ ಮಾಡಲಿಲ್ಲ ಎಂದು ಹೇಳಿದ್ದಾರೆ. ಕಾಂತರಾಜು ಅವರು
ಸಿದ್ದರಾಮಯ್ಯ ಅವರ ಅವಧಿಯಲ್ಲಿ 2017 ರಲ್ಲಿಯೇ ವರದಿ ನೀಡಿದ್ದಾರೆ. ಹಿಂದುಳಿದ ವರ್ಗದ ಚಾಂಪಿಯನ್ ಅಂತ ಹೇಳಿಕೊಳ್ಳುವವರು
ಆಗ ಯಾಕೆ ಒಪ್ಪಿಕೊಳ್ಳಲಿಲ್ಲ ಎಂದು ಪ್ರಶ್ನಿಸಿದರು.

ಕಾಂತರಾಜ್ ಅವರು ಅಧ್ಯಯನ ಮಾಡಿ ವರದಿ ಸಿದ್ಧಪಡಿಸಿದ್ದರು. ಜಯಪ್ರಕಾಶ್ ಹೆಗಡೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದು ವರದಿ
ತಿದ್ದುಪಡಿ ಮಾಡಿಸಿಕೊಂಡಿದ್ದಾರೆ. ಜಾತಿಗಣತಿ ವಿಚಾರದಲ್ಲಿ ಬಿಜೆಪಿ ನಿಲುವು ಸ್ಪಷ್ಟವಾಗಿದೆ. ಹಿಂದುಳಿದ ವರ್ಗದವರ ಅಭಿವೃದ್ಧಿ ಆಗಬೇಕು.
ಇದು ಗೊಂದಲದ ಗೂಡಾಗಬಾರದು. ಸಮಾಜದಲ್ಲಿ ಗೊಂದಲ ಉಂಟು ಮಾಡಬಾರದು. ಸಿಎಂ ತಮ್ಮ ಮೇಲೆ ಮುಡಾ ಹಗರಣದ
ಆರೋಪ ಬಂದ ಕೂಡಲೆ ಅದರಿಂದ ದಾರಿ ತಪ್ಪಿಸಲು ಜಾತಿ ಗಣತಿ ವರದಿ ಪ್ರಸ್ತಾಪ ಮಾಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು
ಪ್ರಶ್ನಿಸಿದರು.

ಒಳ ಮೀಸಲಾತಿ ವಿಚಾರದಲ್ಲಿ ನಮ್ಮದು ಸ್ಪಷ್ಟ ನಿಲುವಿದೆ. ನಾವು ಎಲ್ಲರಿಗೂ ನ್ಯಾಯ ಕೊಡಿಸುವ ಶಿಫಾರಸ್ಸು ಮಾಡಿದ್ದೇವೆ. ಕಾಂಗ್ರೆಸ್
ನವರು ಡಬಲ್ ಗೇಮ್ ಆಡುತ್ತಿದ್ದಾರೆ. ಮೊದಲು ಸಂವಿಧಾನ ತಿದ್ದುಪಡಿ ಆದ ಮೇಲೆ ಮಾಡುತ್ತೇವೆ ಅಂತ ಕಣ್ಣೆರೆಸುವ ತಂತ್ರ ಮಾಡಿದರು.
ಈಗ ಸುಪ್ರೀಂ ಕೋರ್ಟ್ ಆದೇಶ ಬಂದ ಮೇಲೆ ಚರ್ಚೆ ಮಾಡುತ್ತೇವೆ ಅಂತ ಹೇಳುತ್ತಾರೆ. ಅವರಿಗೆ ದಲಿತರಾಗಲಿ ಹಿಂದುಳಿದವರಾಗಲಿ
ಆಗುವುದು ಬೇಡ ಎಂದ ಸಂಸದರು, ಒಳ ಮೀಸಲಾತಿಯ ಬಗ್ಗೆ ಬಿಜೆಪಿ ಹೋರಾಟವನ್ನು ರೂಪಿಸಿಲಿದೆ ಮೊದಲನೆ ಹಂತವಾಗಿ
ಮುಖ್ಯಮಂತ್ರಿಗಳಿಗೆ ಪಕ್ಷದವತಿಯಿಂದ ಮನವಿಯನ್ನು ಸಲ್ಲಿಸಲಾಗುವುದು. ತದ ನಂತರ ಇದರ ಬಗ್ಗೆ ರಾಜ್ಯದಲ್ಲಿ ಜಿಲ್ಲಾವಾರು
ಹೋರಾಟವನ್ನು ರೂಪಿಸಲಾಗುವುದು, ನಮ್ಮ ಜೊತೆಯಲ್ಲಿ ಹೋರಾಟದ ಸಂಘಟನೆಯವರು ಬಂದರೂ ಸಹಾ ಬರಬಹುದು ನಮ್ಮ
ಅಭ್ಯಂತರ ಇಲ್ಲ ಎಂದು ತಿಳಿಸಿದರು.

ಗೋಷ್ಟಿಯಲ್ಲಿ ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ನಗರಾಧ್ಯಕ್ಷ ನವೀನ್ ಚಾಲುಕ್ಯ,
ಜಿ.ಪಂ. ಮಾಜಿ ಅಧ್ಯಕ್ಷರಾದ ಮೀಸೆ ಮಹಾಲಿಂಗಪ್ಪ, ವಕ್ತಾರ ನಾಗರಾಜ್ ಬೇದ್ರೇ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *